ಸೋಮಸುಂದರ್ (55), ಮುತ್ತುಲಕ್ಷ್ಮಿ (48) ಸುಪ್ರಿಯಾ (20) 
ರಾಜ್ಯ

ಬುದ್ಧಿ ಹೇಳಲು ಬಂದಿದ್ದೇ ತಪ್ಪಾಯ್ತು: ಲಿವ್-ಇನ್ ಗೆ ವಿರೋಧಿಸಿದ ತಂದೆ-ತಾಯಿ, ತಂಗಿಯನ್ನು ಕೊಂದ ಯುವತಿ! Video

ಸೋಮಸುಂದರ್ (55), ಮುತ್ತುಲಕ್ಷ್ಮಿ (48) ಸುಪ್ರಿಯಾ (20) ಹತ್ಯೆಗೀಡಾದ ದುರ್ದೈವಿಗಳು. ಸೋಮಸುಂದರ್ ಅವರ ಹಿರಿಯ ಮಗಳು ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬುದ್ಧಿ ಹೇಳಲು ಹೋದ ಪೋಷಕರನ್ನೇ ಮಕ್ಕಳು ಹತ್ಯೆ ಮಾಡುತ್ತಿರುವ ಘಟನೆಗಳು ಆಗಾಗ್ಗೆ ವರದಿಯಾಗುತ್ತಿದೆ. ಇಂಥಹದ್ದೇ ಘಟನೆಯೊಂದು ಬೆಂಗಳೂರಿನ ಕೆಆರ್ ಪುರಂ ನ ಸೀಗೆಹಳ್ಳಿಯಲ್ಲಿ ತಡರಾತ್ರಿ ನಡೆದಿದೆ.

ಪ್ರೀತಿ ಮತ್ತು ಲಿವ್-ಇನ್ ರಿಲೇಷನ್‌ಶಿಪ್‌ಗೆ (Live In Relationship) ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಹಿರಿಯ ಮಗಳು ತನ್ನ ಪ್ರಿಯಕರನೊಂದಿಗೆ ಸೇರಿ ಹೆತ್ತ ತಂದೆ-ತಾಯಿ ಹಾಗೂ ಒಡಹುಟ್ಟಿದ ತಂಗಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾಳೆ.

ಸೋಮಸುಂದರ್ (55), ಮುತ್ತುಲಕ್ಷ್ಮಿ (48) ಸುಪ್ರಿಯಾ (20) ಹತ್ಯೆಗೀಡಾದ ದುರ್ದೈವಿಗಳು. ಸೋಮಸುಂದರ್ ಅವರ ಹಿರಿಯ ಮಗಳು ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಆರೋಪಿ ಶ್ವೇತಾ, ಕೆನತ್ ಎಂಬಾತನ ಜೊತೆ ಮದುವೆಯಾಗದೆ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದಳು. ಮಗಳ ಈ ನಡವಳಿಕೆಗೆ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಮಗಳಿಗೆ ಬುದ್ಧಿವಾದ ಹೇಳಿ ಮನೆಗೆ ವಾಪಸ್ ಕರೆದುಕೊಂಡು ಹೋಗಲು ಸೋಮಸುಂದರ್ ಅವರು ಪತ್ನಿ ಮತ್ತು ಕಿರಿಯ ಮಗಳೊಂದಿಗೆ ಸಿಗೇಹಳ್ಳಿಯ ಡಾಮ್ನಿಕದ ಲೇಔಟ್‌ನಲ್ಲಿರುವ ‘ಸಾಯಿ ಗ್ರೀನ್ ಅಪಾರ್ಟ್‌ಮೆಂಟ್’ಗೆ ಬಂದಿದ್ದರು. ಈ ವೇಳೆ ಪೋಷಕರು ಹಾಗೂ ಶ್ವೇತಾ-ಕೆನತ್ ಜೋಡಿ ನಡುವೆ ತೀವ್ರ ಗಲಾಟೆ ನಡೆದಿದೆ.

ಗಲಾಟೆ ವಿಕೋಪಕ್ಕೆ ತಿರುಗಿದಾಗ ಪ್ರೇಮಿಗಳಿಬ್ಬರು ಸೇರಿ ತಂದೆ, ತಾಯಿ ಹಾಗೂ ತಂಗಿಯ ಮೇಲೆ ಚಾಕುವಿನಿಂದ ಮನಸೋಇಚ್ಛೆ ಇರಿದಿದ್ದಾರೆ. ತೀವ್ರವಾಗಿ ಇರಿತಕ್ಕೊಳಗಾದ ಮುತ್ತುಲಕ್ಷ್ಮಿ ಹಾಗೂ ಸುಪ್ರಿಯಾ ಮನೆಯ ಒಳಗಡೆಯೇ ರಕ್ತದ ಮಡುವಿನಲ್ಲಿ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಮನೆಯೊಳಗೆ ಹೆಂಡತಿ, ಕಿರಿಯ ಮಗಳು ಸಾವನ್ನಪ್ಪಿದ್ದರೂ, ತೀವ್ರವಾಗಿ ಗಾಯಗೊಂಡಿದ್ದ ತಂದೆ ಸೋಮಸುಂದರ್ ಹೇಗೋ ಎದ್ದುಬಿದ್ದು ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಅಪಾರ್ಟ್‌ಮೆಂಟ್‌ನ ಮೆಟ್ಟಿಲುಗಳ ಮೇಲೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಇವರನ್ನು ನೋಡಿ ಸ್ಥಳೀಯರು ತಕ್ಷಣವೇ ‘112’ ತುರ್ತು ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಹೊಯ್ಸಳ ಸಿಬ್ಬಂದಿ ತಕ್ಷಣವೇ ಸೋಮಸುಂದರ್ ಅವರನ್ನು ಈಸ್ಟ್ ಪಾಯಿಂಟ್ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆ ತೀವ್ರ ರಕ್ತಸ್ರಾವದಿಂದ ಸೋಮಸುಂದರ್ ಕೊನೆಯುಸಿರೆಳೆದಿದ್ದಾರೆ. ಆದರೆ, ಸಾವನ್ನಪ್ಪುವ ಮುನ್ನ ಅವರು ಪೊಲೀಸರಿಗೆ ಘಟನೆಯ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಕೊಲೆ ಮಾಡಿ ಪರಾರಿಯಾಗಿರುವ ಶ್ವೇತಾ ಮತ್ತು ಕೆನತ್ ಪತ್ತೆಗಾಗಿ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದು, ತನಿಖೆ ತೀವ್ರಗೊಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬರಗಾಲ ಕುರಿತು ಮುಗಿಯದ ಚರ್ಚೆ: ರಾಜ್ಯ ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆ

ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ: ಬರ ನಿರ್ವಹಣೆಗಾಗಿ ಶೇ. 50ರಷ್ಟು ಮಧ್ಯಂತರ ಪರಿಹಾರ ಬಿಡುಗಡೆಗೆ ಒತ್ತಾಯ!

ಏಷ್ಯನ್ ಗೇಮ್ಸ್ 2026: ಚೀನಾ ವಿರುದ್ಧ ಸೋತ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡ, ಕಂಚಿನ ಪದಕಕ್ಕೆ ತೃಪ್ತಿ!

ನಾವು 'ಭಯೋತ್ಪಾದನೆಯ ಸಂತ್ರಸ್ತರು, ಆದರೆ ಮಂಡಿಯೂರಿ ಶರಣಾಗಲಿಲ್ಲ; UN ಸಾಮಾನ್ಯ ಸಭೆಯಲ್ಲಿ ಇರಾನ್ ಅಧ್ಯಕ್ಷರ ಪ್ರಬಲ ಭಾಷಣ!

CEC ಆಗಲು ಅನ್ ಫಿಟ್, ಜ್ಞಾನೇಶ್ ಕುಮಾರ್​ರನ್ನು ತಕ್ಷಣ ಬಂಧಿಸಿ; ಮತ್ತೆ ಚುನಾವಣೆ ನಡೆಸಿ: ಮಮತಾ ಬ್ಯಾನರ್ಜಿ