ಬಂಧಿತ ಆರೋಪಿಗಳು. 
ರಾಜ್ಯ

ಉಡುಪಿ: ಅಕ್ರಮ ಶಿಶು ಮಾರಾಟ; ವೈದ್ಯ ಸೇರಿ ಇಬ್ಬರು ಆರೋಪಿಗಳ ಬಂಧನ

ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ಕಚೇರಿ (CDPO) ಅಧಿಕಾರಿಯೊಬ್ಬರು ಮಕ್ಕಳ ರಕ್ಷಣ ಘಟಕಕ್ಕೆ ಕರೆ ಮಾಡಿ, ಸಂತೆಕಟ್ಟೆಯ ನೇಜಾರಿನಲ್ಲಿ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ ಸುಮಾರು ಒಂದು ತಿಂಗಳ ಹೆಣ್ಣುಮಗುವನ್ನು ತಂದು ಅನಧಿಕೃತವಾಗಿ ಸಾಕುತ್ತಿದ್ದಾರೆ ಎಂದು ದೂರು ನೀಡಿದ್ದರು.

ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು ತಿಂಗಳ ಹೆಣ್ಣು ಮಗುವನ್ನು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ನಗರದ ಖಾಸಗಿ ಆಸ್ಪತ್ರೆಯ ವೈದ್ಯ ಹಾಗೂ ಮಗುವನ್ನು ಪಡೆದ ವ್ಯಕ್ತಿಯನ್ನು ಜಿಲ್ಲಾ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಡಾ। ಸುರೇಂದ್ರ ಕಾಮತ್, ಸಂತೆಕಟ್ಟೆ ನೇಜಾರು ನಿವಾಸಿಗಳಾದ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ, ಇತರರ ವಿರುದ್ದ ಪ್ರಕರಣ ದಾಖಲಾಗಿದ್ದು, ವೈದ್ಯರು ಮತ್ತು ಪ್ರಕಾಶ್ ಅವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಜೂ.19ರಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ಕಚೇರಿ (CDPO) ಅಧಿಕಾರಿಯೊಬ್ಬರು ಮಕ್ಕಳ ರಕ್ಷಣ ಘಟಕಕ್ಕೆ ಕರೆ ಮಾಡಿ, ಸಂತೆಕಟ್ಟೆಯ ನೇಜಾರಿನಲ್ಲಿ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ ಸುಮಾರು ಒಂದು ತಿಂಗಳ ಹೆಣ್ಣುಮಗುವನ್ನು ತಂದು ಅನಧಿಕೃತವಾಗಿ ಸಾಕುತ್ತಿದ್ದಾರೆ ಎಂದು ದೂರು ನೀಡಿದ್ದರು.

ದೂರು ಆಧರಿಸಿ ಮಕ್ಕಳ ರಕ್ಷಣ ಘಟಕದ ರಕ್ಷಣಾಧಿಕಾರಿ ಯೋಗೀಶ್, ಸುರಕ್ಷಾ ಜತೆ ವಲಯ ಮೇಲ್ವಿಚಾರಕಿ ದೂರು ನೀಡಿದ ಅಧಿಕಾರಿಯೊಂದಿಗೆ ನೇಜಾರಿಗೆ ತೆರಳಿದಾಗ ಅಲ್ಲಿ ದಂಪತಿ ಇರಲಿಲ್ಲ.

ಬಳಿಕ ಮಾಹಿತಿ ಮೇರೆಗೆ ಸಂತೆಕಟ್ಟೆಯ ಸುಬ್ರಹ್ಮಣ್ಯನಗರದ ಮನೆಗೆ ತೆರಳಿದಾಗ ಪೂರ್ಣಿಮಾ, ಪತಿ ಪ್ರಕಾಶ್, ಒಂದು ತಿಂಗಳ ಹೆಣ್ಣು ಮಗು ಹಾಗೂ ಪೂರ್ಣಿಮಾ ಅವರ ಹಿರಿಯ ಸಹೋದರಿ ಲಕ್ಷ್ಮೀ ಅವರು ಮನೆಯಲ್ಲಿ ಹಾಜರಿದ್ದರು.

ಅಧಿಕಾರಿಗಳು ವಿಚಾರಣೆ ನಡೆಸಿದಾಗ ಆರೋಪಿಗಳು ಅನುಮಾನಾಸ್ಪದ ಹೇಳಿಕೆ ನೀಡಿದ್ದು, ಬಳಿಕ ಕೂಲಂಕಷವಾಗಿ ವಿಚಾರಿಸಿದಾಗ ನೈಜ ವಿಚಾರ ಬಾಯ್ದಿಟ್ಟಿದ್ದರು.

ಆರೋಪಿಗಳಾದ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ ಮದುವೆಯಾಗಿ 11 ವರ್ಷಗಳಾದರೂ ಮಕ್ಕಳು ಇರದ ಹಿನ್ನೆಲೆ ನಗರದ ನರ್ಸಿಂಗ್ ಹೋಮ್ ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಈ ವೇಳೆ ಪೂರ್ಣಿಮಾ ಅವರ ಸಹೋದರಿ ಲಕ್ಷ್ಮೀ, ತನ್ನ ಸ್ನೇಹಿತೆಯೊಬ್ಬರಿಂದ ನರ್ಸಿಂಗ್ ಹೋಮ್‌ನಲ್ಲಿ ಮಗುವೊಂದು ಇರುವ ವಿಚಾರ ತಿಳಿದು ಆಸ್ಪತ್ರೆಯನ್ನು ಸಂಪರ್ಕಿಸಿ, ವೈದ್ಯ ಡಾ. ಸುರೇಂದ್ರ ಕಾಮತ್ ಅವರಿಗೆ ಮಗು ಒದಗಿಸುವಂತೆ ಮನವಿ ಮಾಡಿದ್ದಾಳೆ ಎನ್ನಲಾಗಿದೆ.

ಬಳಿಕ ಪ್ರಕಾಶ್ ಮತ್ತು ಪೂರ್ಣಿಮಾ ಅಲ್ಲಿನ ವೈದ್ಯರನ್ನು ಭೇಟಿಯಾಗಿ ಮಗುವನ್ನು ನೀಡುವಂತೆ ಕೇಳಿಕೊಂಡಿದ್ದರು. ಇದರ ಬೆನ್ನಲ್ಲೇ ವೈದ್ಯರು ದಂಪತಿಗೆ ಒಂದು ತಿಂಗಳ ಹಿಂದೆ ಜನಿಸಿದ್ದ ಯಾರದ್ದೋ ಹೆಣ್ಣು ಮಗುವನ್ನು ಕೊಟ್ಟಿದ್ದಾರೆ. ಮಗುವಿನ ಪೋಷಕರಾಗಿ ಅವರ ಹೆಸರೇ ಕಾಣುವಂತೆ ಜನನ ಪ್ರಮಾಣಪತ್ರವನ್ನೂ ಸಿದ್ಧಪಡಿಸಲು ನೆರವಾಗಿದ್ದಾರೆಂದು ತಿಳಿದುಬಂದಿದೆ.

ಮಗುವಿನ ನಕಲಿ ಜನನ ದಾಖಲೆಗಳು ಮತ್ತು ಪೋಷಕರ ವಿವರಗಳನ್ನು ಸೃಷ್ಟಿಸಿ, ಮಗುವನ್ನು ಅಕ್ರಮವಾಗಿ ಹಸ್ತಾಂತರಿಸಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ವಿಚಾರಣೆ ವೇಳೆ ಆರೋಪಿತ ದಂಪತಿಗಳು ಅಧಿಕಾರಿಗಳು ಮುಂದೆ ತಪ್ಪೊಪ್ಪಿಕೊಂಡಿದ್ದು, ಮಗುವಿನ ಜೈವಿಕ ಪೋಷಕರು ಯಾರು ಎಂದು ತಿಳಿದಿಲ್ಲ. ಮಗುವಿನ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಹೇಳಿದ್ದಾರೆ,

ಈ ಸಂಬಂಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಡಾ. ಸುರೇಂದ್ರ ಕಾಮತ್ ಹಾಗೂ ಪ್ರಕಾಶ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 143(4), 61, 318(2) ಜೊತೆಗೆ 3(5) ಹಾಗೂ ಜುವೆನೈಲ್ ಜಸ್ಟಿಸ್ ಕಾಯ್ದೆಯ ಕಲಂ 81 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ಪ್ರಕರಣದ ಇನ್ನಷ್ಟು ಆಯಾಮಗಳನ್ನು ತನಿಖೆ ನಡೆಸುತ್ತಿದ್ದು, ಪರಾರಿಯಾಗಿರುವ ಉಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!