ಡಿಕೆ.ಶಿವಕುಮಾರ್  
ರಾಜ್ಯ

ರಾಜ್ಯ ಆಡಳಿತದ ಕಾರ್ಯಕ್ಷಮತೆಗೆ ಒತ್ತು: ಜೂನ್ 13ರಂದು ಮಹತ್ವದ ಸಭೆ; DC-CEOಗಳೊಂದಿಗೆ CM ಸಮಾಲೋಚನೆ!

ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಸಿದ್ಧತೆ, ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಸರ್ಕಾರದ ಪ್ರಮುಖ ಯೋಜನೆಗಳ ಅನುಷ್ಠಾನ ಹಾಗೂ ಜಿಲ್ಲಾಮಟ್ಟದಲ್ಲಿ ಆಡಳಿತಾತ್ಮಕ ಸಮನ್ವಯ ಕುರಿತು ಸಭೆಯಲ್ಲಿ ಪರಿಶೀಲನೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.

ಬೆಂಗಳೂರು: ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ರಾಜ್ಯದ ಜಿಲ್ಲಾಡಳಿತದೊಂದಿಗೆ ನಡೆಸುತ್ತಿರುವ ಮೊದಲ ಮಹತ್ವದ ಸಮಾಲೋಚನಾ ಸಭೆ ಜೂನ್ 13ರಂದು ವಿಧಾನಸೌಧದಲ್ಲಿ ನಡೆಯಲಿದೆ.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು (ಡಿಸಿ) ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (ಸಿಇಒ) ಜೊತೆ ‘ಪರಿಶೀಲನಾ ಸಭೆ’ ನಡೆಸಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ.

ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಸಿದ್ಧತೆ, ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಸರ್ಕಾರದ ಪ್ರಮುಖ ಯೋಜನೆಗಳ ಅನುಷ್ಠಾನ ಹಾಗೂ ಜಿಲ್ಲಾಮಟ್ಟದಲ್ಲಿ ಆಡಳಿತಾತ್ಮಕ ಸಮನ್ವಯ ಕುರಿತು ಸಭೆಯಲ್ಲಿ ಪರಿಶೀಲನೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನ, ಮೂಲಸೌಕರ್ಯ ಕಾಮಗಾರಿಗಳ ವೇಗ, ಅನುದಾನ ಬಳಕೆ ಹಾಗೂ ಜನಪರ ಯೋಜನೆಗಳ ಪರಿಣಾಮಕಾರಿ ಜಾರಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸ್ಪಷ್ಟ ನಿರ್ದೇಶನ ನೀಡುವ ಸಾಧ್ಯತೆ ಇದೆ.

ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ಹಿರಿಯ ಅಧಿಕಾರಿಗಳ ಭಾಗವಹಿಸಲಿದ್ದು, ಆಡಳಿತದಲ್ಲಿ ಸಮಗ್ರ ಸಮನ್ವಯಕ್ಕೆ ಒತ್ತು ನೀಡುವ ಪ್ರಯತ್ನ ನಡೆಯಲಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಆಡಳಿತಾತ್ಮಕ ಮಟ್ಟದಲ್ಲಿ ಹಲವು ಮಹತ್ವದ ಬದಲಾವಣೆಗಳನ್ನು ಕೈಗೊಂಡಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಆಡಳಿತದ ವೇಗ ಹೆಚ್ಚಿಸಲು ಒತ್ತು ನೀಡುತ್ತಿದ್ದಾರೆ.

ಗುಪ್ತಚರ ವಿಭಾಗದ ಮುಖ್ಯಸ್ಥರ ನೇಮಕ ಸೇರಿದಂತೆ ಹಲವು ಪ್ರಮುಖ ಹುದ್ದೆಗಳಲ್ಲಿ ಬದಲಾವಣೆಗಳನ್ನು ಮಾಡಿರುವ ಸರ್ಕಾರ, ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕೆ ಹೊಸ ಚೈತನ್ಯ ನೀಡಲು ಮುಂದಾಗಿದೆ ಎಂದು ರಾಜಕೀಯ ವಿಶ್ಲೇಷಕ ಬಿ.ಎಸ್. ಮೂರ್ತಿ ಅವರು ಹೇಳಿದ್ದಾರೆ.

ಆಗಸ್ಟ್‌ನಲ್ಲಿ ನಡೆಯಲಿರುವ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಚುನಾವಣೆಗಳ ಹಿನ್ನೆಲೆಯಲ್ಲೂ ಈ ಸಭೆ ಮಹತ್ವ ಪಡೆದುಕೊಂಡಿದೆ.

ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ಕಾರ್ಯಕ್ಷಮತೆಯಲ್ಲಿ ಶೀಘ್ರ ಫಲಿತಾಂಶ ತೋರಿಸುವ ಉದ್ದೇಶವನ್ನು ಮುಖ್ಯಮಂತ್ರಿ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಭೆಯ ಮೂಲಕ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಹೊಸ ಕಾರ್ಯವಿಧಾನ (SOP) ಹಾಗೂ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ನೀಡುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು