ಆರ್. ಅಶೋಕ್, ಸಿಎಂ ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಒಂದೆಡೆ ಮುಂಗಾರು ಕ್ಷೀಣದ ಭೀತಿ; ಇನ್ನೊಂದೆಡೆ ಕೃಷಿ ಸಚಿವರೇ ಇಲ್ಲದ ಅನಾಥ ಪರಿಸ್ಥಿತಿ! CM ಡಿಕೆಶಿ ವಿರುದ್ಧ ಅಶೋಕ್ ಕಿಡಿ!

ಕಮಿಷನ್ ಮಾಸ್ಟರ್ (CM) ಡಿಕೆ ಶಿವಕುಮಾರ್ ಅವರೇ, ರಾಜ್ಯದಲ್ಲಿ ಬರಗಾಲ ಎದುರಿಸಲು ಸಜ್ಜಾಗಿ" ಎಂದು ಮಾಧ್ಯಮಗಳಿಗೆ ಪೋಸ್ ಕೊಟ್ಟರೆ ಏನೂ ಪ್ರಯೋಜನವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಮುಂಗಾರು ಕ್ಷೀಣದ ಭೀತಿ; ಇನ್ನೊಂದೆಡೆ ಕೃಷಿ ಸಚಿವರೇ ಇಲ್ಲದ ಅನಾಥ ಪರಿಸ್ಥಿತಿ ಎದುರಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವರದಿಯೊಂದನ್ನು ಹಂಚಿಕೊಂಡು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಮಿಷನ್ ಮಾಸ್ಟರ್ (CM) ಡಿಕೆ ಶಿವಕುಮಾರ್ ಅವರೇ, ರಾಜ್ಯದಲ್ಲಿ ಬರಗಾಲ ಎದುರಿಸಲು ಸಜ್ಜಾಗಿ" ಎಂದು ಮಾಧ್ಯಮಗಳಿಗೆ ಪೋಸ್ ಕೊಟ್ಟರೆ ಏನೂ ಪ್ರಯೋಜನವಿಲ್ಲ. ನೀವೇ ಒಪ್ಪಿಕೊಂಡಿರುವಂತೆ ರಾಜ್ಯದಲ್ಲಿ ಇನ್ನು ಶೇ. 30 ರಷ್ಟು ಮಳೆಯೂ ಆಗಿಲ್ಲ. ಪರಿಸ್ಥಿತಿ ಹೀಗಿರುವಾಗ ಬರೀ ಎಸಿ ಕೋಣೆಯಲ್ಲಿ ಕೂತು ಕಾಟಾಚಾರದ ಸಭೆ ನಡೆಸಿದರೆ, ಮಾಧ್ಯಮಗಳಿಗೆ ಒಂದು ಹಾರಿಕೆಯ ಹೇಳಿಕೆ ಕೊಟ್ಟುಬಿಟ್ಟರೆ ಬರ ನೀಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.

ಬರಗಾಲ ಎದುರಿಸೋಕೆ, ರೈತರ ಕಷ್ಟ ಕೇಳೋಕೆ ರಾಜ್ಯದಲ್ಲಿ ಕೃಷಿ ಸಚಿವರು ಎಲ್ಲಿದ್ದಾರೆ ಸ್ವಾಮಿ? ಬರಪೀಡಿತ ತಾಲೂಕುಗಳಲ್ಲಿ ಜನ-ಜಾನುವಾರುಗಳು ಕುಡಿಯುವ ನೀರಿಲ್ಲದೆ ತತ್ತರಿಸುತ್ತಿದ್ದಾರೆ. ಈ ತಾಪತ್ರಯ ವಿಚಾರಿಸಬೇಕಾದ ನಿಮ್ಮ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಎಲ್ಲಿದ್ದಾರೆ ಸ್ವಾಮಿ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮದೇ ಶಾಸಕರ ಮುನಿಸು, ಆಂತರಿಕ ಅಸಮಾಧಾನವನ್ನು ಎದುರಿಸಲಾಗದೆ ಮುಕ್ಕಾಲು ಸಂಪುಟವನ್ನು ಖಾಲಿ ಇಟ್ಟುಕೊಂಡಿರುವ ತಾವು ರಾಜ್ಯದ ಬರಗಾಲ ಎದುರಿಸುತ್ತೀರಿ ಎಂದು ಕನ್ನಡಿಗರು ಹೇಗೆ ತಾನೇ ನಂಬಿಯಾರು? ಎಂದಿದ್ದಾರೆ.

ಅಧಿಕಾರದ ಹಪಾಹಪಿಗೆ ಬಿದ್ದು ಆಡಳಿತವನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ ಕೇವಲ ಅಸಹಾಯಕ, ರಬ್ಬರ್ ಸ್ಟಾಂಪ್ ಮುಖ್ಯಮಂತ್ರಿಗಳಾಗಿ ನೀವು ಇತಿಹಾಸ ಸೇರುತ್ತೀರಿ. ಈ ಪೊಳ್ಳು ಹೇಳಿಕೆಗಳನ್ನು ಕೊಡುವುದು ಬಿಟ್ಟು, ತಕ್ಷಣವೇ ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆ ಮಾಡಿ ಬರ ಪರಿಹಾರ ಕಾರ್ಯಕ್ಕೆ ಮಂತ್ರಿಗಳನ್ನು ಹಳ್ಳಿ ಹಳ್ಳಿಗಳಿಗೆ ಇಳಿಸಿ, ಇಲ್ಲದಿದ್ದರೆ ಕನ್ನಡಿಗರ ಆಕ್ರೋಶ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತ್ರಿಶಾ ವಿರುದ್ಧ ಡಬಲ್ ಮೀನಿಂಗ್ ಹೇಳಿಕೆ: ವಿಚಾರಣೆ ಬಳಿಕ ಠಾಣೆಯಿಂದ ಉದಯನಿಧಿ ಬಿಡುಗಡೆ, ಅಭಿಮಾನಿಗಳಿಂದ ಸಂಭ್ರಮ!

PoK ಚುನಾವಣೆ ಒಂದು ನೆಪ; ಪ್ರತಿಭಟನೆಯನ್ನು ಹತ್ತಿಕ್ಕಲು ಗುಂಡುಗಳ ಬಳಕೆ: ಭಾರತ ಖಂಡನೆ

ಸಂಪುಟ ವಿಸ್ತರಣೆ ಸರ್ಕಸ್ ನಂತರ ಖಾತೆ ಹಂಚಿಕೆ ಕಸರತ್ತು; ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

'ನನ್ನ ಅಮ್ಮ ಒಂಥರಾ ಗೂಢಚಾರಿ ಇದ್ದಂತೆ; ಅಪ್ಪ CM ಆಗಿದ್ದು ಐತಿಹಾಸಿಕ ಕ್ಷಣ': ಫಸ್ಟ್ ಟೈಮ್ ಮನಬಿಚ್ಚಿ ಮಾತನಾಡಿದ ವಿಜಯ್ ಪುತ್ರ!

ಜೀವನದ ಅತಿ ದುಬಾರಿ ಖರೀದಿಯನ್ನು ಬಹಿರಂಗಪಡಿಸಿದ Madhavan; ಬ್ಯಾಂಕ್ ಬ್ಯಾಲೆನ್ಸ್ ಬಗ್ಗೆ ನಾನು ತುಂಬಾ Insecure ಅಂದಿದ್ದೇಕೆ ನಟ?