ಮಾಜಿ ಸಿಎಂ ಸಿದ್ದರಾಮಯ್ಯ 
ರಾಜ್ಯ

ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ವಿವಾದ: 'ಯಾವುದೇ ತಾರತಮ್ಯ ಮಾಡಿಲ್ಲ'; ಸಿದ್ದರಾಮಯ್ಯ ಸ್ಪಷ್ಟನೆ

ಅನುದಾನ ಬಿಡುಗಡೆ ಮಾಡಲು ಸರ್ಕಾರದಿಂದ ಮಾರ್ಗ ಸೂಚಿಗಳನ್ನು ಹೊರಡಿಸಲಾಗಿದೆ. ಈ ಮಾರ್ಗಸೂಚಿಗಳ ಅನುಸಾರ ಅನುದಾನವನ್ನು 3 ಹಂತದಲ್ಲಿ ಪ್ರಗತಿಯನ್ನು ಪರಿಶೀಲನೆ ಮಾಡಿ ಅನುದಾನ ಬಿಡುಗಡೆ ಮಾಡಲಾಗುವುದು.

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮಂಜೂರಾಗಿರುವ ಸಮುದಾಯ ಭವನಗಳು ಹಾಗೂ ವಿದ್ಯಾರ್ಥಿ ನಿಲಯಗಳ ಪೈಕಿ ಹೆಚ್ಚಿನವು ಕುರುಬ ಸಮುದಾಯಕ್ಕೆ ಸೇರಿರುವ ಸಂಘ-ಸಂಸ್ಥೆಗಳಿಗೆ ಸಿಕ್ಕಿವೆ ಎಂಬ ವಿವಾದ ಕೇಳಿಬಂದಿದ್ದು, ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಸಮುದಾಯದ ವಿರುದ್ಧ ಉದ್ದೇಶಪೂರ್ವಕ ತಾರತಮ್ಯ ಮಾಡಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ವಿವಿಧ ಹಿಂದುಳಿದ ವರ್ಗಗಳ ಸಂಘಟನೆಗಳು ಮತ್ತು ಸಂಘಗಳ ಮನವಿಗಳನ್ನು ಪರಿಶೀಲಿಸಿ, ಸುಮಾರು 155 ಸಂಘ-ಸಂಸ್ಥೆಗಳಿಗೆ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕಾಗಿ 71.85 ಕೋಟಿ ರೂ.ವೆಚ್ಚದ ಪ್ರಾಥಮಿಕ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿವಿಧ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳು ನೀಡಿರುವ ಮನವಿಗಳನ್ನು ಪರಿಶೀಲಿಸಿ ಸುಮಾರು 155 ಹಿಂದುಳಿದ ವರ್ಗಗಳ ಸಂಘ - ಸಂಸ್ಥೆಗಳಿಗೆ ರೂ.71.85 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಪೂರ್ವಭಾವಿ ಮಂಜೂರಾತಿ ನೀಡಿದೆ.

ಇದೇನು ಫಲಾನುಭವಿಗಳ ಅಂತಿಮ ಪಟ್ಟಿ ಅಲ್ಲ. ಬೇರೆ ಬೇರೆ ಹಿಂದುಳಿದ ಜಾತಿಗಳು ನೀಡಿರುವ ಮನವಿಗಳನ್ನು ಕೂಡಾ ಪರಿಶೀಲಿಸಿ, ಅವುಗಳಿಗೆ ಮುಂದಿನ ದಿನಗಳಲ್ಲಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಇಲಾಖೆಗೆ ಸಲ್ಲಿಸಲಾಗಿರುವ ಮನವಿಗಳಲ್ಲಿ ಕುರುಬ ಸಮುದಾಯಕ್ಕೆ ಸೇರಿರುವ ಮನವಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣಕ್ಕೆ ಆ ಸಮುದಾಯಕ್ಕೆ ಹೆಚ್ಚಿನ ಅನುದಾನ ಸಂದಾಯವಾಗಿದೆಯೇ ಹೊರತು ಉದ್ದೇಶಪೂರ್ವಕವಾಗಿ ಯಾವುದೇ ಬಗೆಯ ತಾರತಮ್ಯ ಮಾಡಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕುರುಬ ಜನಾಂಗದ ಜೊತೆಗೆ ಮಡಿವಾಳ, ಲಿಂಗಾಯಿತ, ಒಕ್ಕಲಿಗ, ಬೆಸ್ತ, ಬಲಿಜ, ಗೊಲ್ಲ, ಜೆಟ್ಟಿ, ಕುಂಬಾರ, ಅರಸು, ಹೆಳವ, ಸವಿತಾ ಸಮಾಜ, ಉಪ್ಪಾರ, ಗಾಣಿಗ, ಕುರುಹಿನ ಶೆಟ್ಟಿ, ಹಾಲಕ್ಕಿ, ರೆಡ್ಡಿ ಈ ಜನಾಂಗದವರ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ಕಟ್ಟಡಗಳ ನಿರ್ಮಾಣಕ್ಕೆ ಪೂರ್ವಭಾವಿ ಆದೇಶವನ್ನು ಹೊರಡಿಸಲಾಗಿದೆ.

ಈ ಆದೇಶವು ಅನುದಾನದ ಬಿಡುಗಡೆಯ ಆದೇಶ ಅಲ್ಲ. ಅನುದಾನ ಬಿಡುಗಡೆಗೆ ಸಂಘ ಸಂಸ್ಥೆಗಳು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮುಖಾಂತರ ಜಮೀನು /ನಿವೇಶನ ಅವರ ಹೆಸರಿನಲ್ಲಿ ಇರುವ ಬಗ್ಗೆ ಸ್ಥಳೀಯ ಪುರಸಭೆ / ಪಂಚಾಯತಿಯಿಂದ ಕಟ್ಟಡ ಲೈಸೆನ್ಸ್‌, ಸಂಘ ಸಂಸ್ಥೆಯ 3 ವರ್ಷದ ಆಡಿಟ್‌ ವರದಿ ಇತ್ಯಾದಿ ದಾಖಲಾತಿಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಕಳುಹಿಸಬೇಕಾಗುತ್ತದೆ.

ಅನುದಾನ ಬಿಡುಗಡೆ ಮಾಡಲು ಸರ್ಕಾರದಿಂದ ಮಾರ್ಗ ಸೂಚಿಗಳನ್ನು ಹೊರಡಿಸಲಾಗಿದೆ. ಈ ಮಾರ್ಗಸೂಚಿಗಳ ಅನುಸಾರ ಅನುದಾನವನ್ನು 3 ಹಂತದಲ್ಲಿ ಪ್ರಗತಿಯನ್ನು ಪರಿಶೀಲನೆ ಮಾಡಿ ಅನುದಾನ ಬಿಡುಗಡೆ ಮಾಡಲಾಗುವುದು. ಕಾಮಗಾರಿಯ ಪ್ರಗತಿಯನ್ನು ಪ್ರತಿವರ್ಷ ಪರಿಶೀಲಿಸಿ ಅದರ ಆಧಾರದಲ್ಲಿ ಮಂಜೂರಾಗಿರುವ ಹಣವನ್ನು ಬಿಡುಗಡೆ ಮಾಡಲಾಗುವುದು.

ಇದು ನಿರಂತರವಾಗಿ ನಡೆಯುತ್ತಿರುವ ಪ್ರಕ್ರಿಯೆಯಾಗಿದೆ. ಈ ರೀತಿ ಅನುದಾನವನ್ನು ಬಿಡುಗಡೆ ಮಾಡುವಾಗ ಸರ್ಕಾರದ ಆದೇಶಕ್ಕೆ ಪ್ರವರ್ಗ 1 ಮತ್ತು ಪ್ರವರ್ಗ 2A ನಲ್ಲಿ ಬರುವ ಜಾತಿಗಳಿಗೆ ಶೇ.70% ರಷ್ಟು ಮತ್ತು ಪ್ರವರ್ಗ 3A ಮತ್ತು 3Bನಲ್ಲಿ ಬರುವ ಜಾತಿಗಳಿಗೆ ಶೇ.30% ರಷ್ಟು ಅನುದಾನವನ್ನು ಮಂಜೂರು ಮಾಡಲಾಗುವುದು. ಪ್ರವರ್ಗ 1 ಮತ್ತು 2A ಹೆಚ್ಚಿನ ಸಂಖ್ಯೆಯಲ್ಲಿ ಜಾತಿಗಳು ಇರುವ ಕಾರಣಕ್ಕಾಗಿ ಕೆಲವು ಸಮುದಾಯಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ