ಎಂ.ಬಿ. ಪಾಟೀಲ್ 
ರಾಜ್ಯ

ಬಿಡದಿ ಟೌನ್ ಶಿಪ್ ಗೆ HDK ವಿರೋಧ ಶುದ್ಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿಯದ್ದು 100 ಎಕರೆ ಜಮೀನಿದೆ- ಎಂ.ಬಿ ಪಾಟೀಲ್

ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಒಕ್ಕಲಿಗ ಸಮುದಾಯದ ಪ್ರಬಲ ನಾಯಕರನ್ನಾಗಿ ಸಹಿಸಲು ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಾಧ್ಯವಾಗುತ್ತಿಲ್ಲ. ರೈತರ ವಿರೋಧವಿದ್ದರೆ ಅದನ್ನು ಅರ್ಥ ಮಾಡಿಕೊಳ್ಳಬಹುದು.

ಬೆಂಗಳೂರು: ಬಿಡದಿ ಟೌನ್ ಶಿಪ್ ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರೋಧಿಸುತ್ತಿರುವುದು ಇದೆಲ್ಲಾ ನಾಟಕ. ಸಿಎಂ ಡಿಕೆ ಶಿವಕುಮಾರ್ ಒಕ್ಕಲಿಗರ ಲೀಡರ್ ಆಗಬಾರದೆಂದು ಈ ರೀತಿ ಮಾಡುತ್ತಿದ್ದಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಆರೋಪಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ಬಿಡದಿ ಟೌನ್‌ಶಿಪ್ ನಿರ್ಮಾಣ ವಿಚಾರದಲ್ಲಿ ಹೆಚ್.ಡಿ. ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ. ಈ ಯೋಜನೆಯನ್ನು ಸ್ವತಃ ಕುಮಾರಸ್ವಾಮಿ ಅವರೇ ಪ್ರಾರಂಭಿಸಿದ್ದರು. ಹಾಗಿದ್ದ ಮೇಲೆ ಈಗೇಕೆ ವಿರೋಧ

ಮಾಡುತ್ತಿದ್ದಾರೆ? ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರಿಗೆ ಸೇರಿದ ಸುಮಾರು 100 ಎಕರೆ ಜಮೀನು ಸಹ ಈ ಯೋಜನೆಯ ವ್ಯಾಪ್ತಿಯಲ್ಲಿ ಬರುತ್ತದೆ. ಈಗ ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಶುದ್ಧ ನಾಟಕ ಎಂದು ಪಾಟೀಲ್ ಟೀಕಿಸಿದರು.

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿರುವುದರಿಂದಲೇ ಈ ಎಲ್ಲ ನಾಟಕಗಳನ್ನು ಕುಮಾರಸ್ವಾಮಿ ನಡೆಸುತ್ತಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಒಕ್ಕಲಿಗ ಸಮುದಾಯದ ಪ್ರಬಲ ನಾಯಕರನ್ನಾಗಿ ಸಹಿಸಲು ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಾಧ್ಯವಾಗುತ್ತಿಲ್ಲ. ರೈತರ ವಿರೋಧವಿದ್ದರೆ ಅದನ್ನು ಅರ್ಥ ಮಾಡಿಕೊಳ್ಳಬಹುದು.

ಆದರೆ, ಇದು ಕೇವಲ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಎಂ.ಬಿ. ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದರು. ಅಂದು ತಾವೇ ಈ ಯೋಜನೆಗೆ ಚಾಲನೆ ನೀಡಿದಾಗ ನೋಟಿಫಿಕೇಶನ್ ವಾಪಸ್ ಪಡೆಯಲು ಏಕೆ ಮುಂದಾಗಲಿಲ್ಲ? ಈಗ ರಾಜಕೀಯ ಲಾಭಕ್ಕಾಗಿ ವಿರೋಧಿಸುತ್ತಿರುವುದು ಸರಿಯಲ್ಲ ಎಂದು ಅವರು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!

UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!

ಟೆಸ್ಟ್ ಪಂದ್ಯದ ಕೊನೆಯ ಓವರ್​ನಲ್ಲಿ 6, 6, 0, 6, 6 ಸಿಡಿಸಿದ ಗುರ್ನೂರ್ ಬ್ರಾರ್; ಗಂಭೀರ್ ಚಲ್ಲಾಳೆ, Video!

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್; ಹೊಸ ದಾಳ ಉರುಳಿಸಿದ 'ದಳಪತಿ'