ರಾಜ್ಯ

'ಇವರೇ ನೋಡಿ ಮಾರಿಕೊಂಡವರು': ತಮ್ಮ ವಿರುದ್ಧ ಬಂಧನ ವಾರಂಟ್ ಜಾರಿ ಕುರಿತು ನಟ ಪ್ರಕಾಶ್ ರಾಜ್ ಸ್ಪಷ್ಟನೆ!

ದಿಲೀಪ್ ಕುಮಾರ್ ಎಂಬುವವರು ನಾಲ್ಕು ಮತದಾರರ ಗುರುತಿನ ಚೀಟಿಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಿದ ನಂತರ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ ಎಂದು ಹೇಳಲಾಗಿತ್ತು.

ಒಂದೇ ಹೆಸರಿನಲ್ಲಿ ನಾಲ್ಕು ಮತದಾರರ ಗುರುತಿನ ಚೀಟಿಗಳನ್ನು ಪಡೆದಿದ್ದಾರೆ ಎಂಬ ಆರೋಪದ ಮೇಲೆ ಬಹುಭಾಷಾ ನಟ ಪ್ರಕಾಶ್ ರಾಜ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಲಾಗಿದೆ ಎಂದು ಭಾನುವಾರ ಹಲವಾರು ವರದಿಗಳು ಅಂತರ್ಜಾಲದಲ್ಲಿ ಪ್ರಕಟವಾದವು.

ವರದಿಗಳ ಪ್ರಕಾರ, ದಿಲೀಪ್ ಕುಮಾರ್ ಎಂಬುವವರು ನಟ ಪ್ರಕಾಶ್ ರಾಜ್ ವಿರುದ್ಧ ನಾಲ್ಕು ಮತದಾರರ ಗುರುತಿನ ಚೀಟಿಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಿದ ನಂತರ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ ಎಂದು ಹೇಳಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಸಮನ್ಸ್ ನೀಡಿದರೂ ನಟ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆ ಈ ಹಿಂದೆಯೂ ಎರಡು ಬಾರಿ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು. ಇದರ ಹೊರತಾಗಿಯೂ ಅವರು ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಇದೀಗ ನ್ಯಾಯಾಲಯವು ಮತ್ತೊಂದು ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ ಎಂದು ವರದಿಗಳು ಹೇಳಿವೆ.

ಆದರೆ, ತಮ್ಮ ಬಗ್ಗೆ ಬಂದಿರುವ ಈ ವರದಿಗಳನ್ನು ತಳ್ಳಿಹಾಕಿರುವ ನಟ ಪ್ರಕಾಶ್ ರಾಜ್, ಸಾಮಾಜಿಕ ಮಾಧ್ಯಮದಲ್ಲಿ ಸ್ಪಷ್ಟನೆ ನೀಡಿದ್ದಾರೆ. ತಮ್ಮ ವಿರುದ್ಧ ವಾರಂಟ್ ಹೊರಡಿಸಿರುವ ಬಗ್ಗೆ ವರದಿಗಳ ಚಿತ್ರಗಳನ್ನು ಹಂಚಿಕೊಂಡಿರುವ ನಟ, 'ಸುಳ್ಳುಸುದ್ದಿ ಸ್ರಷ್ಟಿಸುವುದರಲ್ಲಿ ಕಾರ್ಯನಿರತರಾದ ಮಾರಿಕೊಂಡವರು. ಪಾಪ ತುಂಬಾ ನೋವಾಗಿರಬೇಕು' ಎಂದು ಬರೆದಿದ್ದಾರೆ.

'ತಮ್ಮನ್ನು ತಾವು ಮಾರಿಕೊಂಡವರು ಸುಳ್ಳು ಸುದ್ದಿಗಳನ್ನು ಸೃಷ್ಟಿಸುತ್ತಿದ್ದಾರೆ ಮತ್ತು ಹರಡುತ್ತಿದ್ದಾರೆ.. ಅವರಿಗೆ ತುಂಬಾ ನೋವಾಗಿರಬೇಕು. ಆದರೆ, ಅವರನ್ನು ಬ್ಯುಸಿಯಾಗಿಟ್ಟಿದ್ದಕ್ಕೆ ನನಗೆ ಸಂತೋಷವಾಗಿದೆ' ಎಂದು ನಟ ಕಾಲೆಳೆದಿದ್ದು, ವರದಿಗಳು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗಷ್ಟೇ ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್ ರಾಜ್ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಧರ್ಮಸ್ಥಳದಲ್ಲಿ ಕೊಲೆಗಳು ಮತ್ತು ಸಾಮೂಹಿಕ ಅಂತ್ಯಕ್ರಿಯೆಗಳ ಆರೋಪ ಹೊತ್ತ ವ್ಯಕ್ತಿ ಚಿನ್ನಯ್ಯ ಮತ್ತು ತನ್ನ ನಡುವಿನ ಸಂಬಂಧವನ್ನು ನಟ ನಿರಾಕರಿಸಿದ್ದಾರೆ. ಎಸ್ಐಟಿ ರಚನೆಯಾದ ಆರಂಭದಲ್ಲಿ ಆ ವ್ಯಕ್ತಿಯಿಂದ ತನಗೆ ಕರೆ ಬಂದಿದ್ದು ನಿಜ. ಆ ಸಂಬಂಧ ನಾನು ಎಸ್ಐಟಿ ಮುಖ್ಯಸ್ಥರಿಗೆ ಮಾಹಿತಿ ನೀಡಿದ್ದೇನೆ. ಅದನ್ನು ಹೊರತುಪಡಿಸಿ ನನಗೆ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ. ಅವರ ಸಂಭಾಷಣೆಯನ್ನು ರೆಕಾರ್ಡ್ ಮಾಡಿ ಪ್ರಕರಣದ ಮುಖ್ಯ ತನಿಖಾಧಿಕಾರಿಗೆ ಕಳುಹಿಸಿದ್ದೇನೆ ಎಂದು ನಟ ಹೇಳಿದ್ದಾರೆ.

ಕರ್ನಾಟಕ ಹೈಕೋರ್ಟ್‌ನಲ್ಲಿ ಚಿನ್ನಯ್ಯ ಸಲ್ಲಿಸಿದ ರಿಟ್ ಅರ್ಜಿಯಲ್ಲಿ ಆರೋಪಿ ಪ್ರಕಾಶ್ ರಾಜ್ ಅವರ ಹೆಸರನ್ನು ಉಲ್ಲೇಖಿಸಿದ್ದರು.

ಪ್ರಕಾಶ್ ರಾಜ್ ಅವರು ವಿಜಯ್ ಜೊತೆ ಜನ ನಾಯಗನ್, ಅಜಯ್ ದೇವಗನ್ ಜೊತೆ ದೃಶ್ಯಂ 3 ಮತ್ತು ಪ್ರಭಾಸ್ ಜೊತೆ ಸ್ಪಿರಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ

ಮುಂಬೈ: ಬಾಲಿವುಡ್ ನಟಿಯ ಮೇಲೆ ಅತ್ಯಾಚಾರ ಆರೋಪ; 73 ವರ್ಷದ ಖ್ಯಾತ ಸಿನಿಮಾ ಡೈರೆಕ್ಟರ್ ಬಂಧನ!