ಆರ್. ಅಶೋಕ್, ಡಿಕೆ ಶಿವಕುಮಾರ್ 
ರಾಜ್ಯ

'ಅಶೋಕ್ ಕಸ ಮಾಫಿಯಾ ಗ್ಯಾಂಗ್‌ನ ವಕ್ತಾರ; ನಾನು ಸಿಎಂ ಆಗಿರುವುದನ್ನು ಸಹಿಸಲಾಗದೇ ಅಸೂಯೆ ರಾಜಕೀಯ'; Video

ಲಿಂಬಾವಳಿ ಅವರು ಕಸ ಸಾಗಿಸುವುದನ್ನೇ ನಿಲ್ಲಿಸಿದ್ದರು. ನಾವು ಶಾಸಕರ ಒತ್ತಡದ ಮೇರೆಗೆ 800 ಕೋಟಿ ಅನುದಾನ ನೀಡಿದ್ದೇವೆ. ಕಸದಿಂದ ಗ್ಯಾಸ್ ಹಾಗೂ ವಿದ್ಯುತ್ ಉತ್ಪಾದನೆ ಆಗಬೇಕು. ಅವರು ಯಾವ ತನಿಖೆ ಬೇಕಾದರೂ ಮಾಡಲಿ.

ನವದೆಹಲಿ: ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರು ಬೆಂಗಳೂರು ಕಸದ ಮಾಫಿಯಾ ಗ್ಯಾಂಗಿನ ಏಜೆಂಟರಾಗಿ ಮಾತನಾಡುತ್ತಿದ್ದಾರೆ. ಈ ಮಾಫಿಯಾ ನಿಯಂತ್ರಿಸಬೇಕು ಎಂದು ನಾನು ಈ ಹಿಂದೆ ಅವರೊಂದಿಗೆ ಚರ್ಚೆ ಮಾಡಿದ್ದೆ. ಈಗ ಅಶೋಕ್ ಅವರು ಮಾಫಿಯಾದ ವಕ್ತಾರರಾಗಿರುವುದು ನನಗೆ ಆಶ್ಚರ್ಯವಾಗಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು.

ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಕಸದ ಟೆಂಡರ್ ನಲ್ಲಿ 10 ಸಾವಿರ ಕೋಟಿ ಕಿಕ್ ಬ್ಯಾಕ್ ಪಡೆಯಲಾಗಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರ ಆರೋಪದ ಬಗ್ಗೆ ಕೇಳಿದಾಗ, ಅವರಿಗೆ ಏನೇನು ಕಸ ಬೇಕೋ ಲಾರಿಯಲ್ಲಿ ತುಂಬಿ ಕಳುಹಿಸಿಕೊಡೋಣ. ಈ ಹಿಂದೆ ಕುಮಾರಸ್ವಾಮಿ ಅವರು ಇದನ್ನೇ ಮಾತನಾಡಿದ್ದರು. ಬೆಂಗಳೂರಿನಲ್ಲಿ ದೊಡ್ಡ ಕಸದ ಲಾಭಿ ಇದೆ.

ಅವರ ಕಾಲದಲ್ಲಿ ಯಾಕೆ ಕಸದ ಟೆಂಡರ್ ಮಾಡಲು ಆಗಲಿಲ್ಲ? ಈ ಹಿಂದೆ 14-15 ಜನರಿಗೆ ಕಸದಿಂದ ಇಂಧನ ಉತ್ಪಾದನೆಗೆ ಅವಕಾಶ ನೀಡಿದ್ದೆವು. ಒಬ್ಬರೂ ಯಶಸ್ವಿಯಾಗಿರಲಿಲ್ಲ. ನಾನು ಈ ನಿರ್ಧಾರ ಕೈಗೊಳ್ಳುವ ಮುನ್ನ ದೆಹಲಿ, ಹೈದರಾಬಾದ್, ಚೆನ್ನೈ ಗೆ ಹೋಗಿ ನೋಡಿದ್ದೇನೆ” ಎಂದು ತಿಳಿಸಿದರು.

ಈಗ ಕಸ ವಿಲೇವಾರಿಗೆ 6 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡುತ್ತಾರೆ. ನಮ್ಮಲ್ಲಿ ಎಲ್ಲೂ ಜಾಗ ಲಭ್ಯವಾಗಲಿಲ್ಲ. ಹೀಗಾಗಿ ದೊಡ್ಡಬಳ್ಳಾಪುರದಲ್ಲಿ ಜಾಗ ಖರೀದಿ ಮಾಡಲು ತೀರ್ಮಾನಿಸಲಾಗಿದೆ. ಇನ್ನು ನೈಸ್ ಬಿಟ್ಟಿರುವ ಜಾಗ ಪಡೆದಿದ್ದೇವೆ. ಬೇರೆ ಕಡೆ ಯಾರಾದರೂ ಜಾಗ ಕೊಡಲು ಸಿದ್ಧರಿದ್ದರೆ ಮುಂದೆ ಬನ್ನಿ ಎಂಬ ಕರೆಯನ್ನು ನೀಡಿದ್ದೇನೆ.

ಲಿಂಬಾವಳಿ ಅವರು ಕಸ ಸಾಗಿಸುವುದನ್ನೇ ನಿಲ್ಲಿಸಿದ್ದರು. ನಾವು ಶಾಸಕರ ಒತ್ತಡದ ಮೇರೆಗೆ 800 ಕೋಟಿ ಅನುದಾನ ನೀಡಿದ್ದೇವೆ. ಕಸದಿಂದ ಗ್ಯಾಸ್ ಹಾಗೂ ವಿದ್ಯುತ್ ಉತ್ಪಾದನೆ ಆಗಬೇಕು. ಅವರು ಯಾವ ತನಿಖೆ ಬೇಕಾದರೂ ಮಾಡಲಿ. ಎಲ್ಲಾದರೂ ವರದಿ ನೀಡಲಿ. 36 ಸಾವಿರ ಕೋಟಿ ಅಲ್ಲ, ಕೇವಲ 10 ಕೋಟಿ ಹಣ ದುರ್ಬಳಕೆಯಾದರೂ ತನಿಖೆ ಮಾಡಿಸಲಿ, ಎದುರಿಸಲು ನಾನು ಸಿದ್ಧ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!