ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ, ಮಹಿಳೆ ಬಂಧನ

ಕೇಂದ್ರ ಅಪರಾಧ ವಿಭಾಗದ ಮಹಿಳಾ ರಕ್ಷಣಾ ದಳದ ಪೊಲೀಸರಿಂದ ಈ ಕಾರ್ಯಾಚರಣೆ ನಡೆದಿದೆ. ಚಿಕ್ಕಬಾಣಾವರದ ರುದ್ರಮ್ಮ ಲೇಔಟ್‌ನಲ್ಲಿರುವ ಮನೆಯ ಮೇಲೆ ಇತ್ತೀಚೆಗೆ ದಾಳಿ ನಡೆಸಲಾಗಿದೆ.

ಬೆಂಗಳೂರು: ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಕೇಂದ್ರ ಅಪರಾಧ ವಿಭಾಗದ ಮಹಿಳಾ ರಕ್ಷಣಾ ದಳದ ಪೊಲೀಸರಿಂದ ಈ ಕಾರ್ಯಾಚರಣೆ ನಡೆದಿದೆ. ಚಿಕ್ಕಬಾಣಾವರದ ರುದ್ರಮ್ಮ ಲೇಔಟ್‌ನಲ್ಲಿರುವ ಮನೆಯ ಮೇಲೆ ಇತ್ತೀಚೆಗೆ ದಾಳಿ ನಡೆಸಲಾಗಿದ್ದು, ಅಲ್ಲಿ ವೇಶ್ಯಾವಾಟಿಕೆಯ ಉದ್ದೇಶಕ್ಕಾಗಿ ಮಹಿಳೆಯರನ್ನು ಇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆ ವೇಳೆ ಮಹಿಳೆಯರನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿದ ಅಥವಾ ಪ್ರೇರೇಪಿಸಿದ ಆರೋಪದ ಮೇಲೆ ಒಬ್ಬ ಮಹಿಳೆಯನ್ನು ವಶಕ್ಕೆ ಪಡೆಯಲಾಯಿತು. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇತರ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹೆಚ್ಚಿನ ಹಣವನ್ನು ಗಳಿಸುವ ಉದ್ದೇಶದಿಂದ ಹೆಂಗಸರ ಸಂಗ ಬಯಸುವ ಪುರುಷರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಅವರನ್ನು ಮನೆಗೆ ಕರೆಯಿಸಿ, ಅಲ್ಲಿ ವೇಶ್ಯಾವಾಟಿಕೆ ಚಟುವಟಿಕೆ ನಡೆಸಲಾಗುತಿತ್ತು ಎಂದು ಆರೋಪಿ ಮಹಿಳೆ ಒಪ್ಪಿಕೊಂಡಿದ್ದಾರೆ. ಈ ಪ್ರಕರಣ ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಾಧ್ಯಮಗಳಿಗೆ ಪ್ರವೇಶ ನಿರ್ಬಂಧಿಸುವ ಹಕ್ಕು ಯಾವುದೇ ಸರ್ಕಾರಕ್ಕೆ ಇಲ್ಲ: ಟ್ರಂಪ್ ವಿರುದ್ಧ ಒಂದಾದ ಅಮೆರಿಕದ ಮಾಧ್ಯಮಗಳು!

ಸೌಜನ್ಯ ಕೇಸ್‌ ಮರು ತನಿಖೆಗೆ ಸುಪ್ರೀಂ ಆದೇಶ: ಶ್ರೀ ಕ್ಷೇತ್ರ ಧರ್ಮಸ್ಥಳ ಹೇಳಿದ್ದು ಏನು?

ಬೆಳಗಾವಿ: 6 ಮಂದಿ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್; ವ್ಯಕ್ತಿ ಕೈಯಲ್ಲಿ ಬಕೆಟ್; CCTVಯಲ್ಲಿ ಸಿಕ್ತು ಸ್ಫೋಟಕ ತಿರುವು!

ಏಷ್ಯನ್ ಗೇಮ್ಸ್ 2026: ಎರಡನೇ ದಿನ ನಾಲ್ಕು ಪದಕ ಗೆದ್ದ ಭಾರತ, MMA ಸ್ಪರ್ಧೆಯಲ್ಲಿ ಕಂಚು ಗೆದ್ದು, ಇತಿಹಾಸ ಬರೆದ ಸುಚಿಕಾ ತರಿಯಾಲ್!

ಮಾಗಡಿ: ಚಕ್ರಬಾವಿ ಮರುಳಸಿದ್ದೇಶ್ವರ ಜಂಗಮ ಮಠದ ಸ್ವಾಮೀಜಿ ಲಿಂಗೈಕ್ಯ