ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ 5ನೇ ಅಭ್ಯರ್ಥಿ ಗೆಲುವು ಸಾಧಿಸಿದ್ದು ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕಾರ್ತಿಕ್ ಗೆ 32 ಮತಗಳು ಸಿಕ್ಕಿದ್ದರೆ ಜೆಡಿಎಸ್ ನ ಗೋವಿಂದರಾಜುಗೆ ಕೇವಲ 14 ಮತಗಳು ಮಾತ್ರ ಬಂದಿವೆ. ಜೆಡಿಎಸ್ ನಿಂದ 6 ಹಾಗೂ ಬಿಜೆಪಿಯಿಂದ 3 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.