ಸುಮಾ, ಸಂದೀಪ್ ಹಾಗೂ ತಾಯಿ ಮಹಾದೇವಿ 
ರಾಜ್ಯ

ಬೆಳಗಾವಿ: 2 ಕೋಟಿ ರೂ ವಿಮೆ ಹಣಕ್ಕಾಗಿ ಪ್ರಿಯಕರನ ಜತೆ ಸೇರಿ ಗಂಡನನ್ನೇ ಕೊಂದ ಮಗಳು; ಮರ್ಯಾದೆಗೆ ಅಂಜಿ ತಾಯಿ ಆತ್ಮಹತ್ಯೆ!

ಪ್ರಕರಣದ ಪ್ರಮುಖ ಆರೋಪಿ ಸುಮಾ ಮಂಜರಗಿ ಬಂಧನಕ್ಕೊಳಗಾಗುತ್ತಿದ್ದಂತೆ, ಅತ್ತ ಅವರ ತಾಯಿ, ಮಗಳ ಕೃತ್ಯದಿಂದ ಆಘಾತಗೊಂಡಿದ್ದಾರೆ ಮತ್ತು ಮರ್ಯಾದೆಗೆ ಅಂಜಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯ  ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ಎರಡು ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಪ್ರಿಯಕರನ ಜೊತೆ ಸೇರಿ ತನ್ನ ಪತಿ, ಮಾಜಿ ಸೈನಿಕನ ಕೊಲೆ ಮಾಡಿದ್ದ ಸುಮಾ ಮಂಜರಗಿ ಸೇರಿದಂತೆ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಸುಮಾ ಮಂಜರಗಿ ಬಂಧನಕ್ಕೊಳಗಾಗುತ್ತಿದ್ದಂತೆ, ಅತ್ತ ಅವರ ತಾಯಿ, ಮಗಳ ಕೃತ್ಯದಿಂದ ಆಘಾತಗೊಂಡಿದ್ದಾರೆ ಮತ್ತು ಮರ್ಯಾದೆಗೆ ಅಂಜಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾಜಿ ಸೈನಿಕ ಸಂದೀಪ್ ಮಂಜರಗಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ ಸುಮಾ ಮಂಜರಗಿ ಅವರ ತಾಯಿ ಮಹಾದೇವಿ ಬದಾಮಿ(57) ಅವರು ಇಂದು ನೇಣಿಗೆ ಶರಣಾಗಿದ್ದಾರೆ.

ಮಗಳು ಅರೆಸ್ಟ್ ಆಗುತ್ತಿದ್ದಂತೆ ಮಾನಸಿಕವಾಗಿ ಜರ್ಜರಿತರಾಗಿದ್ದ ತಾಯಿ ಮಹಾದೇವಿ, ಮನನೊಂದು ಇಂದು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಮೆ ಹಣಕ್ಕಾಗಿ ಕೊಲೆ ಸಂಚು

ಮಾಜಿ ಯೋಧ ಸಂದೀಪ್ ಹೆಸರಿನಲ್ಲಿದ್ದ 2 ಕೋಟಿ ರೂ ವಿಮೆ ಹಣಕ್ಕಾಗಿ ಆತನನ್ನು ಕೊಂದು ಸಹಜ ಸಾವು ಎಂದು ಬಿಂಬಿಸಲು ಆರೋಪಿಗಳು ಮುಂದಾಗಿದ್ದರು.

ಸಂದೀಪ್ ಅವರು HDFC ಬ್ಯಾಂಕ್ ಮತ್ತು SBI ಯಲ್ಲಿ ವಿಮಾ ಪಾಲಿಸಿಗಳನ್ನು ಹೊಂದಿದ್ದರು. ಅವರ ಅಪಘಾತದ ಸಾವಿನ ಸಂದರ್ಭದಲ್ಲಿ ಸುಮಾರು ₹2 ಕೋಟಿ ವಿಮಾ ಮೊತ್ತ ದೊರೆಯಲಿದೆ ಎಂಬ ನಂಬಿಕೆ ಆರೋಪಿಗಳಿಗೆ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಮೃತನ ಪತ್ನಿ, ಆಕೆಯ ಪ್ರಿಯಕರ ಹಾಗೂ ಕೆಲ ಸರ್ಕಾರಿ ನೌಕರರು ಸೇರಿದಂತೆ ಒಟ್ಟು 9 ಮಂದಿಯನ್ನು ಬಂಧಿಸಲಾಗಿದೆ.

ಬಂಧಿತರನ್ನು ಮೃತನ ಪತ್ನಿ ಸುಮಾ ಸಂದೀಪ್ ಮಂಜರಗಿ, ಸುಮಾ ಪ್ರಿಯಕರ ಪುಂಡಲೀಕ್ ವಿಠ್ಠಲ್ ಡೊಂಬಾರ್, RMP ವೈದ್ಯ ಡಾ. ಬಸವರಾಜ ಭಾಸ್ಮೆ, ಬೆಳಗಾವಿ ಆಯುಕ್ತರ ಕಚೇರಿಯ FDA ಅಧಿಕಾರಿ ಅಶೋಕ್ ಗುಜನಾಳ, ವಿಧಿವಿಜ್ಞಾನ ಪ್ರಯೋಗಾಲಯದ ಕ್ಲರ್ಕ್ ಅಪ್ಪಾಸಾಹೇಬ ನಾಯಕ್, ಪ್ರಯೋಗಾಲಯ ಸಹಾಯಕ ಚನ್ನಯ್ಯ ಅಡಿವಿಸ್ವಾಮಿಮಠ, ಹಿರಿಯ ವೈಜ್ಞಾನಿಕ ಅಧಿಕಾರಿ ಪಿ.ಎನ್. ನಾಗರಾಜ್, ಪುಂಡಲೀಕ್‌ನ ಸಹಚರ ಸಚಿನ್ ಸೆಳಾರ್ ಮತ್ತು ಫಾರ್ಮಸಿ ವಿದ್ಯಾರ್ಥಿ ಹಾಗೂ ಪುಂಡಲೀಕ್‌ನ ಸಹಚರ ರಾಹುಲ್ ಜೋಗಿ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಧಾನಿ ಮೋದಿ Video ಡಿಲೀಟ್: Facebook ಮೇಲೆ ಗದಾ ಪ್ರಹಾರ, Mark Zuckerberg ಕ್ಷಮೆಯಾಚನೆಗೆ ಸಂಸದೀಯ ಸಮಿತಿ ಪಟ್ಟು! ಹೇಳಿದ್ದೇನು?

Repo Rate ಶೇ. 5.25 ಯಥಾಸ್ಥಿತಿ ಮುಂದುವರಿಕೆ, GDP ಬೆಳವಣಿಗೆ ಶೇ. 6.7: RBI ವಿತ್ತೀಯ ನೀತಿ ಪ್ರಕಟ

ಪ್ರಾಣ ಉಳಿಸಿದ ಹೀರೋಗೆ ಪ್ರವಾಹವೇ ಕಂಟಕ: ತನ್ನ ಲೈಫ್ ಜಾಕೆಟ್ ಕೊಟ್ಟು ಜೀವ ರಕ್ಷಿಸಿದ ತರಬೇತುದಾರನ ದುರಂತ ಸಾವು!

Hormuz ಜಲಸಂಧಿ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ: ಅಂತಿಮ ಘಟ್ಟದಲ್ಲಿ ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಇಂದೇ ಅಧಿಕೃತ ಘೋಷಣೆ ಸಾಧ್ಯತೆ..!

'ಸಾವು ಉತ್ತಮ': ಉದಯನಿಧಿ ಸ್ಟಾಲಿನ್ ಬಂಧನ ಬೆನ್ನಲ್ಲೇ ನಟಿ nivetha pethuraj ಪೋಸ್ಟ್ ವೈರಲ್!