ರಮೇಶ್ ಜಿಗಜಿಣಗಿ  
ರಾಜ್ಯ

ದಲಿತ ವ್ಯಕ್ತಿಗೆ ಆರ್‌ಎಸ್‌ಎಸ್ ಬಗ್ಗೆ ಕಾಳಜಿ ಏಕೆ? RSS ತಂಟೆಗೆ ಬಂದವರು ಉಳಿದಿಲ್ಲ: ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ; Video

"ಆರ್‌ಎಸ್‌ಎಸ್ ಅನ್ನು ನೋಂದಾಯಿಸುವುದರಿಂದ ನೀವು ಏನು ಸಾಧಿಸುತ್ತೀರಿ? ಅದು ಗೃಹ ಸಚಿವರ ಕೆಲಸವಲ್ಲ" ಎಂದು ಅವರು ಹೇಳಿದರು.

ವಿಜಯಪುರ: ದಲಿತ ವ್ಯಕ್ತಿಯೊಬ್ಬರಿಗೆ ಆರ್ ಎಸ್ ಎಸ್ ಬಗ್ಗೆ ಇಲ್ಲ ಸಲ್ಲದ ಕಾಳಜಿ ಏಕೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಕಿಡಿ ಕಾರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ ವಿರುದ್ಧ ಹೋರಾಡಿದವರು ಬದುಕುಳಿದಿಲ್ಲ. ದಲಿತ ವ್ಯಕ್ತಿಯೊಬ್ಬರು ಆರ್‌ಎಸ್‌ಎಸ್ ಬಗ್ಗೆ ಏಕೆ ಕಾಳಜಿ ವಹಿಸಬೇಕು?" ಎಂದು ಪ್ರಶ್ನಿಸಿದ್ದಾರೆ. "ಆರ್‌ಎಸ್‌ಎಸ್ ಅನ್ನು ನೋಂದಾಯಿಸುವುದರಿಂದ ನೀವು ಏನು ಸಾಧಿಸುತ್ತೀರಿ? ಅದು ಗೃಹ ಸಚಿವರ ಕೆಲಸವಲ್ಲ" ಎಂದು ಅವರು ಹೇಳಿದರು.

ಇದೇ ವೇಳೆ ಪ್ರಿಯಾಂಕ್ ಖರ್ಗೆ ಅವರ ಸಾಮರ್ಥ್ಯದ ಬಗ್ಗೆ ಪ್ರಶ್ನಿಸಿದ ಸಂಸದರು, "ಅವರ ತಂದೆ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ನಲ್ಲಿ ದಶಕಗಳ ಕಾಲ ದುಡಿದಿದ್ದಾರೆ ಎಂಬ ಕಾರಣಕ್ಕೆ ಇವರಿಗೆ ಗೃಹ ಖಾತೆ ನೀಡಲಾಗಿದೆ. ಇವರಿಗೆ ಸ್ವಂತ ಬುದ್ಧಿ ಇಲ್ಲ. ಸುಮ್ಮನೆ ಸಿಕ್ಕಿರುವ ಗೃಹ ಖಾತೆಯಲ್ಲಿ ಸರಿಯಾಗಿ ಕೆಲಸ ಮಾಡಿ ಹೆಸರು ಗಳಿಸಲಿ" ಎಂದು ವ್ಯಂಗ್ಯವಾಡಿದರು.

ಸಂಘಟನೆಯ ವಿರುದ್ಧದ ಹೇಳಿಕೆಗಳನ್ನು ನಿಲ್ಲಿಸಿ, ಗೃಹ ಸಚಿವರಾಗಿ ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಲಿ ಎಂದು ಅವರು ಈ ಸಂದರ್ಭದಲ್ಲಿ ಸಲಹೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!

18 ಎಸೆತ, 38 ರನ್: ಜೂನಿಯರ್ Dravid ಅಬ್ಬರಕ್ಕೆ ಆಸಿಸ್ ತತ್ತರ; 7 ರನ್‌ಗಳಿಂದ ಗೆದ್ದ ಭಾರತ U-19 ತಂಡ