ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಭೇಟಿ ನೀಡಿದ್ದು ಇದರ ಬೆನ್ನಲ್ಲೇ ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಇಂದು ಭೇಟಿ ನೀಡಿದ್ದು ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅನಂತ್ ಅಂಬಾನಿ ತಮ್ಮ ಕುಟುಂಬದ ಆಪ್ತ ಗುರೂಜಿ ಅವರ ಜೊತೆಯಲ್ಲಿ ಆಗಮಿಸಿದ್ದು ಮೂಕಾಂಬಿಕಾ ಸನ್ನಿಧಾನದಲ್ಲಿ ನಡೆದ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡರು.