ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು 
ರಾಜ್ಯ

ಬೀದರ್‌ನಲ್ಲಿ ಶಾಕಿಂಗ್ ಘಟನೆ: ಮಾವಿನ ಹಣ್ಣು ಸೇವಿಸಿದ ಬಳಿಕ ಅಸ್ವಸ್ಥ; ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು!

ಮೃತ ಸಹೋದರಿಯರಿನ್ನು 17 ವರ್ಷದ ಭವಾನಿ ವೈಜಿನಾಥ ಮೇತ್ರೆ ಮತ್ತು 14 ವರ್ಷದ ಸಂಧ್ಯಾರಾಣಿ ಮೇತ್ರೆ ಎಂದು ಗುರುತಿಸಲಾಗಿದೆ.

ಬೀದರ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಮಾವಿನ ಹಣ್ಣು ಸೇವಿಸಿದ ಬಳಿಕ ಅಸ್ವಸ್ಥಗೊಂಡ ಇಬ್ಬರು ಸಹೋದರಿಯರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಮೃತ ಸಹೋದರಿಯರಿನ್ನು 17 ವರ್ಷದ ಭವಾನಿ ವೈಜಿನಾಥ ಮೇತ್ರೆ ಮತ್ತು 14 ವರ್ಷದ ಸಂಧ್ಯಾರಾಣಿ ಮೇತ್ರೆ ಎಂದು ಗುರುತಿಸಲಾಗಿದೆ.

ಮೃತ ಯುವತಿಯರು ಸೇರಿದಂತೆ ಕುಟುಬಂದ ಹಲವು ಸದಸ್ಯರು ಜೂನ್ 9ರಂದು ಮನೆಯಲ್ಲಿ ಊಟ ಮಾಡಿದ ಬಳಿಕ ಮಾವಿನ ಹಣ್ಣು ಸೇವಿಸಿದ್ದಾರೆ. ಬಳಿಕ ಹಲವರ ಆರೋಗ್ಯದಲ್ಲಿ ಏರುಪೇರಾಗಿದೆ. ತಾಯಿ ಇಂದುಮತಿ ಹಾಗೂ ಐವರು ಪುತ್ರಿಯರು ಮಾವಿನ ಹಣ್ಣು ಸೇವಿಸಿದ ಬಳಿಕ ವಾಂತಿ ಮತ್ತು ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ.

ತಕ್ಷಣ ಕುಟುಂಬದ ಎಲ್ಲಾ ಸದಸ್ಯರನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭವಾನಿ ಮತ್ತು ಸಂಧ್ಯಾರಾಣಿ ಮೃತಪಟ್ಟಿದ್ದಾರೆ. ಇನ್ನೊಬ್ಬ ಸಹೋದರಿ ವಿಜಯಶ್ರೀ(19) ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಾಯಿ ಹಾಗೂ ಮತ್ತೊಬ್ಬ ಸಹೋದರಿ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸಾವಿಗೆ ನಿಖರ ಕಾರಣ ಏನು ಎಂಬುದು ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ತಿಳಿಯಲಿದೆ.

ಈ ಸಂಬಂಧ ಹೈದರಾಬಾದ್‌ನ ನಾರಾಯಣಗುಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತ್ರಿಶಾ ವಿರುದ್ಧ ಡಬಲ್ ಮೀನಿಂಗ್ ಹೇಳಿಕೆ: ವಿಚಾರಣೆ ಬಳಿಕ ಠಾಣೆಯಿಂದ ಉದಯನಿಧಿ ಬಿಡುಗಡೆ, ಅಭಿಮಾನಿಗಳಿಂದ ಸಂಭ್ರಮ!

PoK ಚುನಾವಣೆ ಒಂದು ನೆಪ; ಪ್ರತಿಭಟನೆಯನ್ನು ಹತ್ತಿಕ್ಕಲು ಗುಂಡುಗಳ ಬಳಕೆ: ಭಾರತ ಖಂಡನೆ

ಸಂಪುಟ ವಿಸ್ತರಣೆ ಸರ್ಕಸ್ ನಂತರ ಖಾತೆ ಹಂಚಿಕೆ ಕಸರತ್ತು; ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

'ನನ್ನ ಅಮ್ಮ ಒಂಥರಾ ಗೂಢಚಾರಿ ಇದ್ದಂತೆ; ಅಪ್ಪ CM ಆಗಿದ್ದು ಐತಿಹಾಸಿಕ ಕ್ಷಣ': ಫಸ್ಟ್ ಟೈಮ್ ಮನಬಿಚ್ಚಿ ಮಾತನಾಡಿದ ವಿಜಯ್ ಪುತ್ರ!

ಜೀವನದ ಅತಿ ದುಬಾರಿ ಖರೀದಿಯನ್ನು ಬಹಿರಂಗಪಡಿಸಿದ Madhavan; ಬ್ಯಾಂಕ್ ಬ್ಯಾಲೆನ್ಸ್ ಬಗ್ಗೆ ನಾನು ತುಂಬಾ Insecure ಅಂದಿದ್ದೇಕೆ ನಟ?