ವಚನಾನಂದ ಸ್ವಾಮೀಜಿ 
ರಾಜ್ಯ

ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿ: POCSO ಕೇಸ್ ಸಂಬಂಧ ಹೈಕೋರ್ಟ್ ಹೇಳಿಕೆ

ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ದಾವಣಗೆರೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಫೋಕ್ಸೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ.

ಬೆಂಗಳೂರು: ದಾವಣಗೆರೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ (Vachanananda Swamiji) ಸ್ವಾಮೀಜಿ ಫೋಕ್ಸೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿ ಎಂದು ಕರ್ನಾಟಕ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ.

ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ದಾವಣಗೆರೆ (Davanagere) ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ (Vachanananda Swamiji) ವಿರುದ್ಧ ದಾಖಲಾಗಿರುವ ಫೋಕ್ಸೋ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ.

ಇದೀಗ ಇದೇ ಪ್ರಕರಣದ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದ್ದು, ದೂರು ದಾಖಲಾಗುವ ಮುನ್ನವೇ ದಾವಣಗೆರೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿದ್ದು, ಇದು ಹೈಕೋರ್ಟ್ ಅಸಮಾಧಾನಕ್ಕೆ ಕಾರಣವಾಗಿದೆ.

ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಬಾಲಕನ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ದೂರು ದಾಖಲಾಗುವ ಮುನ್ನವೇ ನಿರೀಕ್ಷಣಾ ಜಾಮೀನು ಕೊಟ್ಟಿದ್ದಾರೆ. ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿಯಾಗಿದೆ. ಮೇಲ್ನೋಟಕ್ಕೆ ನಿರೀಕ್ಷಣಾ ಜಾಮೀನು ನೀಡಿದ ವಿಧಾನ ಸರಿಯಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಸ್ವಾಮೀಜಿ ವಿರುದ್ಧ ಗಂಭೀರ ಆರೋಪಗಳ ಅಡಿಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಆದರೂ ಮೇಲ್ನೋಟಕ್ಕೆ ನಿರೀಕ್ಷಣಾ ಜಾಮೀನು ನೀಡಿದ ವಿಧಾನ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ವಚನಾನಂದ ಸ್ವಾಮೀಜಿಗೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ಜೂನ್ 23ಕ್ಕೆ ನಿಗದಿಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾನಿಲ್ಲದಿದ್ದರೆ ಇಸ್ರೇಲ್ ಇರುತ್ತಿರಲಿಲ್ಲ': ನೆತನ್ಯಾಹು ವಿರುದ್ಧ ಟ್ರಂಪ್ ಅಸಮಾಧಾನ; 'ಅವರಿಗೆ' ಸಾಧ್ಯವಾಗದಿದ್ದರೆ ಹಿಜ್ಬೊಲ್ಲಾನ ಸಿರಿಯಾ ನೋಡಿಕೊಳ್ಳುತ್ತೆ; Video

ರಾಜಸ್ಥಾನದಲ್ಲಿ ಲಂಚಕ್ಕೆ ಕೈಯೊಡ್ಡಿ ರಾಜ್ಯಕ್ಕೆ ಕಳಂಕ: PSI ಅನಿತಾ ಸೇರಿ ಮೂವರ ಅಮಾನತು- ಪ್ರಿಯಾಂಕ್ ಖರ್ಗೆ

ಅತಿಕ್ರಮಣ ಆರೋಪ: ವಾರಣಾಸಿಯ Ganj Shaheeda ಮಸೀದಿ ತೆರವಿಗೆ ರೈಲ್ವೆ ಇಲಾಖೆ ನೋಟಿಸ್

ಕರ್ನಾಟಕದ ಬೆಳವಣಿಗೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬದ್ಧರಾಗಿದ್ದಾರೆ: Biocon ಸಂಸ್ಥಾಪಕಿ ಕಿರಣ್ ಮಜುಂದಾರ್-ಶಾ

ಹನಿಮೂನ್ ಗೆ ತೆರಳಿದ್ದ ಮಹಿಳಾ ಟೆಕ್ಕಿ ಶವವಾಗಿ ರಕ್ತ-ಮೂತ್ರದ ಮಡುವಿನಲ್ಲಿ ಪತ್ತೆ! ಆ ನಿಗೂಢರಾತ್ರಿ ಆಗಿದ್ದೇನು?

SCROLL FOR NEXT