ಸುವರ್ಣ ವಿಧಾನಸೌಧ 
ರಾಜ್ಯ

ಬೆಳಗಾವಿಗೆ ಮತ್ತೆ ನಿರಾಸೆ: ಸುವರ್ಣ ವಿಧಾನಸೌಧದಲ್ಲಿ ಮುಂಗಾರು ಅಧಿವೇಶನ ನಡೆಸುವ ನಿರ್ಧಾರಕ್ಕೆ ಸರ್ಕಾರ ಬ್ರೇಕ್..?

ಸಚಿವ ಸಂಪುಟ ವಿಸ್ತರಣೆ ಸರ್ಕಾರದ ಮುಂದಿರುವ ಪ್ರಮುಖ ಸವಾಲಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಈ ಪ್ರಕ್ರಿಯೆಯನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿರುವ ಹಿನ್ನೆಲೆಯಲ್ಲಿ ಅಧಿವೇಶನವನ್ನು ಬೆಂಗಳೂರಿನಲ್ಲೇ ನಡೆಸಲು ಸರ್ಕಾರ ಒಲವು ತೋರಿದೆ ಎಂದು ಮೂಲಗಳು ತಿಳಿಸಿವೆ.

ಬೆಳಗಾವಿ: ಈ ವರ್ಷದ ವಿಧಾನಮಂಡಲ ಮುಂಗಾರು ಅಧಿವೇಶನವನ್ನು ಸುವರ್ಣ ವಿಧಾನಸೌಧದಲ್ಲಿ ನಡೆಸುವ ರಾಜ್ಯ ಸರ್ಕಾರದ ಹಿಂದಿನ ನಿರ್ಧಾರವನ್ನು ಹಿಂಪಡೆಯಲಾಗಿದೆ ಎಂದು ಹೇಳಲಾಗುತ್ತಿದ್ದು, ಇದರಿಂದ ಈ ಬಾರಿಯೂ ಅಧಿವೇಶನ ಬೆಂಗಳೂರಿನಲ್ಲೇ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ.

ಮೂಲಗಳ ಪ್ರಕಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಜುಲೈ ಎರಡನೇ ವಾರದಲ್ಲಿ ಬೆಳಗಾವಿಯಲ್ಲಿ ಮುಂಗಾರು ಅಧಿವೇಶನ ನಡೆಸುವ ಕುರಿತು ತೀರ್ಮಾನಿಸಲಾಗಿತ್ತು. ಆದರೆ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರ ವಹಿಸಿಕೊಂಡ ಬಳಿಕ ಆ ನಿರ್ಧಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎನ್ನಲಾಗಿದೆ.

ಸಚಿವ ಸಂಪುಟ ವಿಸ್ತರಣೆ ಸರ್ಕಾರದ ಮುಂದಿರುವ ಪ್ರಮುಖ ಸವಾಲಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಈ ಪ್ರಕ್ರಿಯೆಯನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿರುವ ಹಿನ್ನೆಲೆಯಲ್ಲಿ ಅಧಿವೇಶನವನ್ನು ಬೆಂಗಳೂರಿನಲ್ಲೇ ನಡೆಸಲು ಸರ್ಕಾರ ಒಲವು ತೋರಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಸರ್ಕಾರದ ಹಿಂದಿನ ಸೂಚನೆಯಂತೆ ಬೆಳಗಾವಿ ಜಿಲ್ಲಾಡಳಿತ ಈಗಾಗಲೇ ಅಧಿವೇಶನಕ್ಕೆ ಅಗತ್ಯವಿರುವ ಪೂರ್ವಸಿದ್ಧತೆಗಳನ್ನು ಆರಂಭಿಸಿತ್ತು. ಶಾಸಕರು, ಅಧಿಕಾರಿಗಳು ಹಾಗೂ ಭೇಟಿ ನೀಡುವ ಅತಿಥಿಗಳ ವಸತಿ, ಭದ್ರತೆ, ಸಾರಿಗೆ ಸೇರಿದಂತೆ ವಿವಿಧ ವ್ಯವಸ್ಥೆಗಳ ಕುರಿತು ಸಭೆಗಳನ್ನೂ ನಡೆಸಲಾಗಿತ್ತು.

ಇದೇ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕೂಡ ಬೆಳಗಾವಿಯಲ್ಲಿ ಮುಂಗಾರು ಅಧಿವೇಶನ ನಡೆಸುವ ಪರವಾಗಿ ಸಾರ್ವಜನಿಕವಾಗಿ ಬೆಂಬಲ ವ್ಯಕ್ತಪಡಿಸಿದ್ದರು. ಇದರಿಂದ ಅಧಿವೇಶನ ಬೆಳಗಾವಿಯಲ್ಲೇ ನಡೆಯಲಿದೆ ಎಂಬ ನಿರೀಕ್ಷೆ ಮತ್ತಷ್ಟು ಬಲಗೊಂಡಿತ್ತು.

ಆದರೆ ಇತ್ತೀಚಿನ ದಿನಗಳಲ್ಲಿ ಅಧಿವೇಶನಕ್ಕೆ ಸಂಬಂಧಿಸಿದಂತೆ ಯಾವುದೇ ಸಿದ್ಧತೆ ಕೈಗೊಳ್ಳುವಂತೆ ಸರ್ಕಾರದಿಂದ ಹೊಸ ನಿರ್ದೇಶನಗಳು ಬಂದಿಲ್ಲ. ಇದರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಪ್ರಸ್ತಾವನೆ ಕೈಬಿಡಲಾಗಿದೆ ಎಂಬ ಅನುಮಾನ ಅಧಿಕಾರಿಗಳಲ್ಲಿ ಮೂಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, “ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಸರ್ಕಾರದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಮುಂಗಾರು ಅಧಿವೇಶನವನ್ನು ಇಲ್ಲಿ ನಡೆಸುವ ಯೋಜನೆ ಬಹುತೇಕ ರದ್ದಾಗಿರುವಂತೆ ಕಾಣುತ್ತಿದೆ,” ಎಂದು ಹೇಳಿದ್ದಾರೆ.

ಆದಾಗ್ಯೂ, ಈ ಕುರಿತು ರಾಜ್ಯ ಸರ್ಕಾರದಿಂದ ಇನ್ನೂ ಅಧಿಕೃತ ಘೋಷಣೆ ಹೊರಬೀಳಬೇಕಿದ್ದು, ಅಂತಿಮ ನಿರ್ಧಾರದತ್ತ ಎಲ್ಲರ ಚಿತ್ತ ನೆಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ, ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ..!

Crass, cheap and derogatory': ನಟಿ ತ್ರಿಶಾಗೆ ಅಸಭ್ಯ, ಕೀಳುಮಟ್ಟದಲ್ಲಿ ಅಪಮಾನ, ಉದಯನಿಧಿ ಸ್ಟಾಲಿನ್ ಕ್ಷಮೆಯಾಚನೆಗೆ ಖುಷ್ಬೂ ಸುಂದರ್ ಒತ್ತಾಯ!

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!

West Asia War: ಒಪ್ಪಂದಕ್ಕೆ ಬರ್ತೀರಾ? ಇತಿಹಾಸ ಸೇರ್ತೀರಾ?; ಇರಾನ್‌ಗೆ ಟ್ರಂಪ್ ಲಾಸ್ಟ್ ವಾರ್ನಿಂಗ್..!

"ನನಗೊಬ್ಬ ಪಾಕಿಸ್ತಾನಿ ಹುಡುಗನನ್ನು ಹುಡುಕಿ ಕೊಡಿ" ಸಂಘಿ ಹೇಳಿಕೆ ಬೆನ್ನಲ್ಲೇ ಕಂಗನಾ ರಣಾವತ್ ಹಳೆಯ VIDEO ವೈರಲ್!