ಕೆ.ಎಸ್. ಲಿಂಗೇಶ್  
ರಾಜ್ಯ

ಬಗರ್ ಹುಕುಂ ಹಗರಣ: ಬೇಲೂರು ಮಾಜಿ ಶಾಸಕ ಲಿಂಗೇಶ್ ವಶಕ್ಕೆ ಪಡೆದ ಸಿಐಡಿ ಪೊಲೀಸರು!

ದೂರಿನಲ್ಲಿ ಸುಮಾರು 2,750 ಎಕರೆ ಸರ್ಕಾರಿ ಜಮೀನನ್ನು ನಕಲಿ ದಾಖಲೆಗಳ ಆಧಾರದ ಮೇಲೆ 1,430 ಬೋಗಸ್ ಫಲಾನುಭವಿಗಳಿಗೆ ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.

ಹಾಸನ: ಬಗರ್ ಹುಕುಂ ಜಮೀನು ಮಂಜೂರಾತಿಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದ 2023ರ ಪ್ರಕರಣದಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಶುಕ್ರವಾರ ಬೆಳಿಗ್ಗೆ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ 2018- 23 ರ ಅವಧಿಯಲ್ಲಿ ಶಾಸಕರಾಗಿದ್ದಾಗ ಬಗರ್ ಹುಕುಂ ಸಾಗುವಳಿ ಸಕ್ರಮ ಸಮಿತಿ ಅಧ್ಯಕ್ಷರಾಗಿದ್ದ ಲಿಂಗೇಶ್ ಅವರು 2,750 ಎಕರೆ ಜಮೀನನ್ನು 1,430 ಮಂದಿಗೆ ಅಕ್ರಮವಾಹಿ ಮಂಜೂರಾತಿ ಮಾಡಲಾಗಿದೆ ಎಂದು ಆರೋಪಿಸಿ ಕೋಲಾರದ ಸಾಮಾಜಿಕ ಕಾರ್ಯಕರ್ತ ಕೆ ಸಿ ರಾಜಣ್ಣ ಖಾಸಗಿ ದೂರು ಸಲ್ಲಿಸಿದ್ದರು.

ದೂರಿನಲ್ಲಿ ಸುಮಾರು 2,750 ಎಕರೆ ಸರ್ಕಾರಿ ಜಮೀನನ್ನು ನಕಲಿ ದಾಖಲೆಗಳ ಆಧಾರದ ಮೇಲೆ 1,430 ಬೋಗಸ್ ಫಲಾನುಭವಿಗಳಿಗೆ ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.

ಈ ದೂರನ್ನು ಪರಿಗಣಿಸಿದ್ದ ವಿಚಾರಣಾಧೀನ ನ್ಯಾಯಾಲಯ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆದೇಶಿಸಿತ್ತು. ಇದರನ್ವಯ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 468, 464, 465, 471, 409, 420, 120ಬಿ ಅಡಿ ಪ್ರಕರಣ ದಾಖಲಿಸಲಾಗಿತ್ತು.

ಮೊದಲ ಆರೋಪಿ ಮಾಜಿ ಶಾಸಕ ಲಿಂಗೇಶ್‌ 750 ಎಕರೆಗಿಂತ ಹೆಚ್ಚಿನ ಭೂಮಿ ಮಂಜೂರಾತಿಗೆ ಅನುಮೋದಿಸಿದ್ದಾರೆ. ಉಳಿದ ಆರೋಪಿಗಳೆಲ್ಲರೂ ಅಧಿಕಾರಿಗಳ ಜೊತೆ ಶಾಮೀಲಾಗಿ ತಮ್ಮ ಅಧಿಕಾರ ಮತ್ತು ಸ್ಥಾನ ದುರ್ಬಳಕೆ ಮಾಡಿಕೊಂಡಿದ್ದಾರೆನೆಂಬ ಆರೋಪವಿದೆ. ಅಲ್ಲದೆ ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಲು ಸಹಕಾರ ‌ನೀಡಿದ್ದ, ಸರ್ಕಾರಕ್ಕೆ ವಂಚಿಸುವ ಉದ್ದೇಶದಿಂದ ಒಳಸಂಚು ನಡೆಸಿದ್ದಾರೆಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!