ರಿಷಭ್ ಶೆಟ್ಟಿ- ಡಿಕೆ ಶಿವಕುಮಾರ್ online desk
ರಾಜ್ಯ

ಕರಾವಳಿ ಪ್ರವಾಸೋದ್ಯಮ ರಾಯಭಾರಿಯಾಗಿ ರಿಷಭ್ ಶೆಟ್ಟಿ: ಸರ್ಕಾರದ ಪ್ರಸ್ತಾವನೆಗೆ ಪ್ರಗತಿಪರರಿಂದ ವಿರೋಧ?

ರಿಷಬ್ ಶೆಟ್ಟಿ ಅವರನ್ನು ಕರಾವಳಿ ಪ್ರವಾಸೋದ್ಯಮ ರಾಯಬಾರಿಯನ್ನಾಗಿಸುವ ಸರ್ಕಾರದ ಚಿಂತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕರಾವಳಿ ಭಾಗದ ಪ್ರಗತಿಪರರು ಈ ವಿಚಾರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಖ್ಯಾತ ನಟ ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ.

ಕಾಂಗ್ರೆಸ್ ಸರ್ಕಾರದ ಈ ನಡೆಯ ಬಗ್ಗೆ ಪ್ರಗತಿಪರರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ ನಡೆದ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಕರಾವಳಿ ಪ್ರವಾಸೋದ್ಯಮ ಸಭೆಯಲ್ಲಿ ಸಚಿವರು, ಅಧಿಕಾರಿಗಳ ಜೊತೆಗೆ ರಿಷಬ್ ಶೆಟ್ಟಿ ಕೂಡಾ ಭಾಗಿಯಾಗಿದ್ದರು. ಈ ಬೆನ್ನಲ್ಲೇ ಪ್ರಗತಿಪರರಿಂದ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗತೊಡಗಿದೆ.

ವಿರೋಧ ಏಕೆ?

ರಿಷಬ್ ಶೆಟ್ಟಿ ಅವರನ್ನು ಕರಾವಳಿ ಪ್ರವಾಸೋದ್ಯಮ ರಾಯಬಾರಿಯನ್ನಾಗಿಸುವ ಸರ್ಕಾರದ ಚಿಂತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕರಾವಳಿ ಭಾಗದ ಪ್ರಗತಿಪರರು ಈ ವಿಚಾರವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.

ರಿಷಬ್ ಶೆಟ್ಟಿ ಬಲ ಪಂಥೀಯ ಒಲವು ಇರುವ ನಟ ಎಂದು ಅವರು ದೂರಿದ್ದಾರೆ. ಹಾಗಾಗಿ ರಾಯಬಾರಿಯನ್ನಾಗಿ ಮಾಡಬಾರದು, ಸರ್ಕಾರದ ಚಿಂತನೆ ಸರಿಯಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕರಾವಳಿಯ ಜನಪದ ಕಲೆ, ಸಂಗೀತಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಸಭೆಯಲ್ಲಿ ಭಾಗಿಯಾಗಿದ್ದ ರಿಷಬ್‌ ಶೆಟ್ಟಿ ಮನವಿ ಮಾಡಿದ್ದರು. ಸಿನಿಮಾ ಚಿತ್ರೀಕರಣಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸುವುದರಿಂದ ಕೇರಳ-ಗೋವಾ-ಕರ್ನಾಟಕದ ಸಿನಿಮಾ ಜಗತ್ತಿಗೆ ಹೆಚ್ಚು ಅನುಕೂಲ ಆಗುತ್ತಿದೆ ಎಂದು ಗಮನ ಸೆಳೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video