ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ರಾಜ್ಯದ ಕೆಲವೆಡೆ ಮೂರು ದಿನ ಭಾರಿ ಮಳೆ ಸಾಧ್ಯತೆ: ಸೋಮವಾರ 13 ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಣೆ

ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಯ ಒಂದೆರಡು ಕಡೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ಮಳೆಯ ಸಾಂದರ್ಭಿಕ ಚಿತ್ರ
Nagaraja AB
Updated On : 22 Jun 2026, 12:54 am

ಬೆಂಗಳೂರು: ರಾಜ್ಯದ ಕೆಲವೆಡೆ ಸೋಮವಾರದಿಂದ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ಮುನ್ಸೂಚನೆ ನೀಡಿದೆ.

ಸೋಮವಾರ 13 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಒಂದೆರೆಡು ಕಡೆ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇದೇ 24 ರಿಂದ ಉತ್ತರ ಕನ್ನಡ ಜಿಲ್ಲೆಗೂ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಯ ಒಂದೆರಡು ಕಡೆ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಸಾಧಾರಣ ಮಳೆಯಾಗಲಿದೆ.

Advertisement

Advertisement

Also Read

ಈ ಬಾರಿ ಮುಂಗಾರು ಮಳೆ ಪ್ರಮಾಣ ಕಡಿಮೆಯೇ?: ಹವಾಮಾನ ಇಲಾಖೆ ವಿಜ್ಞಾನಿಗಳು ಏನಂತಾರೆ?

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಜಿಲ್ಲೆಯ ಒಂದು ಅಥವಾ ಎರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಒಂದು ಅಥವಾ ಎರಡು ಸ್ಥಳದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement