ಬಿಎಸ್ ಶ್ರೀಧರ್ 
ರಾಜ್ಯ

ಸಿಎಂ ಡಿ.ಕೆ ಶಿವಕುಮಾರ್ ವಿಶೇಷ ಕರ್ತವ್ಯಾಧಿಕಾರಿಯಾಗಿ ಬಿ.ಎಸ್ ಶ್ರೀಧರ್ ನೇಮಕ

ಸರ್ಕಾರಿ ಯೋಜನೆಗಳ ಅನುಷ್ಠಾನ ಮೇಲ್ವಿಚಾರಣೆ ಹಾಗೂ ಮುಖ್ಯಮಂತ್ರಿಗಳಿಗೆ ನೀತಿ ಮತ್ತು ಆಡಳಿತಾತ್ಮಕ ವಿಷಯಗಳಲ್ಲಿ ಸಹಕಾರ ನೀಡುವ ಜವಾಬ್ದಾರಿಯನ್ನು ಬಿಎಸ್ ಶ್ರೀಧರ್ ಅವರು ನಿರ್ವಹಿಸಲಿದ್ದಾರೆ.

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಸರ್ಕಾರವು ಹಿರಿಯ ಅಧಿಕಾರಿಯಾಗಿರುವ ಬಿಎಸ್ ಶ್ರೀಧರ್ (BS Sridhar) ಅವರನ್ನು ಮುಖ್ಯಮಂತ್ರಿ DK ಶಿವಕುಮಾರ್ ಅವರ ವಿಶೇಷ ಕರ್ತವ್ಯಾಧಿಕಾರಿ (OSD) ಹಾಗೂ ಜಂಟಿ ಕಾರ್ಯದರ್ಶಿ (Joint Secretary) ಆಗಿ ನೇಮಕ ಮಾಡಿದೆ.

ಮೂಲಗಳ ಪ್ರಕಾರ ಮುಖ್ಯಮಂತ್ರಿಗಳ ಕಚೇರಿಯ ಆಡಳಿತಾತ್ಮಕ ಕಾರ್ಯಗಳು, ವಿವಿಧ ಇಲಾಖೆಗಳ ನಡುವಿನ ಸಮನ್ವಯ, ಸರ್ಕಾರಿ ಯೋಜನೆಗಳ ಅನುಷ್ಠಾನ ಮೇಲ್ವಿಚಾರಣೆ ಹಾಗೂ ಮುಖ್ಯಮಂತ್ರಿಗಳಿಗೆ ನೀತಿ ಮತ್ತು ಆಡಳಿತಾತ್ಮಕ ವಿಷಯಗಳಲ್ಲಿ ಸಹಕಾರ ನೀಡುವ ಜವಾಬ್ದಾರಿಯನ್ನು ಬಿಎಸ್ ಶ್ರೀಧರ್ ಅವರು ನಿರ್ವಹಿಸಲಿದ್ದಾರೆ.

ಈ ನೇಮಕಾತಿಯೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಚೇರಿಯ ಆಡಳಿತಾತ್ಮಕ ತಂಡ ಮತ್ತಷ್ಟು ಬಲಗೊಂಡಿದ್ದು, ಸರ್ಕಾರದ ಪ್ರಮುಖ ಕಾರ್ಯಕ್ರಮಗಳು ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ವೇಗ ಸಿಗುವ ನಿರೀಕ್ಷೆಯಿದೆ.

2000 ರಿಂದ ಎಸ್‌ಎಂ ಕೃಷ್ಣ ಅವರ ವಿದೇಶಾಂಗ ಸಚಿವ ಹುದ್ದೆಯ ಅಂತ್ಯದವರೆಗೆ ಶ್ರೀಧರ್ ಅವರು ಅವರ ಒಎಸ್‌ಡಿ ಮತ್ತು ಖಾಸಗಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ನಂತರ ಅವರು ಡಿ.ಕೆ. ಶಿವಕುಮಾರ್ ಇಂಧನ ಸಚಿವರಾದಾಗ ಅವರೊಂದಿಗೆ ಸೇರಿಕೊಂಡರು ಮತ್ತು ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹೆಚ್ಚುವರಿ ಖಾಸಗಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ, ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ..!

ಸಿದ್ದರಾಮಯ್ಯ ಮಾತಿಗೆ ಯಾವುದೇ ಬೆಲೆ ಇಲ್ಲ, ಅವರ ಆಪ್ತನಾಗಿದ್ದಕ್ಕೆ ಸಚಿವ ಸ್ಥಾನ ಕೈ ತಪ್ಪಿದೆ: CM ಡಿಕೆಶಿ ವಿರುದ್ಧ ಸುಧಾಕರ್ ಕಿಡಿ

Crass, cheap and derogatory': ನಟಿ ತ್ರಿಶಾಗೆ ಅಸಭ್ಯ, ಕೀಳುಮಟ್ಟದಲ್ಲಿ ಅಪಮಾನ, ಉದಯನಿಧಿ ಸ್ಟಾಲಿನ್ ಕ್ಷಮೆಯಾಚನೆಗೆ ಖುಷ್ಬೂ ಸುಂದರ್ ಒತ್ತಾಯ!

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!

ಊರ್ಫಿ ಜಾವೇದ್‌ಗೆ 1 ಲಕ್ಷ, ಪೂನಂ ಪಾಂಡೆಗೆ 20,000 ರೂ: ಕೂಡಲೇ CJP ಸ್ಥಾಪಕ ದೀಪ್ಕೆ ಬಂಧಿಸಬೇಕು, ಇನ್ಫ್ಲುಯೆನ್ಸರ್ ದೂರು ದಾಖಲು! Video