ಬೆಂಗಳೂರು: ತೀವ್ರ ವಾಗ್ವಾದದ ನಂತರ ತನ್ನ ಲಿವ್-ಇನ್ ಸಂಗಾತಿಯ ಕತ್ತು ಹಿಸುಕಿ ಕೊಂದ ಆರೋಪದ ಮೇಲೆ 27 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮೃತಳನ್ನು ಅನುಷಾ (20) ಎಂದು ಗುರುತಿಸಲಾಗಿದೆ.
ಬೆಂಗಳೂರಿನಲ್ಲಿ ನೀರಿನ ಟ್ಯಾಂಕರ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಆರೋಪಿ ಶರತ್ ಮತ್ತು ಸಂತ್ರಸ್ತೆ ಹಾಸನ ಜಿಲ್ಲೆಯ ಸಕಲೇಶಪುರದವರು. ಇಬ್ಬರು ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದಾರೆ ಮತ್ತು ಕಳೆದ ಆರು ತಿಂಗಳಿನಿಂದ ಮಲ್ಲೇಶ್ವರಂನಲ್ಲಿ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಶನಿವಾರ ರಾತ್ರಿ ವೈಯಕ್ತಿಕ ಮತ್ತು ಕೌಟುಂಬಿಕ ವಿಷಯಗಳ ಬಗ್ಗೆ ದಂಪತಿ ನಡುವೆ ತೀವ್ರ ಜಗಳ ನಡೆದಿದ್ದು, ನಂತರ ಶರತ್ ಆಕೆಯ ಕತ್ತು ಹಿಸುಕಿ ಕೊಂದಿದ್ದಾನೆ ಎನ್ನಲಾಗಿದೆ.
ಆದರೆ, ಸೋಮವಾರ ಈ ವಿಷಯ ಪೊಲೀಸರಿಗೆ ತಿಳಿಸಿದೆ. ನಂತರ ಶೇಷಾದ್ರಿಪುರಂ ಪೊಲೀಸ್ ಠಾಣೆಯ ತಂಡವು ಅಪರಾಧ ನಡೆದ ಸ್ಥಳವನ್ನು ಪರಿಶೀಲಿಸಿದೆ.
ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.