ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಉದ್ಯಮಿಗೆ 2.66 ಕೋಟಿ ರೂ ವಂಚನೆ; Axis Bank ಮ್ಯಾನೇಜರ್ ಬಂಧನ

ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಸಂಬಂಧ ಬೆಂಗಳೂರಿನ ಬಾಗಲಗುಂಟೆ ಶಾಖೆಯ Axis Bank ನ ಮ್ಯಾನೇಜರ್ ವಿನೋದ್ ಕುಮಾರ್, ಅರುಣ್ ಕುಮಾರ್ ಮತ್ತು ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಸಂಬಂಧ ಬೆಂಗಳೂರಿನ ಬಾಗಲಗುಂಟೆ ಶಾಖೆಯ Axis Bank ನ ಮ್ಯಾನೇಜರ್ ವಿನೋದ್ ಕುಮಾರ್, ಅರುಣ್ ಕುಮಾರ್ ಮತ್ತು ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಟ್ರಾನ್ಸ್‌ಪೋರ್ಟ್ ಹಾಗೂ ಮ್ಯಾನ್‌ಪವರ್ ಏಜೆನ್ಸಿ ನಡೆಸುತ್ತಿದ್ದ ಉದ್ಯಮಿ ಸುಬ್ರಮಣಿ ಅವರು, ತಿಂಗಳಿಗೆ ಹತ್ತು ಕೋಟಿಗೂ ಅಧಿಕ ಹಣದ ವಹಿವಾಟು ನಡೆಸುತ್ತಿದ್ದರು. ಈ ಹಣದ ಮೇಲೆ ಕಣ್ಣು ಹಾಕಿದ್ದ ಮ್ಯಾನೇಜರ್ ವಿನೋದ್, ಉದ್ಯಮಿಗೆ ವಂಚಿಸಲು ಪ್ಲಾನ್ ಮಾಡಿದ್ದು ಬೇರೆಯವರ ಹೆಸರಲ್ಲಿ ನಕಲಿ ಸಿಮ್ ಕಾರ್ಡ್ ಪಡೆದುಕೊಂಡಿದ್ದನು.

ಕೂಲಿ ಕಾರ್ಮಿಕರ ಹೆಸರಿನಲ್ಲಿ ತಮ್ಮದೇ ಶಾಖೆಯಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದ ವಿನೋದ್ ನಂತರ ಉದ್ಯಮಿ ಸುಬ್ರಮಣಿಗೆ ವಾಟ್ಸಾಪ್ ಕರೆ ಮಾಡಿ, ತನಗೆ ದೊಡ್ಡ ಮಟ್ಟದ ಪ್ರಭಾವವಿದ್ದು, ಸುಮಾರು 30 ಕೋಟಿ ರೂಪಾಯಿ ಮೌಲ್ಯದ ಕಾಂಟ್ರಾಕ್ಟ್ ಕೊಡಿಸುವುದಾಗಿ ನಂಬಿಸಿದ್ದನು. ಇದಕ್ಕೆ ಪ್ರತಿಯಾಗಿ ಶೇಕಡ 10ರಷ್ಟು ಕಮಿಷನ್ ಬರೋಬ್ಬರಿ 2 ಕೋಟಿ 66 ಲಕ್ಷ ರೂಪಾಯಿ ಹಣವನ್ನು ಆರ್​​ಟಿಜಿಎಸ್ ಮೂಲಕ ತಾನು ಸೃಷ್ಟಿಸಿದ್ದ ನಕಲಿ ಖಾತೆಗಳಿಗೆ ವರ್ಗಾಯಿಸಿಕೊಂಡ ವಿನೋದ್ ನಂತರ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದನು.

ಇದರಿಂದ ಅನುಮಾನಗೊಂಡ ಸುಬ್ರಮಣಿ ವಂಚನೆ ಕುರಿತಂತೆ ಬಾಗಲಗುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಬಾಗಲಗುಂಟೆ ಪೊಲೀಸರು ತಾಂತ್ರಿಕ ಸುಳಿವುಗಳ ಆಧಾರದ ಮೇಲೆ ಬ್ಯಾಂಕ್ ಮ್ಯಾನೇಜರ್ ವಿನೋದ್ ಮತ್ತು ಆತನ ಸಹಚರರನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!