ಶೋಭಾ ಕರಂದ್ಲಾಜೆ 
ರಾಜ್ಯ

ತಮ್ಮನ್ನು ಯಾರೂ ಮುಟ್ಟಲಾಗದು ಎಂಬ ಭಾವನೆ; RSS ಟೀಕಿಸುವುದು ಬಿಟ್ಟು ನೀವೇನು ಮಾಡಿದ್ದೀರಿ?: ಶೋಭಾ ಕರಂದ್ಲಾಜೆ; Video

ರಾಜ್ಯದಲ್ಲಿ ಹದಗೆಟ್ಟ ಕಾನೂನು-ಸುವ್ಯವಸ್ಥೆ ಕಡೆಗೆ ಗೃಹ ಸಚಿವರಾಗಿ ಗಮನ ಕೊಡದ ಪ್ರಿಯಾಂಕ್ ಖರ್ಗೆ ಅವರು, ಕೇವಲ ಆರೆಸ್ಸೆಸ್ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ ಕೂತಿದ್ದಾರೆ.

ಬೆಂಗಳೂರು: ಪ್ರತಿನಿತ್ಯ ಸುದ್ದಿ ವಾಹಿನಿಗಳಲ್ಲಿ ಕಾಣಿಸಿಕೊಳ್ಳಲು, ಸದಾ ಸುದ್ದಿಯಲ್ಲಿರುವ ಉದ್ದೇಶದಿಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರೆಸ್ಸೆಸ್ ಬಗ್ಗೆ ಮಾತನಾಡುತ್ತಿರುತ್ತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ಷೇಪಿಸಿದ್ದಾರೆ.

ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರನಾದ ತಮ್ಮನ್ನು ಯಾರೂ ಮುಟ್ಟಲಾಗದು ಎಂಬ ಭಾವನೆ ಅವರದು. ಆರೆಸ್ಸೆಸ್ ಅನ್ನು ಟೀಕಿಸುವುದನ್ನು ಬಿಟ್ಟು ನೀವೇನು ಮಾಡಿದ್ದೀರೆಂದು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಹದಗೆಟ್ಟ ಕಾನೂನು-ಸುವ್ಯವಸ್ಥೆ ಕಡೆಗೆ ಗೃಹ ಸಚಿವರಾಗಿ ಗಮನ ಕೊಡದ ಪ್ರಿಯಾಂಕ್ ಖರ್ಗೆ ಅವರು, ಕೇವಲ ಆರೆಸ್ಸೆಸ್ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ ಕೂತಿದ್ದಾರೆ. ಹಿಂದೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದರು. ಅಲ್ಲಿ ಅವರ ಸಾಧನೆ ಶೂನ್ಯ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದರು.

ಹೆಣ್ಣು ಮಕ್ಕಳ ನಾಪತ್ತೆ ವಿಚಾರದಲ್ಲಿ ಅವರು ಗಮನ ಕೊಡುವುದಿಲ್ಲ. ಒಂದೆಡೆ ತಂದೆಯ ಹಿಂದೆ ಅಡಗುವುದು, ನಿರಂತರ ಅಧಿಕಾರದಲ್ಲಿರುವ ಕುಟುಂಬದಿಂದ ಬಂದು ಬಲಿತರಾದರೂ ದಲಿತನೆಂಬ ನೆರಳನ್ನು ತೆಗೆದುಕೊಳ್ಳುತ್ತಾರೆ. ಮೊದಲು ಪೊಲೀಸ್ ಇಲಾಖೆಯನ್ನು ತಹಬಂದಿಗೆ ತನ್ನಿ ಎಂದು ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!