ತಂದೆ-ತಾಯಿ, ಮಗ ನಿಗೂಢ ಸಾವು 
ರಾಜ್ಯ

ಮಂಡ್ಯದಲ್ಲಿ ಮನಕಲಕುವ ಘಟನೆ: ತಂದೆ-ತಾಯಿ, ಮಗ ನಿಗೂಢ ಸಾವು; ಡೆತ್​ನೋಟ್​​ನಲ್ಲಿ ಶಕ್ತಿ ಯೋಜನೆ ಉಲ್ಲೇಖ! Video

ಮೃತರನ್ನು ಪ್ರಭಾಕರ್, ಅವರ ಪತ್ನಿ ಜ್ಯೋತಿ ಹಾಗೂ ನವವಿವಾಹಿತ ಪುತ್ರ ಸಂತೋಷ್ ಎಂದು ಗುರುತಿಸಲಾಗಿದೆ.

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ಜಿಲ್ಲೆಯ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ಮೃತರನ್ನು ಪ್ರಭಾಕರ್, ಅವರ ಪತ್ನಿ ಜ್ಯೋತಿ ಹಾಗೂ ನವವಿವಾಹಿತ ಪುತ್ರ ಸಂತೋಷ್ ಎಂದು ಗುರುತಿಸಲಾಗಿದೆ.

ಜ್ಯೋತಿ ಮತ್ತು ಸಂತೋಷ್ ಅವರು ಕಳೆದ ರಾತ್ರಿ ಮನೆಯಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇತ್ತ ಇಂದು ಬೆಳಗ್ಗೆ ಪ್ರಭಾಕರ್ ಅವರು ತಮ್ಮದೇ ಬಟ್ಟೆ ಅಂಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತ ಸಂತೋಷ್ ಅವರಿಗೆ ಕೇವಲ ಒಂದು ತಿಂಗಳ ಹಿಂದಷ್ಟೇ ಮದುವೆ ಆಗಿತ್ತು. ಘಟನಾ ಸ್ಥಳಕ್ಕೆ ಮಂಡ್ಯ ಪೂರ್ವ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂವರ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಆದರೆ ಸಾಲದ ಒತ್ತಡ ಹಾಗೂ ವ್ಯಾಪಾರದಲ್ಲಿ ಉಂಟಾದ ತೀವ್ರ ನಷ್ಟದಿಂದ ಬೇಸತ್ತ ಬಟ್ಟೆ ವ್ಯಾಪಾರಿಯಾಗಿರುವ ಪ್ರಭಾಕರ್ ಅವರು, ತಮ್ಮ ಪತ್ನಿ ಮತ್ತು ಮಗನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾವೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಡೆತ್​ನೋಟ್​​ನಲ್ಲಿ ಸರ್ಕಾರದ 'ಶಕ್ತಿ ಯೋಜನೆ' ಉಲ್ಲೇಖ

ಘಟನಾ ಸ್ಥಳಕ್ಕೆ ಮಂಡ್ಯ ಪೂರ್ವ ಠಾಣೆಯ ಪೊಲೀಸರು ಹಾಗೂ ಮಂಡ್ಯ ಎಸ್ಪಿ ಶೋಭರಾಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪ್ರಭಾಕರ್ ಅವರು ಬರೆದಿದ್ದಾರೆ ಎನ್ನಲಾದ ಆಘಾತಕಾರಿ 'ಡೆತ್‌ನೋಟ್' ಒಂದು ಪತ್ತೆಯಾಗಿದೆ. ಈ ಡೆತ್‌ನೋಟ್‌ನಲ್ಲಿ ಪ್ರಭಾಕರ್ ಅವರು ತಮ್ಮ ಸಾವಿಗೆ ಮತ್ತು ಕುಟುಂಬದ ಅಂತ್ಯಕ್ಕೆ ಆರ್ಥಿಕ ಸಂಕಷ್ಟವೇ ಕಾರಣ ಎಂದು ಉಲ್ಲೇಖಿಸಿದ್ದಾರೆ.

ಸರ್ಕಾರ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣದ 'ಶಕ್ತಿ ಯೋಜನೆ'ಯಿಂದಾಗಿ ಜನರು ಬೇರೆ ನಗರಗಳಿಗೆ ತೆರಳುತ್ತಿರುವುದರಿಂದ ಸ್ಥಳೀಯ ಬಟ್ಟೆ ವ್ಯಾಪಾರ ಸಂಪೂರ್ಣ ಕುಸಿದಿದೆ. ವ್ಯಾಪಾರ ಇಲ್ಲದ ಕಾರಣ ಖಾಸಗಿ ಫೈನಾನ್ಸ್‌ಗಳಲ್ಲಿ ಮಾಡಿದ್ದ ಸಾಲಕ್ಕೆ ಸರಿಯಾಗಿ ಬಡ್ಡಿ ಕಟ್ಟಲು ಸಾಧ್ಯವಾಗುತ್ತಿರಲಿಲ್ಲ. ಸಾಲ ಮರುಪಾವತಿ ಮಾಡದಿದ್ದರೆ ಖಾಸಗಿ ಫೈನಾನ್ಸ್ ಕಂಪನಿಗಳ ಏಜೆಂಟರು ಮನೆ ಬಾಗಿಲಿಗೆ ಬಂದು ಕಿರುಕುಳ ನೀಡುವ ಭಯವಿತ್ತು. ಮಾನ, ಮರ್ಯಾದೆಗೆ ಹೆದರಿ ಈ ನಿರ್ಧಾರ ಕೈಗೊಂಡಿರುವುದಾಗಿ ಬರೆಯಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿದೇಶಿ ನೌಕರರ ನೇಮಕಾತಿಗೆ ಅಮೆರಿಕ ಕತ್ತರಿ: H-1B ವೀಸಾ ನಿರ್ಬಂಧ ಮತ್ತೊಂದು ವರ್ಷಕ್ಕೆ ಮುಂದುವರಿಕೆ..!

ದೀದಿಗೆ ದಿನಕ್ಕೊಂದು ಶಾಕ್; ನಂದೀಗ್ರಾಮದ ಬಳಿಕ ಕೈಕೊಟ್ಟ ರೆಜಿನಗರ ಉಪಚುನಾವಣೆ ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ; ನಾಮಪತ್ರ ವಾಪಸ್

ರಷ್ಯಾಗೆ ಟ್ರಂಪ್‌ ಬಿಗ್ ಶಾಕ್: ಶೇ.100ರಷ್ಟು ಸುಂಕಕ್ಕೆ ಅಸ್ತು, ಭಾರತ-ಚೀನಾ ಮೇಲೂ ನಿರ್ಬಂಧದ ತೂಗುಗತ್ತಿ..!

ಮಂಗಳೂರಿನಲ್ಲಿ ಡಿಕೆಶಿ ಸಂಪುಟ ಸಭೆ, ತುಮಕೂರಿನಲ್ಲಿ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್: ಕೈ ಪಾಳಯದಲ್ಲಿ ಶುರುವಾಯ್ತಾ ಹೊಸ ಆಂತರಿಕ ತಂತ್ರಗಾರಿಕೆ..?

ರಾಜ್ಯದ 32,611 ಕೋಟಿ ರೂ. ಯೋಜನೆಗಳಿಗೆ ಗ್ರೀನ್‌ ಸಿಗ್ನಲ್‌: ಮಂಗಳೂರು ಸಂಪುಟ ಸಭೆಯಲ್ಲಿ ಸರ್ಕಾರ ಮಹತ್ವದ ಘೋಷಣೆ..!