ಸಾಂದರ್ಭಿಕ ಚಿತ್ರ 
ರಾಜ್ಯ

ಬೆಣ್ಣೆ ನಗರಿಯಲ್ಲಿ ಹೀನ ಕೃತ್ಯ: ಮಹಿಳೆಗೆ 'ಡ್ರಗ್ಸ್' ನೀಡಿ 'ಸಾಮೂಹಿಕ ಅತ್ಯಾಚಾರ'; 10 ಕಾಮುಕರ ಬಂಧನ

ಜೂನ್ 8 ರಂದು ಆರೋಪಿಗಳು ರೆಕಾರ್ಡ್ ಮಾಡಿದ್ದಾರೆ ಎನ್ನಲಾದ ಕುಡಿದ ಅಮಲಿನಲ್ಲಿರುವ ಮಹಿಳೆಯ ವಿಡಿಯೋವನ್ನು ವಿವಿಧ ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಂಡ ನಂತರ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ 41 ವರ್ಷದ ಮಹಿಳೆಗೆ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ 10 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಜೂನ್ 3 ರ ಸಂಜೆ ಬಸವಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಈ ಹೀನ ಕೃತ್ಯ ನಡೆದಿದೆ. ಆದರೆ ಜೂನ್ 8 ರಂದು ಆರೋಪಿಗಳು ರೆಕಾರ್ಡ್ ಮಾಡಿದ್ದಾರೆ ಎನ್ನಲಾದ ಕುಡಿದ ಅಮಲಿನಲ್ಲಿರುವ ಮಹಿಳೆಯ ವಿಡಿಯೋವನ್ನು ವಿವಿಧ ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಂಡ ನಂತರ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಿದ ಪೊಲೀಸರು, ಎಲ್ಲಾ 10 ಜನರನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಸತ್ರಸ್ತ ಮಹಿಳೆ ತನ್ನ ದೂರಿನಲ್ಲಿ, ಪತಿಯೊಂದಿಗೆ ಜಗಳವಾಡಿದ ನಂತರ ತನ್ನ ತವರಿನ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ, ಇಬ್ಬರು ಪುರುಷರು ಸಹಾಯ ಮಾಡುವ ನೆಪದಲ್ಲಿ ತನ್ನ ಬಳಿಗೆ ಬಂದರು ಎಂದು ಅವರು ಹೇಳಿದ್ದಾರೆ.

ಆ ಇಬ್ಬರು ತನಗೆ ತಂಪು ಪಾನೀಯವನ್ನು ನೀಡಿದರು. ಅದರಲ್ಲಿ ನಿದ್ರಾಜನಕ ಬೆರೆಸಲಾಗಿದೆ ಎಂದು ಶಂಕಿಸಲಾಗಿದ್ದು, ನಂತರ ಮಹಿಳೆ ಪ್ರಜ್ಞಾಹೀನಳಾಗಿದ್ದಾಳೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಂತರ ಆಕೆಯನ್ನು ಗ್ರಾಮದ ಹೊರವಲಯದಲ್ಲಿರುವ ಪ್ರತ್ಯೇಕ ಕೃಷಿ ಜಮೀನಿಗೆ ಕರೆದೊಯ್ಯಲಾಯಿತು. ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

ಆರೋಪಿಗಳು, ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಮತ್ತು ಕುಡಿದ ಮತ್ತಿನಲ್ಲಿದ್ದಾಗ ತನ್ನ ಛಾಯಾಚಿತ್ರ ಮತ್ತು ವಿಡಿಯೋಗಳನ್ನು ಸಹ ತೆಗೆದಿದ್ದಾರೆ ಎಂದು ಮಹಿಳೆ ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ವಿಡಿಯೋಗಳು ವೈರಲ್ ಆಗಿರುವ ಬಗ್ಗೆ ಗ್ರಾಮಸ್ಥರಿಂದ ತಿಳಿದುಕೊಂಡ ನಂತರ, ಮಹಿಳೆ ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ.

ದೂರಿನ ಆಧಾರದ ಮೇಲೆ, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಜೊತೆಗೆ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 70(ಸಾಮೂಹಿಕ ಅತ್ಯಾಚಾರ) ಸೇರಿದಂತೆ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಎಚ್‌ಟಿ ಹೇಳಿದ್ದಾರೆ.

"ಪ್ರಕರಣದಲ್ಲಿ ಎಲ್ಲಾ 10 ಆರೋಪಿಗಳನ್ನು ನಾವು ಬಂಧಿಸಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ" ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!