ನಟ ಪ್ರಕಾಶ್ ರಾಜ್ 
ರಾಜ್ಯ

ಧರ್ಮಸ್ಥಳಕ್ಕೆ ಕಳಂಕ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು: 200 ಕೋಟಿ ರೂ ಬಳಸಿ ಕೇರಳದಿಂದ ಷಡ್ಯಂತ್ರ?

ಧರ್ಮಸ್ಥಳಕ್ಕೆ ಕಳಂಕ ತರುವ ಪ್ರಕರಣದಲ್ಲಿ ಮತ್ತೊಂದು ಸ್ಫೋಟಕ ಸಂಗತಿ ಹೊರಬಿದ್ದಿದೆ. ಚಿನ್ನಯ್ಯನನ್ನು ಬಳಸಿಕೊಂಡು ಬುರುಡೆ ಗ್ಯಾಂಗ್ ಹೇಗೆಲ್ಲ ಸಂಚು ರೂಪಿಸಿತ್ತು ಎಂಬ ವಿಚಾರ ಬಯಲಾಗಿದೆ.

ಬೆಂಗಳೂರು: ಧರ್ಮಸ್ಥಳಕ್ಕೆ ಕಳಂಕ ತರುವ ಪ್ರಕರಣದಲ್ಲಿ ಮತ್ತೊಂದು ಸ್ಫೋಟಕ ಸಂಗತಿ ಹೊರಬಿದ್ದಿದೆ. ಚಿನ್ನಯ್ಯನನ್ನು ಬಳಸಿಕೊಂಡು ಬುರುಡೆ ಗ್ಯಾಂಗ್ ಹೇಗೆಲ್ಲ ಸಂಚು ರೂಪಿಸಿತ್ತು ಎಂಬ ವಿಚಾರ ಬಯಲಾಗಿದೆ. ಮೊದಲು ಬುರುಡೆ ಗ್ಯಾಂಗ್ ಜೊತೆಗಿದ್ದ ಚಿನ್ನಯ್ಯ ಇದೀಗ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯಲ್ಲಿ ಹಲವು ಸ್ಫೋಟಕ ಸಂಗತಿ ಹೊರಬಿದ್ದಿದೆ. ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಹೆಸರು ಕೇಳಿಬಂದಿದೆ. ಅಲ್ಲದೆ ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಮಾಡಲು 200 ಕೋಟಿ ಬಜೆಟ್ ಮತ್ತು ಕೇರಳದ ಹಣದ ಲಿಂಕ್ ಪತ್ತೆಯಾಗಿದೆ.

ಚಿನ್ನಯ್ಯ ಹೇಳಿಕೆಯಲ್ಲಿ, ಒಂದು ದಿನ ರಾತ್ರಿ ಸುಮಾರು 8:00 ಗಂಟೆಗೆ ಬುರುಡೆ ಗ್ಯಾಂಗ್ ಸದಸ್ಯ ಗಿರೀಶ್ ಮಟ್ಟಣ್ಣವರ್ ನಟ ಪ್ರಕಾಶ್ ರಾಜ್ ಗೆ ದೂರವಾಣಿ ಕರೆ ಮಾಡಿ ನನಗೆ ಫೋನ್ ನೀಡಿದರು. ಪ್ರಕಾಶ್ ರಾಜ್ ತಮಿಳಿನಲ್ಲಿ ಮಾತನಾಡಿ, ಗಿರೀಶ್ ಮಟ್ಟಣ್ಣವರ್ ಅವರು ಏನು ಹೇಳಬೇಕೆಂದು ಸೂಚಿಸಿದ್ದಾರೋ ಅದನ್ನು ಅಧಿಕಾರಿಗಳ ಮುಂದೆ ಹೇಳಬೇಕು. ಅವರು ಹೇಳಿದಂತೆ ಕೇಳಿದರೆ ಜೂನ್ 29ರಂದು ಬಂದು ಅಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದರು. ಹೀಗೆಂದು ಹೇಳಿದ್ದಾಗಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿ ಚಿನ್ನಯ್ಯ ರಿಟ್ ಅರ್ಜಿಯಲ್ಲಿ ತಿಳಿಸಿದ್ದಾನೆ.

ಧರ್ಮಸ್ಥಳದ ವಿರುದ್ಧ ಪಿತೂರಿ ಮಾಡಲು ಒಟ್ಟು 200 ಕೋಟಿ ರೂಪಾಯಿಗಳ ಬಜೆಟ್ ಸಿದ್ಧವಾಗಿತ್ತು. ಈ ಸಂಚಿನ ಭಾಗವಾಗಿ ನನಗೆ 50 ಲಕ್ಷ ರೂಪಾಯಿ ಕೊಡುವ ಆಮಿಷವನ್ನು ಮಹೇಶ್ ಶೆಟ್ಟಿ ತಿಮರೋಡಿ ಒಡ್ಡಿದ್ದರು. ಈ ಷಡ್ಯಂತ್ರಕ್ಕಾಗಿ ಕೇರಳದಿಂದ ಹಣ ಬಂದಿತ್ತು. ಇನ್ನು ಚಿತ್ರದುರ್ಗದ ರಮಾ ನಾಗರಾಜ್ ಎಂಬುವವರೂ ಕೂಡ ಇದಕ್ಕೆ ಹಣ ನೀಡಿದ್ದಾರೆ. ತಮ್ಮ ಪತ್ನಿಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿರುವ ಹಾಗೂ ನಗದು ಹಣದ ವಹಿವಾಟಿನ ಸಂಪೂರ್ಣ ವಿವರಗಳನ್ನು ಚಿನ್ನಯ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದಾನೆ.

ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲಗೌಡ, ಜಯಂತ್ ಷಡ್ಯಂತ್ರದ ರೂವಾರಿಗಳಾಗಿದ್ದಾರೆ. ಆರೋಪಿಗಳ ಹೆಸರು ಹೇಳಿದರೂ ಎಸ್‌ಐಟಿ ಕ್ರಮ ಕೈಗೊಂಡಿಲ್ಲ ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ಹೈಕೋರ್ಟ್ ವಿಚಾರಣೆಯನ್ನು ಜೂನ್ 29ಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ

ಯುದ್ಧದ ಕಿಡಿ ಹೊತ್ತಿಸಲು ಬಂದಿತ್ತಾ ಪಾಕ್ ನೌಕಾಪಡೆ ಹಡಗು? ಭಾರತೀಯ ಕ್ಯಾಪ್ಟನ್ ಚಾಣಾಕ್ಷತನದಿಂದ ತಪ್ಪಿದ ಭಾರೀ ದುರಂತ!