ಬಿ ವೈ ವಿಜಯೇಂದ್ರ  
ರಾಜ್ಯ

CM ಡಿ.ಕೆ ಶಿವಕುಮಾರ್ ರಿಯಲ್ ಎಸ್ಟೇಟ್ ಪರ ಕೆಲಸ ಮಾಡುತ್ತಿದ್ದಾರೆ; ಗೃಹಲಕ್ಷ್ಮಿ ಯೋಜನೆ ಚುನಾವಣಾ ಲಕ್ಷ್ಮಿಯಾಗಿದೆ: ಬಿ.ವೈ ವಿಜಯೇಂದ್ರ; Video

ಬಿಡದಿ ಟೌನ್ ಶಿಪ್ ಯೋಜನೆ ಕೈಗೆತ್ತಿಕೊಳ್ಳುವ ಮುನ್ನ ರೈತರ ಜೊತೆ ಕುಳಿತು ಚರ್ಚಿಸಿ ನಿಜವಾದ ಸಮಸ್ಯೆ ಏನು ಎಂಬುದನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅರ್ಥೈಸಿಕೊಳ್ಳಲಿ ಎಂದರು.

ರೈತರ ಪರವಾಗಿ ಕೆಲಸ ಮಾಡುವ ಬದಲು ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಶಿವಕುಮಾರ್ ರಿಯಲ್ ಎಸ್ಟೇಟ್ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಜಿಬಿಐಟಿ ಯೋಜನೆಗಾಗಿ 499 ಎಕರೆ ಭೂಸ್ವಾಧೀನ ವಿಚಾರದಲ್ಲಿ ಸಿಎಂ ರೈತರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಡದಿ ಟೌನ್ ಶಿಪ್ ಯೋಜನೆ ಕೈಗೆತ್ತಿಕೊಳ್ಳುವ ಮುನ್ನ ರೈತರ ಜೊತೆ ಕುಳಿತು ಚರ್ಚಿಸಿ ನಿಜವಾದ ಸಮಸ್ಯೆ ಏನು ಎಂಬುದನ್ನು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅರ್ಥೈಸಿಕೊಳ್ಳಲಿ. ಶೇಕಡಾ 90ಕ್ಕಿಂತ ಹೆಚ್ಚು ಮಂದಿ ರೈತರು ತಮ್ಮ ಜಮೀನನ್ನು ಸರ್ಕಾರಕ್ಕೆ ಬಿಟ್ಟುಕೊಡಲು ತಯಾರಾಗಿಲ್ಲ ಎಂದರು.

ಈ ವಿಷಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ರೈತರ ಜೊತೆ ಒಟ್ಟಾಗಿ ಹೋರಾಟ ನಡೆಸಲಿದೆ ಎಂದರು.

ಚುನಾವಣಾ ಲಕ್ಷ್ಮಿ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ನಿರ್ವಹಣೆ ಬಗ್ಗೆ ಟೀಕಿಸಿದ ಬಿ ವೈ ವಿಜಯೇಂದ್ರ, ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ಸಾಕಷ್ಟು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿತ್ತು. ಆದರೆ, ಈಗ ಗ್ಯಾರಂಟಿಗಳು ಸರಿಯಾಗಿ ತಲುಪುತ್ತಿಲ್ಲ ಮತ್ತು ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದು ಆರೋಪಿಸಿದರು.

ಗೃಹಲಕ್ಷ್ಮಿ ಯೋಜನೆಯನ್ನು 4-5 ತಿಂಗಳುಗಳ ಕಾಲ ತಡೆಹಿಡಿದು, ಚುನಾವಣೆ ಬಂದಾಗ ಚುನಾವಣಾ ಲಕ್ಷ್ಮಿಯನ್ನಾಗಿ ಪರಿವರ್ತಿಸಲಾಗುತ್ತಿದೆ. ಅಲ್ಲದೆ, ಗ್ಯಾರಂಟಿಗಳಿಂದ ಉಂಟಾದ ಆರ್ಥಿಕ ಸಂಕಷ್ಟವನ್ನು ನಿಭಾಯಿಸಲು ಲಕ್ಷಾಂತರ ಫಲಾನುಭವಿಗಳನ್ನು ಕಡಿತಗೊಳಿಸುವ ದುಸ್ಸಾಹಸಕ್ಕೆ ಸರ್ಕಾರ ಕೈ ಹಾಕಿದೆ ಎಂದು ಟೀಕಿಸಿದರು.

ಬಿಡದಿ ಭಾಗದ ರೈತರಿಂದ ಜೂ.22ರಂದು ಪ್ರತಿಭಟನೆ

ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ರೈತರು ಜೂನ್ 22ರಂದು ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತ್ರಿಶಾ ವಿರುದ್ಧ ಡಬಲ್ ಮೀನಿಂಗ್ ಹೇಳಿಕೆ: ವಿಚಾರಣೆ ಬಳಿಕ ಠಾಣೆಯಿಂದ ಉದಯನಿಧಿ ಬಿಡುಗಡೆ, ಅಭಿಮಾನಿಗಳಿಂದ ಸಂಭ್ರಮ!

585.72 ಕೋಟಿ ರೂ. ಬೆಳೆ ವಿಮೆ ಪರಿಹಾರ ವಿತರಣೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಗಜಿನಿ, ಲಗಾನ್ ಚಿತ್ರದಲ್ಲಿ ನಟಿಸಿದ್ದ ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ಅಶ್ಲೀಲ ಜೋಕ್‌ಗಳು ಸ್ವೀಕಾರಾರ್ಹವಲ್ಲ; ಉದಯನಿಧಿ ವಿರುದ್ಧದ ಪೊಲೀಸರ ಕ್ರಮ ಸರಿಯಾಗಿದೆ: ನಟಿ ಕಂಗನಾ ರಣಾವತ್

ದ್ವೇಷ ಭಾಷಣ: ಪಿಎಫ್‌ಐ ನಾಯಕನಿಗೆ ಆರು ತಿಂಗಳು ಜೈಲು ಶಿಕ್ಷೆ