ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ವಿಚಿತ್ರ ಪ್ರಕರಣ: ₹50 ಲಕ್ಷ ಕೊಡಿ, ಇಲ್ಲಾಂದ್ರೆ HIV ಇರುವುದಾಗಿ ವದಂತಿ ಹಬ್ಬಿಸುತ್ತೇನೆ ಎಂದು ಬೆದರಿಕೆ; ಪತ್ನಿ ವಿರುದ್ಧವೇ ಉದ್ಯಮಿ ದೂರು!

ಬೆಂಗಳೂರಿನ ಉದ್ಯಮಿ ನೀಡಿರುವ ದೂರಿನ ಆಧಾರದಲ್ಲಿ ಮಾರತ್ತಹಳ್ಳಿ ಪೊಲೀಸರು 37 ವರ್ಷದ ಸ್ವಾತಿ ಬಿ. ವಿರುದ್ಧ ವಂಚನೆ, ನಂಬಿಕೆ ದ್ರೋಹ, ಕಳವು, ಸುಲಿಗೆ, ಮಾನಹಾನಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲೊಂದು ವಿಚಿತ್ರ ಪ್ರಕರಣ ವರದಿಯಾಗಿದ್ದು, ಎಚ್‌ಐವಿ/ಏಡ್ಸ್‌ ಸೋಂಕು ಇದೆ ಎಂಬ ಸುಳ್ಳು ಸುದ್ದಿ ಹಬ್ಬಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ವಿಚ್ಛೇದಿತ ಪತ್ನಿ ವಿರುದ್ಧವೇ ಉದ್ಯಮಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

ಬೆಂಗಳೂರಿನ ಉದ್ಯಮಿ ನೀಡಿರುವ ದೂರಿನ ಆಧಾರದಲ್ಲಿ ಮಾರತ್ತಹಳ್ಳಿ ಪೊಲೀಸರು 37 ವರ್ಷದ ಸ್ವಾತಿ ಬಿ. ವಿರುದ್ಧ ವಂಚನೆ, ನಂಬಿಕೆ ದ್ರೋಹ, ಕಳವು, ಸುಲಿಗೆ, ಮಾನಹಾನಿ ಹಾಗೂ ಕ್ರಿಮಿನಲ್ ಬೆದರಿಕೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ಕಂಪ್ಯೂಟರ್ ಏಡೆಡ್ ಡಿಸೈನ್ ಅಂಡ್ ಡ್ರಾಫ್ಟಿಂಗ್(CADD) ತರಬೇತಿ ಸಂಸ್ಥೆ ನಡೆಸುತ್ತಿರುವ 51 ವರ್ಷದ ಉದ್ಯಮಿ, 2021ರ ಅಕ್ಟೋಬರ್‌ನಲ್ಲಿ ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಸ್ವಾತಿಯನ್ನು ಪರಿಚಯಿಸಿಕೊಂಡು 2022ರ ಫೆಬ್ರವರಿಯಲ್ಲಿ ವಿವಾಹವಾಗಿದ್ದರು.

ವಿವಾಹದ ನಂತರ ಮಹಿಳೆ ತನ್ನ ಅಸಲಿ ಮುಖ ತೋರಿಸಿದ್ದು, ಬೇಡಿಕೆಗಳನ್ನು ಈಡೇರಿಸದಿದ್ದರೆ ಸುಳ್ಳು ಆರೋಪಗಳನ್ನು ಹರಡುತ್ತೇನೆ ಎಂದು ತಮ್ಮ ಉದ್ಯಮಿ ಪತಿಗೆ ಬೆದರಿಕೆ ಹಾಕಿದ್ದಾಳೆ. ಅಲ್ಲದೆ 50 ಲಕ್ಷ ಹಣಕ್ಕೂ ಬೇಡಿಕೆ ಇಟ್ಟಿದ್ದಾಳೆ.

ಹಣ ನೀಡದಿದ್ದರೆ ನಿಮಗೆ ಎಚ್‌ಐವಿ ಇದೆ ಹಾಗೂ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದೀರಿ ಎಂದು ಸುಳ್ಳು ಪ್ರಚಾರ ಮಾಡುವುದಾಗಿ ಪತ್ನಿ ತನಗೆ ಬೆದರಿಕೆ ಹಾಕಿರುವುದಾಗಿ ಉದ್ಯಮಿ ದೂರಿನಲ್ಲಿ ಆರೋಪಿಸಿದ್ದಾರೆ.

ತನ್ನ ಪತ್ನಿ, ಮನೆಯಿಂದ 18 ಲಕ್ಷ ನಗದು, ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ ಆಭರಣಗಳನ್ನು ಕಳವು ಮಾಡಿರುವುದಲ್ಲದೆ, ನಕಲಿ ಕೀ ಬಳಸಿ ಕಾರು ಕೂಡ ತೆಗೆದುಕೊಂಡು ಹೋಗಿದ್ದಾಳೆ. ಸಾಲದ್ದಕ್ಕೆ ಕಚೇರಿಗೆ ಹಾನಿ ಮಾಡುವ ಜೊತೆಗೆ ಚೆಕ್‌ಗೆ ನಕಲಿ ಸಹಿ ಹಾಕಿ ಬ್ಯಾಂಕ್ ಖಾತೆಯಿಂದ 83 ಸಾವಿರ ಹಣ ಡ್ರಾ ಮಾಡಿಕೊಂಡಿರುವುದಾಗಿ ಕೂಡ ದೂರಿನಲ್ಲಿ ತಿಳಿಸಿದ್ದಾರೆ.

ಪತ್ನಿಗೆ ಮೂರು ಮದುವೆ

ಸ್ವಾತಿ ತನ್ನನ್ನು ಮದುವೆಯಾಗುವ ಮೊದಲು ಆಕೆ ಮೂರು ಬಾರಿ ಮದುವೆಯಾಗಿದ್ದಳು. ನ್ಯಾಯಾಧೀಶರು, ರಾಜಕಾರಣಿಗಳು ಹಾಗೂ ಪ್ರಭಾವಿ ವ್ಯಕ್ತಿಗಳ ಪರಿಚಯವಿದೆ ಎಂದು ಹೇಳಿಕೊಂಡು, ನನ್ನ ವಿರುದ್ಧ ಏನು ಬೇಕಾದರೂ ಮಾಡಬಲ್ಲೆ ಎಂದು ಆಗಾಗ ಬೆದರಿಸುತ್ತಿದ್ದಳು. ಮದುವೆಗೆ ಮುನ್ನವೂ ಹಿಂದಿನ ವಿವಾಹದಿಂದ ಜನಿಸಿದ ಮಗನ ಶಿಕ್ಷಣಕ್ಕಾಗಿ ತನ್ನಿಂದ ಹೆಚ್ಚಿನ ಹಣ ಖರ್ಚು ಮಾಡಿಸಿದ್ದಾಳೆ ಎಂದು ಉದ್ಯಮಿ ಆರೋಪಿಸಿರೋದಾಗಿ ಡೆಕ್ಕನ್​​ ಹೆರಾಲ್ಡ್​​ ವರದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್ ವೈಮಾನಿಕ ದಾಳಿಗೆ ತತ್ತರಿಸಿದ ಲೆಬನಾನ್: 16 ಮಂದಿ ಬಲಿ; ಅಮೆರಿಕ-ಇರಾನ್ ಶಾಂತಿ ಮಾತುಕತೆ ಮುಂದೂಡಿಕೆ, ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ..!

ಏರ್ ಫೋರ್ಸ್ ಒನ್‌ಗೆ ಟ್ರಂಪ್ ಗುಡ್ ಬೈ; ಕತಾರ್ ಗಿಫ್ಟ್ ನೀಡಿದ ವಿಮಾನದಲ್ಲೇ ಇನ್ಮುಂದೆ ಅಮೆರಿಕ ಅಧ್ಯಕ್ಷರ ಪ್ರಯಾಣ!

NEET ಭದ್ರತೆಗೆ ಆದ್ಯತೆ; ದೇಶಾದ್ಯಂತ Telegram app ತಾತ್ಕಾಲಿಕ ನಿಷೇಧ, ಕೇಂದ್ರದ ಆದೇಶ ಎತ್ತಿಹಿಡಿದ Delhi ಹೈಕೋರ್ಟ್..!

ಚಿಕ್ಕಮಗಳೂರು: ನಡು ರಸ್ತೆಯಲ್ಲಿ ಲಾಂಗ್​ನಿಂದ ಕೇಕ್‌ ಕತ್ತರಿಸಿ ಬರ್ತಡೇ ಸೆಲೆಬ್ರೇಷನ್‌; ಪುಡಾರಿ ವಿರುದ್ಧ FIR

NEET UG 2026ಗೆ ಮತ್ತೊಂದು ಬಲಿ; ಮರು ಪರೀಕ್ಷೆಗೂ ಮುನ್ನ 17 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ