ಕಿಶನ್, ನಿವೇದಿತಾ ಗೌಡ 
ರಾಜ್ಯ

'ರೀಲ್ಸ್‌ನಲ್ಲಿ ಗರಿಬಿಚ್ಚಿದ ನವಿಲುಗಳು': BiggBoss ಮಾಜಿ ಸ್ಪರ್ಧಿಗಳಿಗೆ ಸಂಕಷ್ಟ; ಕಿಶನ್, ನಿವೇದಿತಾ ಗೌಡ ವಿರುದ್ಧ ದೂರು!

ನಿವೇದಿತಾ ಗೌಡ ಅವರು ಡ್ಯಾನ್ಸರ್ ಕಿಶನ್ ಅವರ ಜೊತೆ ನೈಜ ನವಿಲು ಗರಿಗಳನ್ನು ಬಳಸಿ ತಯಾರಿಸಿದ ಉಡುಪು ಧರಿಸಿ, ಹೇ ನವಿಲೇ ನವಿಲೇ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಅಲ್ಲದೆ ಇದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.

ಬೆಂಗಳೂರು: ನವಿಲು ಗರಿಗಳಿರುವ ಉಡುಪು ಧರಿಸಿ ರೀಲ್ಸ್ ಮಾಡಿದ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳಾದ ಕಿಶನ್ ಹಾಗೂ ನಿವೇದಿತಾ ಗೌಡ ಅವರಿಗೆ ಈಗ ಸಂಕಷ್ಟ ಎದುರಾಗಿದ್ದು, ಇಬ್ಬರ ವಿರುದ್ಧ ಅರಣ್ಯ ಇಲಾಖೆಗೆ ದೂರು ನೀಡಲಾಗಿದೆ.

ಸದಾ ರೀಲ್ಸ್‌ನಲ್ಲಿ ಮಿಂಚುವ ನಿವೇದಿತಾ ಗೌಡ ಅವರು ಡ್ಯಾನ್ಸರ್ ಕಿಶನ್ ಅವರ ಜೊತೆ ನೈಜ ನವಿಲು ಗರಿಗಳನ್ನು ಬಳಸಿ ತಯಾರಿಸಿದ ಉಡುಪು ಧರಿಸಿ, ಹೇ ನವಿಲೇ ನವಿಲೇ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಅಲ್ಲದೆ ಇದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.

ಈ ಸಂಬಂಧ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಅವರು ಅರಣ್ಯ ಇಲಾಖೆಗೆ ದೂರು ನೀಡಿದ್ದು, ದೂರಿನಲ್ಲಿ, ರೀಲ್ಸ್ ಮಾಡುವಾಗ ಯಥೇಚ್ಛವಾಗಿ ನವಿಲುಗರಿ ಬಳಸಿದ್ದಾರೆ. ಹೀಗಾಗಿ ಇದನ್ನು ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ.

ನೈಜ ನವಿಲು ಗರಿಗಳನ್ನು ಬಳಸಿ ಉಡುಪು ತಯಾರಿಸಿ ಸಾರ್ವಜನಿಕವಾಗಿ ಪ್ರದರ್ಶಿಸಿರುವುದು ವನ್ಯಜೀವಿ(ಸಂರಕ್ಷಣಾ) ಕಾಯ್ದೆ, 1972ರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ದಿನೇಶ್ ಕಲ್ಲಹಳ್ಳಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬೆಂಗಳೂರು ಪ್ರಾದೇಶಿಕ ನಗರ ವಿಭಾಗ ವ್ಯಾಪ್ತಿಯ ಕಗ್ಗಲಿಪುರ ಅರಣ್ಯ ವಲಯ ಅಧಿಕಾರಿಗಳಿಗೆ ದಿನೇಶ್ ಅವರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಹಿರಿಯ ಅಧಿಕಾರಿಗಳು ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೆ, ತನಿಖೆಯ ಅವಧಿಯಲ್ಲಿ ಯಾವುದೇ ರಾಜಕೀಯ ಪ್ರಭಾವ ಅಥವಾ ಹಸ್ತಕ್ಷೇಪಕ್ಕೆ ಅವಕಾಶ ನೀಡದೆ ಪಾರದರ್ಶಕವಾಗಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!

ನೋಯ್ಡಾದ 'ಸೂಪರ್ನೋವಾ' ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ! ಭಯಾನಕ Video

Asian Games 2026: 'ನೀನ್ ಕ್ಯಾಚ್ ಬಿಡು, ನಾವ್ ನೀರು ಬಿಡ್ತೀವಿ': ಫೀಲ್ಡಿಂಗ್ ಮಾಡುತ್ತಿದ್ದ ಪಾಕ್ ಬೌಲರ್ ಗೆ ಅಭಿಮಾನಿಗಳ ಕಾಟ! Video

ಕರ್ನಾಟಕದಲ್ಲಿ ತೀವ್ರ ಬರ: ತುರ್ತು ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ; ಅಮಿತ್ ಶಾಗೆ ಪತ್ರ!