ಕೋಟಾ ಶ್ರೀನಿವಾಸ ಪೂಜಾರಿ  
ರಾಜ್ಯ

ಸೂಪರ್ ಸಿಎಂ ರೀತಿ ವರ್ತಿಸಬೇಡಿ: ಗೃಹ ಸಚಿವರಿಗೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ನೀತಿ ಪಾಠ!

ಈ ಹಿಂದೆ ಸಂಘವನ್ನು ನೆಹರು ಅವರು ಬ್ಯಾನ್ ಮಾಡಿದ್ದರು. ಆ ಬಳಿಕ ಗಣರಾಜೋತ್ಸವದ ಪರೇಡ್ ನಲ್ಲಿ ಭಾಗಿಯಾಗಲು ಮನವಿ ಮಾಡಿದರು. ಇಂದಿರಾ ಗಾಂಧಿಯವರು ಬ್ಯಾನ್ ಮಾಡಲು ಪ್ರಯತ್ನ ಪಟ್ಟರು, ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ನವದೆಹಲಿ: ಆರ್ ಎಸ್ ಎಸ್ ಟೀಕಿಸುವ ಬದಲು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಡ್ರಗ್ಸ್, ಭಯೋತ್ಪಾದನೆ ನಿರ್ಮೂಲನೆ, ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಗಮನ ಹರಿಸಲಿ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಆರ್‌ಎಸ್‌ಎಸ್‌, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ. ಇದನ್ನು ಅವರು ಅರ್ಥ ಮಾಡಿಕೊಳ್ಳುತ್ತಾರೆ ಎನ್ನುವುದು ನನ್ನ ಭಾವನೆ. ಆರ್‌ಎಸ್‌ಎಸ್ ಕರ್ನಾಟಕ, ಭಾರತದಲ್ಲಿ ಮಾತ್ರ ಇಲ್ಲ. ಜಗತ್ತಿನ ಐವತ್ತು ದೇಶಗಳಲ್ಲಿ ಅದರ ಶಾಖೆಗಳಿವೆ ಎಂದರು.

ಆರ್‌ಎಸ್‌ಎಸ್‌ ನೋಂದಣಿ ಬಗ್ಗೆ ಸಂಘದ ಹಿರಿಯರು ಮಾತನಾಡಿದ್ದಾರೆ. ಅದಕ್ಕೆ ನಾವು ಉತ್ತರ ಕೊಡುವ ಅಗತ್ಯ ಇಲ್ಲ, ಸಂಘವೇ ಅದಕ್ಕೆ ಉತ್ತರ ನೀಡುತ್ತದೆ. ಈ ಹಿಂದೆ ಸಂಘವನ್ನು ನೆಹರು ಅವರು ಬ್ಯಾನ್ ಮಾಡಿದ್ದರು. ಆ ಬಳಿಕ ಗಣರಾಜೋತ್ಸವದ ಪರೇಡ್ ನಲ್ಲಿ ಭಾಗಿಯಾಗಲು ಮನವಿ ಮಾಡಿದರು. ಇಂದಿರಾ ಗಾಂಧಿಯವರು ಬ್ಯಾನ್ ಮಾಡಲು ಪ್ರಯತ್ನ ಪಟ್ಟರು, ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬೇಕಾದಷ್ಟು ಸಮಸ್ಯೆಗಳಿವೆ, ಗೃಹ ಸಚಿವರು ಆಕಡೆ ಗಮನ ಹರಿಸಲಿ, ಅದನ್ನು ಬಿಟ್ಟು ಸೂಪರ್ ಸಿಎಂ ರೀತಿ ವರ್ತಿಸುವುದು ಬೇಡ ಎಂದು ಶ್ರೀನಿವಾಸ ಪೂಜಾರಿ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Repo ದರದಲ್ಲಿ ಯಾವುದೇ ಬದಲಾವಣೆ ಇಲ್ಲ; ಶೇ. 5.25ರಲ್ಲೇ ಯಥಾಸ್ಥಿತಿ ಕಾಯ್ದುಕೊಂಡ RBI, ಜಾಗತಿಕ ಅನಿಶ್ಚಿತತೆ ನಡುವೆ ತಟಸ್ಥ ನಿಲುವು ಮುಂದುವರಿಕೆ..!

Hormuz ಜಲಸಂಧಿ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ: ಅಂತಿಮ ಘಟ್ಟದಲ್ಲಿ ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಇಂದೇ ಅಧಿಕೃತ ಘೋಷಣೆ ಸಾಧ್ಯತೆ..!

Yemen ಕರಾವಳಿಯಲ್ಲಿ ಭಾರತೀಯ ಧ್ವಜದ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ; ಸಮುದ್ರದಲ್ಲಿ ಮುಳುಗಿದ ಹಡಗು, 13 ಮಂದಿ ಭಾರತೀಯರು ಸೇರಿ ಎಲ್ಲಾ 14 ಸಿಬ್ಬಂದಿ ರಕ್ಷಣೆ..!

Hormuz ಜಲಸಂಧಿ ವಿವಾದ: 'ನಮ್ಮ ಒಪ್ಪಿಗೆ ಇಲ್ಲದೆ ಹಡಗು ಸಂಚಾರಕ್ಕೆ ಅವಕಾಶವೇ ಇಲ್ಲ'; ಯಾರ ಅನುಮತಿ ಬೇಕಿಲ್ಲ ಎಂದ ಅಮೆರಿಕಕ್ಕೆ Iran ತಿರುಗೇಟು..!

ಮಾಧ್ಯಮಗಳ ಧ್ವನಿ ಅಡಗಿಸಲು ಪಾಕ್‌ ಮುಂದು? ಅನುಮತಿ ಇಲ್ಲದೆ ವರದಿಗಾರಿಕೆಗೆ ನಿಷೇಧ; ಸತ್ಯ ಮುಚ್ಚಿಡಲು ವಿದೇಶಿ ಮಾಧ್ಯಮಗಳ ರೆಕ್ಕೆ ಕತ್ತರಿಸಿದ ಸರ್ಕಾರ..!