ಲೈಂಗಿಕ ದೌರ್ಜನ್ಯ (ಸಾಂದರ್ಭಿಕ ಚಿತ್ರ) 
ರಾಜ್ಯ

ರಾಯಚೂರು: ಇಬ್ಬರು ಬಾಲಕಿಯರ ಮೇಲೆ 5 ದಿನ ಲೈಂಗಿಕ ದೌರ್ಜನ್ಯ; ವ್ಯಕ್ತಿ ಬಂಧನ

ಸಂತ್ರಸ್ತರ ಕುಟುಂಬಕ್ಕೆ ಪರಿಚಿತನಾಗಿದ್ದ ಆರೋಪಿ, ಜೂನ್ 10ರಂದು ಬಾಲಕಿಯರ ಪೋಷಕರು ದಿನಗೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ರಾಯಚೂರು: ರಾಯಚೂರು ಜಿಲ್ಲೆಯ ತನ್ನ ನಿವಾಸದಲ್ಲಿ ಇಬ್ಬರು ಅಪ್ರಾಪ್ತ ಸಹೋದರಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತ ಬಾಲಕಿಯರು 2ನೇ ಮತ್ತು 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ.

ಪೊಲೀಸರ ಪ್ರಕಾರ, ಸಂತ್ರಸ್ತರ ಕುಟುಂಬಕ್ಕೆ ಪರಿಚಿತನಾಗಿದ್ದ ಆರೋಪಿ, ಜೂನ್ 10ರಂದು ಬಾಲಕಿಯರ ಪೋಷಕರು ದಿನಗೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ತಮ್ಮ ದೂರಿನಲ್ಲಿ ಬಾಲಕಿಯರ ತಂದೆ, ಮಕ್ಕಳು ವಿರೋಧ ವ್ಯಕ್ತಪಡಿಸಿದ್ದರೂ ಆರೋಪಿ ತನ್ನ ಕೃತ್ಯವನ್ನು ಮುಂದುವರಿಸಿದ್ದಾನೆ ಎಂದು ತಿಳಿಸಿದ್ದಾರೆ.

5 ದಿನ ಲೈಂಗಿಕ ದೌರ್ಜನ್ಯ

ಆರೋಪಿ ಮುಂದಿನ ಐದು ದಿನಗಳ ಕಾಲವೂ ಇದೇ ರೀತಿಯ ಕೃತ್ಯವನ್ನು ಪುನರಾವರ್ತಿಸಿದ್ದು, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ನಿಮ್ಮ ತಂದೆ-ತಾಯಿಯನ್ನು ಕೊಲೆ ಮಾಡುತ್ತೇನೆ ಎಂದು ಬಾಲಕಿಯರಿಗೆ ಬೆದರಿಕೆ ಹಾಕಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೂರಿನ ಆಧಾರದ ಮೇಲೆ, ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ (ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ) ಕಾಯ್ದೆ ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ವಿಧಿಗಳಡಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ

ಇರಾನ್ ವಿದೇಶಾಂಗ ಸಚಿವ- ಎಸ್ ಜೈಶಂಕರ್ ಮಾತುಕತೆ: ಪ್ರಾದೇಶಿಕ ಸಮರದ ಬಗ್ಗೆ ಆತಂಕ, ಹಡಗುಗಳ ಮೇಲೆ ದಾಳಿ ನಡೆಸದಂತೆ ಒತ್ತಾಯ

ಆಗಸ್ಟ್ 1 ರಂದು ಪ್ರಧಾನ ಮಂತ್ರಿ ಮೋದಿ ಆಂಧ್ರಪ್ರದೇಶ ಮೈಸೂರಿಗೆ ಭೇಟಿ; ಅಭಿವೃದ್ಧಿ ಯೋಜನೆಗಳ ಉದ್ಘಾಟನೆ

ಕಾವೇರಿ ಕಿತ್ತಾಟದ ನಡುವೆ ರಾಜ್ಯಕ್ಕೆ ಹವಾಮಾನ ಇಲಾಖೆ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ!

'ಕರ್ನಾಟಕಕ್ಕೆ ನೀರು ನೀಡಲು ನಮ್ಮ ವಿರೋಧವಿಲ್ಲ.. ಆದ್ರೆ ಮೇಕೆದಾಟು ಬೇಡ": ಕಾವೇರಿ ವಿವಾದ ಕುರಿತು AIADMK ಸಂಸದ ಎಂ. ತಂಬಿದುರೈ