ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ  
ರಾಜ್ಯ

CM ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ: ಮಹತ್ವದ ಘೋಷಣೆಗಳ ನಿರೀಕ್ಷೆ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಸಚಿವ ಸಂಪುಟ ಸಭೆ ಎದುರು ವಿಷಯ ಮಂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಕಾರ್ಯದರ್ಶಿ ಅವರು ಪತ್ರ ಬರೆದಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಬಹುತೇಕ ವಿಷಯ ಮಂಡನೆಯಾಗಲಿದೆ.

ಬೆಂಗಳೂರು: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯದಲ್ಲಿ ಹೊಸದಾಗಿ ‘ಮುಖ್ಯಮಂತ್ರಿಗಳ ಜನಸ್ಪಂದನ ಮತ್ತು ಜನಹಿತ ಆಡಳಿತ ಇಲಾಖೆ’ ಹಾಗೂ ‘ಅನಿವಾಸಿ ಭಾರತೀಯ ವ್ಯವಹಾರಗಳ ಇಲಾಖೆ’ ರಚಿಸುವ ಬಗ್ಗೆ ಹಾಗೂ ವಿಧಾನಪರಿಷತ್‌ನ ಐದು ಸ್ಥಾನಗಳಿಗೆ ನಾಮನಿರ್ದೇಶನ ಮಾಡುವ ಕುರಿತು ಮಹತ್ವದ ಚರ್ಚೆ ನಡೆಯುವ ಸಾಧ್ಯತೆಯಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಅಧ್ಯಕ್ಷತೆಯಲ್ಲಿ ನಿನ್ನೆ ಕರಾವಳಿ ಪ್ರವಾಸೋದ್ಯಮ ಸಭೆ ನಡೆಸಿ ಎರಡು ನೂತನ ಇಲಾಖೆ ಸ್ಥಾಪಿಸುವ ಕುರಿತು ಘೋಷಣೆ ಮಾಡಿದ್ದರು.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಸಚಿವ ಸಂಪುಟ ಸಭೆ ಎದುರು ವಿಷಯ ಮಂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಕಾರ್ಯದರ್ಶಿ ಅವರು ಪತ್ರ ಬರೆದಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಬಹುತೇಕ ವಿಷಯ ಮಂಡನೆಯಾಗಲಿದೆ.

5 ಸ್ಥಾನಗಳಿಗೆ ನಾಮ ನಿರ್ದೇಶನ

ಜುಲೈ 21ಕ್ಕೆ ಅಡಗೂರು ಎಚ್.ವಿಶ್ವನಾಥ್‌, ಭಾರತಿ ಶೆಟ್ಟಿ, ಶಾಂತರಾಮ್‌ ಬುಡ್ನಸಿದ್ಧಿ, ಡಾ.ತಳವಾರ್‌ ಬಾಬಣ್ಣ ಹಾಗೂ ರಮೇಶ್‌ ಬಾಬು ಅವರ ವಿಧಾನಪರಿಷತ್ ನಾಮನಿರ್ದೇಶನದ ಅವಧಿ ಮುಕ್ತಾಯವಾಗಲಿದೆ. ಈ ಐದು ಸ್ಥಾನಗಳಿಗೆ ರಾಜ್ಯಪಾಲರ ಮೂಲಕ ನಾಮನಿರ್ದೇಶನಗೊಳ್ಳುವ ಕುರಿತು ಸಹ ಇಂದಿನ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ.

2,200 ತರಗತಿ ಕೊಠಡಿಗಳ ನಿರ್ಮಾಣ

ಜತೆಗೆ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ 360 ಕೋಟಿ ರು. ವೆಚ್ಚದಲ್ಲಿ 2,200 ತರಗತಿ ಕೊಠಡಿಗಳ ನಿರ್ಮಾಣ ಮಾಡುವ ಬಗ್ಗೆ, ಸಾರಿಗೆ ಇಲಾಖೆಯ ವಿವಿಧ ನಿಗಮಗಳಿಂದ ಬಸ್ಸುಗಳ ಖರೀದಿಸುವ ಬಗ್ಗೆ, ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕರಿಗೆ 63 ಕೋಟಿ ರು. ವೆಚ್ಚದಲ್ಲಿ ಫಾಸ್ಟ್‌ ಫುಡ್‌ ಟ್ರಕ್‌, ಟ್ರೈಲರ್‌, ಮೊಬೈಲ್‌ ಕಿಚನ್‌ ಫುಡ್‌ ಕಿಯೋಸ್ಕ್‌ ಸೌಲಭ್ಯ ಕಲ್ಪಿಸುವ ಬಗ್ಗೆ ಚರ್ಚೆಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!