ಪ್ರಕಾಶ್ ರೈ 
ರಾಜ್ಯ

ನನ್ನ ಹೋರಾಟ ಸೌಜನ್ಯ ಸಾವಿನ ವಿರುದ್ಧ; 200 ಕೋಟಿ ರೂ ತರಲು ನಾನು ಧರ್ಮಸ್ಥಳದ ವಿರೋಧಿಯೇ?: ಮಾರಿಕೊಂಡ ಮಾಧ್ಯಮಗಳು ಹೇಳಿಕೆಗೆ ಪ್ರಕಾಶ್ ರೈ ಸ್ಪಷ್ಟನೆ

ಪ್ರೆಸ್ ಕ್ಲಬ್‌ಗೆ ಅಧಿಕೃತವಾಗಿ ಕಳುಹಿಸಿದ ಇನ್ವಿಟೇಶನ್‌ನಲ್ಲಿ ನಾನು ಆ ಪದ ಬಳಸಿಲ್ಲ. ಅಲ್ಲಿ ನಾನು ಮಾಧ್ಯಮದವರನ್ನು ನಮ್ಮ ಬಂಧುಗಳು, ಆತ್ಮೀಯರು ಎಂದೇ ಕರೆದಿದ್ದೇನೆ. ನನಗೆ ಕೆಲವು ಗಂಭೀರ ಪ್ರಶ್ನೆಗಳಿಗೆ ಉತ್ತರ ಕೊಡಬೇಕಿದ್ದ ಕಾರಣ ಈ ಸುದ್ದಿಗೋಷ್ಠಿ ಕರೆದಿದ್ದೇನೆ ಎಂದರು.

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಷಡ್ಯಂತ್ರದ ಕೇಸಿನಲ್ಲಿ ನನ್ನ ಹೆಸರನ್ನು ಯಾಕೆ ತಳುಕು ಹಾಕಲಾಗುತ್ತಿದೆ? ಎಂದು ನಟ ಪ್ರಕಾಶ್ ರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಕಾಶ್ ರಾಜ್ ಅವರು ತಮಗೆ ಹಾಗೂ ಈ ಪ್ರಕರಣದ ಪ್ರಮುಖ ವ್ಯಕ್ತಿ ಎನ್ನಲಾದ ಚಿನ್ನಯ್ಯನಿಗೆ ಇರುವ ಲಿಂಕ್ ಏನು ಎಂಬುದನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಅದೇ ರೀತಿ ಚಿನ್ನಯ್ಯನಿಗೆ ನೀನು ನನ್ನ ಮುಂದೆ ಹೇಳಿದ ಸತ್ಯವನ್ನು ಎಸ್‌ಐಟಿ ಮುಂದೆ ಹೋಗಿ ಹೇಳು. ಸತ್ಯ ಹೇಳಿದರೆ ಊರೇ ಕೊಂಡಾಡುತ್ತೆ. ನಾನು ನಿನ್ನ ತಬ್ಬಿಕೊಳ್ತಿನಿ ಎಂದು ಹೇಳಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯ ಆರಂಭದಲ್ಲೇ ಮಾಧ್ಯಮಗಳ ಆಹ್ವಾನ ಪತ್ರಿಕೆಯ ವಿವಾದಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಸಾಮಾಜಿಕ ಜಾಲತಾಣಗಳಲ್ಲಿ ಪ್ರೆಸ್ ಮೀಟ್ ಬಗ್ಗೆ ಪೋಸ್ಟ್ ಹಾಕಿದಾಗ 'ಮಾರಿಕೊಂಡ ಮಾಧ್ಯಮಗಳು' ಎಂಬ ಪದ ಬಳಕೆಯಾಗಿದ್ದು ನಿಜ.

ಆದರೆ, ಪ್ರೆಸ್ ಕ್ಲಬ್‌ಗೆ ಅಧಿಕೃತವಾಗಿ ಕಳುಹಿಸಿದ ಇನ್ವಿಟೇಶನ್‌ನಲ್ಲಿ ನಾನು ಆ ಪದ ಬಳಸಿಲ್ಲ. ಅಲ್ಲಿ ನಾನು ಮಾಧ್ಯಮದವರನ್ನು ನಮ್ಮ ಬಂಧುಗಳು, ಆತ್ಮೀಯರು ಎಂದೇ ಕರೆದಿದ್ದೇನೆ. ನನಗೆ ಕೆಲವು ಗಂಭೀರ ಪ್ರಶ್ನೆಗಳಿಗೆ ಉತ್ತರ ಕೊಡಬೇಕಿದ್ದ ಕಾರಣ ಈ ಸುದ್ದಿಗೋಷ್ಠಿ ಕರೆದಿದ್ದೇನೆ ಎಂದರು.

ಪತ್ರಿಕೋದ್ಯಮದಲ್ಲಿ ಸಾಕಷ್ಟು ಜನ ಗೆಳೆಯರಿದ್ದಾರೆ. ಅವರು ದೂರವಾಣಿ ಮೂಲಕ ನನ್ನೊಂದಿಗೆ ಮಾತನಾಡಿ ಸತ್ಯವನ್ನು ಬರೆಯಲು ಆಗುತ್ತಿಲ್ಲ ಎಂದು ಹೇಳುತ್ತಾರೆ. ನಮ್ಮ ಅಸಹಾಯಕತೆ ಅರ್ಥಮಾಡಿಕೊಳ್ಳಿ ಎಂದು ಹೇಳಿಕೊಳ್ಳುತ್ತಾರೆ‌. ಇದು ನನಗೆ ಅರ್ಥವಾಗುತ್ತದೆ ಎಂದು ಹೇಳಿದರು.

ಅಲ್ಲದೆ ಪ್ರೆಸ್ ಕ್ಲಬ್ ಕಡೆಯಿಂದ ಕಳಿಸಿರುವ ಅಧಿಕೃತ ಆಹ್ವಾನದಲ್ಲಿ ಈ ಹೇಳಿಕೆ ಇಲ್ಲ. ಆದರೆ, ಧರ್ಮಸ್ಥಳ ಪ್ರಕರಣದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಉದ್ದೇಶ ಪೂರಕವಾಗಿ ನನ್ನನ್ನು ತೇಜೋವಧೆ ಮಾಡುತ್ತಿರುವ ಮಾಧ್ಯಮಗಳನ್ನೇ ಗುರಿಯಾಗಿಸಿ ಇದನ್ನು ಹೇಳಿದ್ದೇನೆ ಹೊರತು ಬೇರೆ ಯಾವುದೇ ಅರ್ಥ ಬೇಕಿಲ್ಲ ಎಂದರು.

ಧರ್ಮಸ್ಥಳ ಬುರುಡೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿನ್ನಯ್ಯ ತನಗೆ ಪ್ರಕಾಶ್ ರಾಜ್ ಕರೆ ಮಾಡಿ ಗಿರೀಶ್ ಮಟ್ಟಣ್ಣನವರ್ ಹೇಳಿದಂತೆ ಕೇಳು ಎಂದು ಹೇಳಿದ್ದರು ಎಂದು ಆರೋಪ ಮಾಡಿದ್ದಾನೆ. ಹೀಗಾಗಿಯೇ, ಪತ್ರಿಕಾಗೋಷ್ಠಿ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಮಾಧ್ಯಮಗಳಲ್ಲಿ ಚಿನ್ನಯ್ಯ ಎಂಬಾತ ನನ್ನ ಹೆಸರು ಹೇಳಿದ್ದಾನೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಈ ಪ್ರಕರಣದಲ್ಲಿ 200 ಕೋಟಿ ರೂಪಾಯಿ ಹಗರಣ, ಪೇಮೆಂಟ್ ವ್ಯವಹಾರ ನಡೆದಿದೆ ಎಂದು ಚಿನ್ನಯ್ಯ ಹೇಳಿದ್ದಾನಂತೆ. ಕೆಲವು ಮಾಧ್ಯಮಗಳಂತೂ ಈ ಷಡ್ಯಂತ್ರದಲ್ಲಿ ಪ್ರಕಾಶ್ ರಾಜ್ ಕೈವಾಡ ಇದೆ ಎಂದು ಅವರೇ ಸ್ವತಃ ಡಿಕ್ಲೇರ್ ಮಾಡಿಬಿಟ್ಟಿದ್ದಾರೆ. ಆದರೆ ನಾನು ಇದುವರೆಗೂ ಚಿನ್ನಯ್ಯ ಅಥವಾ ಮಟ್ಟಣ್ಣನವರ್ ಸೇರಿ ಯಾರನ್ನೂ ಖುದ್ದಾಗಿ ಭೇಟಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಧರ್ಮಸ್ಥಳದಲ್ಲಿ ಸತ್ತಿರುವ ಹೆಣ್ಣು ಮಕ್ಕಳ ಮೇಲೆ ನಿಮಗೇಕೆ ಕನಿಕರ ಇಲ್ಲ? ಅಲ್ಲಿ ಮೃತಪಟ್ಟ ಹೆಣ್ಣು ಮಕ್ಕಳು ನಮ್ಮವರಲ್ವಾ? ಸೌಜನ್ಯ ಹೇಗೆ ಸತ್ತಳು ಮತ್ತು ಅಲ್ಲಿ ಉಳಿದ ಹೆಣ್ಣು ಮಕ್ಕಳ ಸಾವುಗಳು ಹೇಗೆ ಸಂಭವಿಸಿದವು ಎಂದು ಪ್ರಶ್ನಿಸುವುದು ತಪ್ಪಾ? ನಾನು ಆ ಸಾವುಗಳ ನ್ಯಾಯಕ್ಕಾಗಿ ಪ್ರಶ್ನೆ ಮಾಡಿದ್ದೇನೆಯೇ ಹೊರತು ಕ್ಷೇತ್ರದ ವಿರುದ್ಧ ಷಡ್ಯಂತ್ರ ಮಾಡಿಲ್ಲ" ಎಂದು ಪ್ರಕಾಶ್ ರಾಜ್ ಸ್ಪಷ್ಟಪಡಿಸಿದ್ದಾರೆ.

ಧರ್ಮಸ್ಥಳಕ್ಕೆ ಅಪಪ್ರಚಾರ ಮಾಡಲು ಪ್ರಕಾಶ್ ರಾಜ್ 200 ಕೋಟಿ ಡೀಲ್ ಮಾಡಿದ್ದಾರೆ ಅಂತ ಬಿಂಬಿಸಲಾಗುತ್ತಿದೆ. ಅಷ್ಟಕ್ಕೂ 200 ಕೋಟಿ ರೂಪಾಯಿ ಹಣವನ್ನು ನಾನೆಲ್ಲಿಂದ ತರಲಿ? ಪರಮ ಪವಿತ್ರ ಧರ್ಮಸ್ಥಳದ ಮೇಲೆ ನಾನು ಯಾಕೆ ಅಪಪ್ರಚಾರ ಮಾಡಲಿ? ವಿಷಯವನ್ನು ತಿರುಚಿ ನನಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ನಾನು ಧರ್ಮ ವಿರೋಧಿ ಅಂತೆಲ್ಲಾ ಯಾಕೆ ಬಣ್ಣ ಬಳಿಯುತ್ತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಒಪ್ಪಂದ ಬೆನ್ನಲ್ಲೇ Hormuzನಲ್ಲಿ ತೈಲ ಸಾಗಣೆ ಪುನರಾರಂಭ: ಲೆಬನಾನ್'ನಲ್ಲಿ ಮುಂದುವರೆದ ಉದ್ವಿಗ್ನತೆ, ಮಧ್ಯಪ್ರಾಚ್ಯ ಶಾಂತಿಗೆ ಕಂಟಕ..!

ಶತ್ರು ಮುಂದೆ ಶರಣಾಗುವ ಪ್ರಶ್ನೆಯೇ ಇಲ್ಲ, ಹತಾಶೆಯಿಂದ ಒಪ್ಪಂದಕ್ಕೆ ಮುಂದಾಗಿದ್ದಾರೆ: ಇರಾನ್‌ ಪರಮೋಚ್ಛ ನಾಯಕ ಮೊಜ್ತಾಬಾ ಖಮೇನಿ

ಪರಿಷತ್ತಿನಲ್ಲಿ ಬಲ ಹೆಚ್ಚಿಸಿಕೊಂಡ ಕಾಂಗ್ರೆಸ್: ಗೋಹತ್ಯೆ ನಿಷೇಧ ಮಸೂದೆ ಪರಿಶೀಲಿಸುವತ್ತ ಸರ್ಕಾರದ ಚಿತ್ತ?

ಧರ್ಮಸ್ಥಳ ಪ್ರಕರಣ ತನಿಖೆ ಚುರುಕು: ನಾಪತ್ತೆಯಾಗಿರುವ 17 ಮಂದಿ DNA ಹೊಂದಾಣಿಕೆ ಪ್ರಕ್ರಿಯೆ ಆರಂಭ..!

ವಿಧಾನ ಪರಿಷತ್ ಚುನಾವಣೆ: ಯಾವುದೇ ತಂತ್ರ ರೂಪಿಸಿಲ್ಲ, ಅಡ್ಡ ಮತದಾನ ಬಗ್ಗೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್