ಬಸವರಾಜ ಹೆರೂರ್ 
ರಾಜ್ಯ

ಗೃಹ ಸಚಿವರ ಸ್ವಕ್ಷೇತ್ರ ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು PSI ಆತ್ಮಹತ್ಯೆಗೆ ಶರಣು!

ಕಳೆದ ಎರಡು ವರ್ಷಗಳಿಂದ ಕಲಬುರಗಿ ಡಿಸಿಆರ್‌ಬಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಬಸವರಾಜ ಹೆರೂರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕಲಬುರಗಿ: ಕಳೆದ ಎರಡು ವರ್ಷಗಳಿಂದ ಕಲಬುರಗಿ ಡಿಸಿಆರ್‌ಬಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಬಸವರಾಜ ಹೆರೂರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

2014ರ ಬ್ಯಾಚ್ ಪಿಎಸ್‌ಐ ಬಸವರಾಜ ಹೆರೂರ್, ಮಂಗಳವಾರ ತಡರಾತ್ರಿ ತಮ್ಮ ಸ್ನೇಹಿತರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವ ಕುರಿತು ಮಾತನಾಡಿದ್ದರು. ಈ ಸುದ್ದಿಯನ್ನು ಸ್ನೇಹಿತರು ಅವರ ತಂದೆಗೆ ವಿಷಯ ತಿಳಿಸಿದ್ದು, ಅವರ ತಂದೆ ಮನೆಗೆ ಬಂದು ಬಾಗಿಲು ಒಡೆದು ನೋಡಿದಾಗ ಬಸವರಾಜ ಹೆರೂರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪಿಎಸ್ಐ ಈ ದುಡುಕಿನ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಶಂಕಿಸಲಾಗಿದೆ. ಈ ಸಂಬಂಧ ಆರ್. ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್​ ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಮಗಳನ್ನು ಕ್ಷಮಿಸಿ ಮೋದಿಜಿ ಹೊಸ ಜೀವನ ಕೊಟ್ಟಿದ್ದಾರೆ, ಮಕ್ಕಳಿಗೆ Instagram, Facebook ಬೇಡ': ಪ್ರಧಾನಿ ವಿರುದ್ಧ ನಿಂದನೆ ಮಾಡಿದ ಬಾಲಕಿಯ ತಾಯಿ

ನಿಮ್ಮಿಂದಂತು ಸರಿಯಾಗಿ ಸರ್ವಾಧಿಕಾರಿಯಾಗಲು ಆಗಲಿಲ್ಲ: ಕಾಂಗ್ರೆಸ್ ನೋಡಿ ಕಲಿಯಿರಿ; ಬಿಜೆಪಿ ತೊರೆದ ಶಹಜಾದ್ ಪೂನಾವಾಲಾ!

‘ಭಾರತವನ್ನು ಟಾರ್ಗೆಟ್ ಮಾಡಲು ಶತ್ರು ರಾಷ್ಟ್ರಗಳ ಅಸ್ತ್ರ ಡ್ರಗ್ಸ್, ಕ್ಷಣಿಕ ಸುಖಕ್ಕೆ ಅಮೂಲ್ಯ ಜೀವನ ನಾಶ ಮಾಡಿಕೊಳ್ಳಬೇಡಿ’: ಪ್ರಧಾನಿ ಮೋದಿ ಎಚ್ಚರಿಕೆ

ತೀವ್ರಗೊಂಡ ಗಾಯದ ನೋವು: ಶ್ರೀಲಂಕಾ ಟೆಸ್ಟ್ ಸರಣಿಯಿಂದ ಜಸ್ಪ್ರೀತ್ ಬುಮ್ರಾ ಔಟ್

ಮಧ್ಯಪ್ರಾಚ್ಯ ರಾಷ್ಟ್ರಗಳ ಮನವಿಗೆ ಮಣಿದ Trump: ಕೊನೆ ಕ್ಷಣದಲ್ಲಿ Iran ಮೇಲಿನ ದಾಳಿಗೆ ಬ್ರೇಕ್‌; ಒಪ್ಪಂದವಾದರೆ ಯುದ್ಧ ಅಂತ್ಯ, ಇಲ್ಲದಿದ್ದರೆ ಭಾರೀ ದಾಳಿ ಎಚ್ಚರಿಕೆ..!