ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ 
ರಾಜ್ಯ

ಮಂಡ್ಯ: ಎರಡು ಗ್ರಾಮ ಪಂಚಾಯಿತಿಗಳಿಂದ ಅಕ್ರಮವಾಗಿ ಇ-ಖಾತಾ ವಿತರಣೆ; ಲೋಕಾಯುಕ್ತ ತನಿಖೆಯಲ್ಲಿ ಬಹಿರಂಗ!

ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರು ಇತ್ತೀಚೆಗೆ ಅನಿರೀಕ್ಷಿತ ಭೇಟಿ ನೀಡಿ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿದ ನಂತರ ಈ ಅಕ್ರಮ ಬಯಲಾಗಿದೆ.

ಬೆಂಗಳೂರು: ಮಂಡ್ಯ ತಾಲ್ಲೂಕಿನ ಬೇಲೂರು ಮತ್ತು ಬೇವಿನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ(ಜಿಪಿ) ಅಕ್ರಮವಾಗಿ ಇ-ಖಾತಾ ನೀಡಿರುವುದು ಮತ್ತು ಬೆಲೆಬಾಳುವ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಿರುವುದು ಲೋಕಾಯುಕ್ತ ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.

ಮಂಡ್ಯ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ, ಈ ಎರಡೂ ಗ್ರಾಮ ಪಂಚಾಯಿತಿಗಳಲ್ಲಿನ ಸಮಸ್ಯೆಗಳನ್ನು ಸರಿಪಡಿಸಲು ಕಾಲಕಾಲಕ್ಕೆ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂಬುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರು ಇತ್ತೀಚೆಗೆ ಅನಿರೀಕ್ಷಿತ ಭೇಟಿ ನೀಡಿ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿದ ನಂತರ ಈ ಅಕ್ರಮ ಬಯಲಾಗಿದೆ.

ಕಾರ್ಯನಿರ್ವಾಹಕ ಅಧಿಕಾರಿ(ಇಒ) ಲೋಕೇಶ್ ಮೂರ್ತಿ, ಮಂಡ್ಯ ತಾಲ್ಲೂಕು ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ(ಪಿಡಿಒ) ಚಾಮರಾಜು ಜೆಸಿ, ಬೇವಿನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಸಿದ್ದರಾಜು, ಬೇಲೂರು ಗ್ರಾಮ ಪಂಚಾಯಿತಿಯ ನಿವಾಸಗಳು ಮತ್ತು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದ್ದರು.

ನ್ಯಾಯಮೂರ್ತಿ ವೀರಪ್ಪ ಅವರಿಗೆ ಸಲ್ಲಿಸಿದ ವರದಿಯ ಪ್ರಕಾರ, ಲೋಕೇಶ್ ಮೂರ್ತಿ ಅವರು ಸಿಬ್ಬಂದಿಗೆ ವಹಿಸಲಾದ ಜವಾಬ್ದಾರಿಗಳನ್ನು ನಿಯಮಿತವಾಗಿ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಮತ್ತು ಪಂಚಾಯತ್‌ಗಳ ಆಸ್ತಿಗಳನ್ನು ನಿಗದಿತ ಸ್ವರೂಪದಲ್ಲಿ ನಿರ್ವಹಿಸಿಲ್ಲ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಬೇಲೂರು ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಮತ್ತು ಪಿಡಿಒ ಅಕ್ರಮ ಇ-ಖಾತಾ ದಾಖಲೆಗಳನ್ನು ಒಳಗೊಂಡಿರುವ ಒಟ್ಟು 812 ಕಡತಗಳಲ್ಲಿ ಕೇವಲ 347 ಕಡತಗಳನ್ನು ಮಾತ್ರ ಅವರು ಸಲ್ಲಿಸಲು ಸಾಧ್ಯವಾಯಿತು. ಗ್ರಾಮ ಪಂಚಾಯತಿಯ ಆಸ್ತಿಗಳ 194 ಕಡತಗಳಲ್ಲಿ ಕೇವಲ 30 ಕಡತಗಳು ಮಾತ್ರ ಕ್ರಮಬದ್ಧವಾಗಿವೆ ಎಂದು ತನಿಖೆಯಲ್ಲಿ ಕಂಡುಬಂದಿದೆ.

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ವರದಿ ಸಲ್ಲಿಸಿದ ಮೂರು ತಿಂಗಳ ನಂತರವೂ ಲೋಕೇಶ್ ಮೂರ್ತಿ ಅವರು, ಪಿಡಿಒ ಮತ್ತು ಇತರ ಸಿಬ್ಬಂದಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಜೊತೆಗೆ ಹೊಳಲು ಗ್ರಾಮದಲ್ಲಿ ವಸತಿ ಬಳಕೆಗೆ ಒಂದು ಭೂಮಿ ಮತ್ತು ಸೋನಗಹಳ್ಳಿಯಲ್ಲಿ ವಾಣಿಜ್ಯ ಉದ್ದೇಶಕ್ಕಾಗಿ ನಿಯಮಗಳನ್ನು ಉಲ್ಲಂಘಿಸಿ ಎರಡು ಭೂಮಿಯನ್ನು ಪರಿವರ್ತಿಸುವ ಯೋಜನೆಗೆ ಅನುಮೋದನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತ್ತಾ: ಕುಸಿದು ಬಿದ್ದ ನಿರ್ಮಾಣ ಹಂತದ ಗೋದಾಮು; ಹಲವರು ಸಾವು ಶಂಕೆ, ರಕ್ಷಣಾ ಕಾರ್ಯ ಆರಂಭ

ಕುಸಿತದ ಬಳಿಕ ಪುಟಿದೆದ್ದ Indian Stock Market: ಸೆನ್ಸೆಕ್ಸ್ 790 ಅಂಕ ಏರಿಕೆ, 24 ಸಾವಿರ ಗಡಿ ದಾಟಿದ Nifty!

ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆ: ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

'ಕಾಶ್ಮೀರ ಎಂದಿಗೂ ಭಾರತದ್ದೇ, ಭಾರತದ್ದಾಗಿಯೇ ಉಳಿಯಲಿದೆ': ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ತಿರುಗೇಟು..!

ICC ODI Rankings: ವಿರಾಟ್ ಕೊಹ್ಲಿ ಹಿಂದಿಕ್ಕಿದ ಶುಭಮನ್ ಗಿಲ್; ಬುಮ್ರಾ ಜತೆ ಅಗ್ರ ಸ್ಥಾನಕ್ಕೇರಿದ ಹೆನ್ರಿ