ಎಚ್‌ಡಿ ಕುಮಾರಸ್ವಾಮಿ 
ರಾಜ್ಯ

'ಬಿಡದಿ ಟೌನ್ ಶಿಪ್ ಕುಮಾರಸ್ವಾಮಿ ಕೂಸು; ಪ್ರತಿಭಟಿಸುತ್ತಿರುವ ಬಹುತೇಕರು ಹಸಿರು ಶಾಲು ಹೊದ್ದಿರುವ JDS ಕಾರ್ಯಕರ್ತರು'

ಯೋಜನೆಯಲ್ಲಿ ಲೂಟಿ ಮಾಡಲು ಅವಕಾಶ ಎಲ್ಲಿದೆ ಎಂಬುದನ್ನು ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‌ ಮತ್ತು ಬಿಜೆಪಿ ನಾಯಕರು ಸಾಬೀತುಪಡಿಸಲಿ ಎಂದು ಸವಾಲು ಹಾಕಿದರು.

ಬೆಂಗಳೂರು: ಬಿಡದಿ ಟೌನ್ ಶಿಪ್ ಯೋಜನೆ ಕೇಂದ್ರ ಸಚಿವ ಕುಮಾರಸ್ವಾಮಿಯವರ ಕೂಸು. ಇದು ಬೆಳೆದಿದ್ದು ಬಿಜೆಪಿ ಆಡಳಿತದಲ್ಲಿ ಎಂದು ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ಬಹುತೇಕರು ಹಸಿರು ಶಾಲು ಹೊದ್ದುಕೊಂಡಿರುವ ಜೆಡಿಎಸ್ ಕಾರ್ಯಕರ್ತರಾಗಿದ್ದಾರೆ ಎಂದಿದ್ದಾರೆ. ಈ ಯೋಜನೆಯಿಂದ ಮುಂದೆ ಜನರಿಗೆ ಅನ್ಯಾಯವಾಗುತ್ತದೆ ಎಂದು ಅನಿಸಿದರೆ ಅದಕ್ಕೆ ದಾಖಲೆ ಬಿಡುಗಡೆ ಮಾಡಲಿ. ಯೋಜನೆಯಲ್ಲಿ ಲೂಟಿ ಮಾಡಲು ಅವಕಾಶ ಎಲ್ಲಿದೆ ಎಂಬುದನ್ನು ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್‌ ಮತ್ತು ಬಿಜೆಪಿ ನಾಯಕರು ಸಾಬೀತುಪಡಿಸಲಿ ಎಂದು ಸವಾಲು ಹಾಕಿದರು.

ಕುಮಾರಸ್ವಾಮಿ ಅವರ ನೇತೃತ್ವದ ಮೈತ್ರಿ ಸರ್ಕಾರದ ಅವಧಿಯಲ್ಲಿ ಬಿಡದಿಯಲ್ಲಿ 9,484 ಎಕರೆಯಲ್ಲಿ ಟೌನ್ ಶಿಪ್ ಮಾಡಲು ತೀರ್ಮಾನಿಸಲಾಗಿತ್ತು. 7,481 ಎಕರೆ ಜಮೀನು ಸ್ವಾಧೀನಕ್ಕೆ ನಮ್ಮ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಜಮೀನು ಸ್ವಾಧೀನಪಡಿಸಿಕೊಂಡು ನಿವೇಶನ ಮಾಡಿ ಬೇರೆಯವರಿಗೆ ಹಂಚುವ ಉದ್ದೇಶವಿಲ್ಲ. ಕೈಗಾರಿಕಾ ಕಾರಿಡಾರ್ ಮಾಡುವ 7,481 ಎಕರೆ ಜತೆಗೆ ರೆಸಿಡೆನ್ಸಿಯಲ್ ಕಾರಿಡಾರ್ ನಿರ್ಮಿಸಲಾಗುತ್ತಿದೆ. ಭೂಮಿಯನ್ನು ವಶಪಡಿಸಿಕೊಂಡು ನೀಡುವುದಷ್ಟೇ ನಮ್ಮ ಕೆಲಸ. ಟೌನ್ ಶಿಪ್ ಅನ್ನು ಜನರೇ ನಿರ್ಮಾಣ ಮಾಡಿಕೊಳ್ಳುತ್ತಾರೆ ಎಂದರು.

ಪ್ರತಿಭಟನೆ ಮಾಡುತ್ತಿರುವವರಲ್ಲಿ ರೈತರು ಎಲ್ಲಿದ್ದಾರೆ ತೋರಿಸಿ, ಹಸಿರು ಶಾಲು ಹಾಕಿಕೊಂಡು ಬಂದಿರುವ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ನೀರು ಹಂಚಿಕೆ: ತಮಿಳುನಾಡು ಅರ್ಜಿಯನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ: ಪಕ್ಷ ನಿಮ್ಮ ಸೇವೆ ಮರೆಯಲ್ಲ; ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ

Gen Zಗಳಿಗೆ ಗುಡ್ ನ್ಯೂಸ್; ಪ್ರತಿಭಟನಾಕಾರರ ವಿರುದ್ಧದ ಪ್ರಕರಣ ಹಿಂಪಡೆದ ಗುಜರಾತ್ ಸರ್ಕಾರ