ಬೆಂಗಳೂರು: ಬೆಂಗಳೂರಿನ ಕೆಂಗೇರಿ ಬಳಿ ಶನಿವಾರ ಬೆಳಗಿನ ಜಾವ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕೆಂಗೇರಿಯ ಆರ್.ಆರ್ ಡೆಂಟಲ್ ಕಾಲೇಜು ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತ ವಿದ್ಯಾರ್ಥಿಗಳನ್ನು ಅತುಲ್ ಹಾಗೂ ಗೌರಿಶಂಕರ್ ಎಂದು ಗುರುತಿಸಲಾಗಿದೆ.
ಈ ಇಬ್ಬರು ವಿದ್ಯಾರ್ಥಿಗಳು ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಕೆಂಗೇರಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.