ದಂಡ ಪಾವತಿ ಮಾಡಿರುವ ಸವಾರ 
ರಾಜ್ಯ

ಒಂದೇ ಬೈಕ್ ಮೇಲೆ 100 ಕೇಸ್: ಶೇ.50 ರಿಯಾಯಿತಿ ಬಳಸಿ 27,500 ರೂ ದಂಡ ಪಾವತಿಸಿದ ಸವಾರ..!

ಜೂನ್ 21ರಿಂದ ಜುಲೈ 10ರವರೆಗೆ ಬಾಕಿ ಸಂಚಾರ ದಂಡಗಳ ಮೇಲೆ ಶೇ.50 ರಿಯಾಯಿತಿ ನೀಡಲಾಗುತ್ತಿದ್ದು, ಈ ಅವಕಾಶವನ್ನು ಬಳಸಿಕೊಳ್ಳುವಂತೆ ಸಂಚಾರ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಬಾಕಿ ದಂಡಗಳನ್ನು ಪಾವತಿಸಲು ರಾಜ್ಯ ಸರ್ಕಾರ ನೀಡಿರುವ ಶೇ.50ರಷ್ಟು ರಿಯಾಯಿತಿ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ.

ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ನಾಗರಿಕರೊಬ್ಬರು ತಮ್ಮ ವಾಹನದ ಮೇಲೆ ದಾಖಲಾಗಿದ್ದ 100 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಶೇ.50ರಷ್ಟು ರಿಯಾಯಿತಿ ಸೌಲಭ್ಯ ಪಡೆದು ರೂ.27,500 ದಂಡವನ್ನು ಪಾವತಿಸಿದ್ದಾರೆ.

ಜೂನ್ 21ರಿಂದ ಜುಲೈ 10ರವರೆಗೆ ಬಾಕಿ ಸಂಚಾರ ದಂಡಗಳ ಮೇಲೆ ಶೇ.50 ರಿಯಾಯಿತಿ ನೀಡಲಾಗುತ್ತಿದ್ದು, ಈ ಅವಕಾಶವನ್ನು ಬಳಸಿಕೊಳ್ಳುವಂತೆ ಸಂಚಾರ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ದಂಡ ಪಾವತಿಸಿದ ವಾಹನ ಸವಾರರು, ಇನ್ನು ಮುಂದೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದಾಗಿ ಹಾಗೂ ಸುರಕ್ಷಿತ ವಾಹನ ಚಾಲನೆಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ.

ಸಂಚಾರ ಪೊಲೀಸರು ಕೂಡ ಈ ರಿಯಾಯಿತಿ ಅವಧಿಯನ್ನು ಸದುಪಯೋಗಪಡಿಸಿಕೊಂಡು ಬಾಕಿ ಇರುವ ದಂಡಗಳನ್ನು ಪಾವತಿಸುವಂತೆ ವಾಹನ ಸವಾರರಿಗೆ ಸಲಹೆ ನೀಡಿದ್ದಾರೆ.

ಸಂಚಾರ ನಿಯಮಗಳ ಪಾಲನೆಯಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ನಿರ್ಮಿಸಲು ಸಹಕಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!