ನಟಿ ಕೃಷಿ ತಾಪಂಡ ಗೆಳೆಯ ವೈಶಾಕ್ 
ರಾಜ್ಯ

ಕೃಷಿ ತಾಪಂಡ ಅಪಾರ್ಟ್ ಮೆಂಟ್ ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ, ನಟಿಗೆ ಅಂತಿಮ ಕರೆ!

ಈ ಹಿಂದೆ ಉದ್ಯಮಿ ಅರವಿಂದ್ ರೆಡ್ಡಿಗೆ ಕೊರಿಯರ್ ಮೂಲಕ ಬೆದರಿಕೆ ಹಾಕಿ, ಕೋಟಿಗಟ್ಟಲೆ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ವೈಶಾಕ್ ಬಂಧಿತನಾಗಿ ಜೈಲು ಸೇರಿದ್ದ.

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಕೃಷಿ ತಾಪಂಡ ಅಪಾರ್ಟ್ ಮೆಂಟ್ ನಲ್ಲಿ ಅವರ ಗೆಳೆಯ ವೈಶಾಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿದ್ದು, ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನಟಿ ಕೃಷಿ ತಾಪಂಡ ಅಪಾರ್ಟ್ ಮೆಂಟ್ ನಲ್ಲೇ ವೈಶಾಕ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಘಟನಾ ಸ್ಥಳದಲ್ಲಿ ಸದ್ಯ ಯಾವುದೇ ಪತ್ರ ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿಂದೆ ಉದ್ಯಮಿ ಅರವಿಂದ್ ರೆಡ್ಡಿಗೆ ಕೊರಿಯರ್ ಮೂಲಕ ಬೆದರಿಕೆ ಹಾಕಿ, ಕೋಟಿಗಟ್ಟಲೆ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ವೈಶಾಕ್ ಬಂಧಿತನಾಗಿ ಜೈಲು ಸೇರಿದ್ದ.

ಆತ್ಮಹತ್ಯೆಗೂ ಮುನ್ನ ನಟಿಗೆ ಅಂತಿಮ ಕರೆ

ವೈಶಾಕ್ ಆತ್ಮಹತ್ಯೆಗೂ ಮುನ್ನ ಕೃಷಿ ತಾಪಂಡಗೆ ಕರೆ ಮಾಡಿ ತಿಳಿಸಿದ್ದ ಎನ್ನಲಾಗಿದೆ. ಬುಧವಾರ ರಾತ್ರಿ ಕೃಷಿ ಮನೆಯಲ್ಲೇ ವೈಶಾಕ್ ತಂಗಿದ್ದ. ಆ ಸಮಯದಲ್ಲಿ ಕೃಷಿ ನಿವಾಸದಲ್ಲಿ ಇರಲಿಲ್ಲ. ಈ ವೇಳೆ ನಟಿಗೆ ಕರೆ ಮಾಡಿ ತಾನು ಸಾಯುವುದಾಗಿ ವೈಶಾಕ್ ಹೇಳಿಕೊಂಡಿದ್ದ.

ತಕ್ಷಣ ಕೃಷಿ ಈ ವಿಷಯವನ್ನು ಕುಟುಂಬಸ್ಥರಿಗೆ ತಿಳಿಸಿದ್ದರು. ಆ ಬಳಿಕ ಆತ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಪ್ರಸ್ತುತ ವೈಶಾಕ್ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆಯಾಗಿದೆ.

ಕೊರಿಯರ್ ಬೆದರಿಕೆ ಪ್ರಕರಣದ ಆರೋಪಿ

ಕಳೆದ ಫೆಬ್ರವರಿಯಲ್ಲಿ ಉದ್ಯಮಿ ಅರವಿಂದ ರೆಡ್ಡಿ ಅವರಿಗೆ ಅನಾಮಧೇಯ ಹೆಸರಿನಲ್ಲಿ ಬೆದರಿಕೆ ಪತ್ರವೊಂದು ಬಂದಿತ್ತು. ಬ್ಲೂ ಡಾರ್ಟ್ ಕೊರಿಯರ್ ಮುಖಾಂತರ ಈ ಪತ್ರವನ್ನು ಕಳುಹಿಸಲಾಗಿತ್ತು. ಪತ್ರದಲ್ಲಿ ಕೋಟಿ ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿತ್ತು. ಇತ್ತೀಚೆಗೆ ಕೃಷಿ ತಾಪಂಡ ಅವರು ಅರವಿಂದ ರೆಡ್ಡಿ ವಿರುದ್ಧ ದೂರು ನೀಡಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಶಾಕ್, ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಬರೆದಿದ್ದ ಎನ್ನಲಾಗಿದೆ.

‘ಕೃಷಿ ತಾಪಂಡ ಜೊತೆ ಇರುವ ಸಮಸ್ಯೆಯನ್ನು ನೀನು ತಕ್ಷಣ ಬಗೆಹರಿಸಿಕೊಳ್ಳಬೇಕು. ಅದರೊಂದಿಗೆ ಕ್ಷಮಾಪಣೆ ಪತ್ರ ಮತ್ತು 6 ರಿಂದ 7 ಕೋಟಿ ರೂಪಾಯಿ ಹಣವನ್ನು ಕಳುಹಿಸಬೇಕು. ಇಲ್ಲವಾದಲ್ಲಿ ನೀನು ಬೇರೆ ಬೇರೆ ರೀತಿಯ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ’ ಎಂದು ಪತ್ರದಲ್ಲಿ ಉದ್ಯಮಿಗೆ ನೇರವಾಗಿ ಬೆದರಿಕೆ ಹಾಕಲಾಗಿತ್ತು.

ಈ ಪತ್ರವನ್ನು ನೋಡಿ ಆತಂಕಗೊಂಡ ಅರವಿಂದ ರೆಡ್ಡಿ ಅವರು ಪೊಲೀಸರಿಗೆ ದೂರು ನೀಡಿದ್ದರು.

ಅರವಿಂದ ರೆಡ್ಡಿ ನೀಡಿದ ದೂರಿನ ಮೇರೆಗೆ ಎಚ್‌ಎಎಲ್ (HAL) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಯ ಪತ್ತೆಗೆ ಜಾಲ ಬೀಸಿದ್ದರು. ಈ ವೇಳೆ ವೈಶಾಕ್ ಸಿಕ್ಕಿ ಬಿದ್ದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ