ಸಂಗ್ರಹ ಚಿತ್ರ 
ರಾಜ್ಯ

ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಯೋಜನೆಗೆ ಭರ್ಜರಿ ಸ್ಪಂದನೆ; 2 ದಿನದಲ್ಲಿ 2,764 ಪಾಸ್ ವಿತರಣೆ

ರಾಜ್ಯ ಸರ್ಕಾರ ಜೂನ್ 11ರಂದು ಆದೇಶ ಹೊರಡಿಸಿ, ರಾಜ್ಯದ ಎಲ್ಲ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಿತ್ತು.

ಬೆಂಗಳೂರು: ರಾಜ್ಯ ಸರ್ಕಾರದ ಉಚಿತ ಬಸ್ ಪಾಸ್ ಯೋಜನೆಗೆ ವಿದ್ಯಾರ್ಥಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಯೋಜನೆ ಜಾರಿಯಾದ ಮೊದಲ ಎರಡು ದಿನಗಳಲ್ಲಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಒಟ್ಟು 2,764 ಉಚಿತ ಬಸ್ ಪಾಸ್‌ಗಳನ್ನು ವಿತರಿಸಿವೆ.

ಶುಕ್ರವಾರ 821 ಪಾಸ್‌ಗಳು ಹಾಗೂ ಶನಿವಾರ 1,943 ಪಾಸ್‌ಗಳು ವಿತರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ನಾಲ್ಕು ಸಾರಿಗೆ ನಿಗಮಗಳ ಪೈಕಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‌ಡಬ್ಲ್ಯೂಕೆಆರ್‌ಟಿಸಿ) 995 ಪಾಸ್‌ಗಳನ್ನು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) 860 ಪಾಸ್‌ಗಳನ್ನು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) 641 ಪಾಸ್‌ಗಳನ್ನು ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) 268 ಪಾಸ್‌ಗಳನ್ನು ವಿತರಿಸಿವೆ ಎಂದು ತಿಳಿದುಬಂದಿದೆ.

ರಾಜ್ಯ ಸರ್ಕಾರ ಜೂನ್ 11ರಂದು ಆದೇಶ ಹೊರಡಿಸಿ, ರಾಜ್ಯದ ಎಲ್ಲ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಿತ್ತು.

ಈ ಯೋಜನೆಯಡಿ ಕರ್ನಾಟಕದ ವಿದ್ಯಾರ್ಥಿಗಳು ನೆರೆಯ ರಾಜ್ಯಗಳ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೂ ಸೌಲಭ್ಯ ಪಡೆಯಬಹುದಾಗಿದೆ. ಹಾಗೆಯೇ ನೆರೆಯ ರಾಜ್ಯಗಳ ಗಡಿ ಭಾಗದ ವಿದ್ಯಾರ್ಥಿಗಳು ಕರ್ನಾಟಕದಲ್ಲಿ ಶಿಕ್ಷಣ ಪಡೆಯುತ್ತಿದ್ದರೂ ಅವರಿಗೆ ಉಚಿತ ಬಸ್ ಪಾಸ್ ದೊರೆಯಲಿದೆ.

ಈ ಯೋಜನೆಗೆ ವಾರ್ಷಿಕವಾಗಿ ಸುಮಾರು ರೂ.286.08 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದ್ದು, ಪ್ರಕ್ರಿಯಾ ಶುಲ್ಕ ಮತ್ತು ಅಪಘಾತ ಪರಿಹಾರ ನಿಧಿಗಾಗಿ ಹೆಚ್ಚುವರಿಯಾಗಿ ರೂ.15 ಕೋಟಿ ಮೀಸಲಿಡಲಾಗಿದೆ.

ಈ ಹಿಂದೆ ವಿದ್ಯಾರ್ಥಿ ಬಸ್ ಪಾಸ್ ವೆಚ್ಚವನ್ನು ಸರ್ಕಾರ, ಸಾರಿಗೆ ನಿಗಮಗಳು ಹಾಗೂ ವಿದ್ಯಾರ್ಥಿಗಳು ಹಂಚಿಕೊಂಡು ಭರಿಸುತ್ತಿದ್ದರು. ಇದೀಗ ಸಂಪೂರ್ಣ ಉಚಿತವಾಗಿ ಪಾಸ್‌ಗಳನ್ನು ನೀಡಲಾಗುತ್ತಿದೆ.

ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ತಮ್ಮ ಶಾಲೆ, ಕಾಲೇಜು ಅಥವಾ ಯಾವುದೇ ಸ್ಥಳದಿಂದ ಅರ್ಜಿ ಸಲ್ಲಿಸಬಹುದು. ಶಿಕ್ಷಣ ಅರ್ಹತೆ, ಪ್ರಯಾಣದ ದೂರ ಮಿತಿ ಹಾಗೂ ಪಾಸ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದ ನಿಯಮಗಳು ಅನ್ವಯವಾಗಲಿವೆ.

ಈ ಯೋಜನೆಯಿಂದ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ಪ್ರಯಾಣ ವೆಚ್ಚದ ಹೊರೆ ಕಡಿಮೆಯಾಗಲಿದ್ದು, ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ದೊರೆಯುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನಾನಿರತ ವಿದ್ಯಾರ್ಥಿ ವಿರುದ್ಧ ಪೆಲೆಟ್ ಗನ್ ಬಳಕೆ ವಿವಾದ; ಸಿಬ್ಬಂದಿಗಳ ಬೆನ್ನಿಗೆ ನಿಂತ CRPF ಮುಖ್ಯಸ್ಥ; ‘ನಿರ್ಭಯದಿಂದ ಕರ್ತವ್ಯ ನಿರ್ವಹಿಸುವಂತೆ ಸೂಚನೆ..!

ಅಮಿತ್ ಶಾ ವಿರುದ್ಧ ಸುಳ್ಳು ಆರೋಪ; ರಾಹುಲ್ ಗಾಂಧಿ ಕೂಡಲೇ ಕ್ಷಮೆ ಕೇಳಲೇಬೇಕು: Kangana Ranaut

Trump ಎಚ್ಚರಿಕೆ ಬೆನ್ನಲ್ಲೇ Iran ಮೇಲೆ ಅಮೆರಿಕ ಭೀಕರ ದಾಳಿ; ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ, ತೈಲ ಬೆಲೆ ಭಾರೀ ಏರಿಕೆ..!

ಎಫ್‌ಡಿಐ ಸೆಳೆಯುವಲ್ಲಿ ಕೇರಳ ಹಿನ್ನಡೆ: ದಕ್ಷಿಣದ ಇತರೆ ರಾಜ್ಯಗಳು ದಾಪುಗಾಲು, ರಾಷ್ಟ್ರೀಯ ಪಾಲು ಶೇ. 1ಕ್ಕಿಂತ ಕಡಿಮೆ

ಅಧಿವೇಶನಕ್ಕೂ ಮುನ್ನ ಬಸವರಾಜ್ ಹೊರಟ್ಟಿಗೆ ಸರ್ಕಾರ ಶಾಕ್: ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ, ಸಂಘರ್ಷ ಫಿಕ್ಸ್..!