ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ 
ರಾಜ್ಯ

PWD ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆಯಲ್ಲಿ 13 ಕೋಟಿ ಮೌಲ್ಯದ ಆಸ್ತಿ ಪತ್ತೆ!

ಸಚಿವ ಸತೀಶ ಜಾರಕಿಹೊಳಿ‌ ಭಾಮೈದ, ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಮನೆ ಮೇಲೆ ಇಡಿ ಅಧಿಕಾರಿಗಳು ನಡೆಸಿದ್ದ ದಾಳಿ ಅಂತ್ಯವಾಗಿದ್ದು ಸುಮಾರು 13 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.

ಬೆಂಗಳೂರು: ಸಚಿವ ಸತೀಶ ಜಾರಕಿಹೊಳಿ‌ ಭಾಮೈದ, ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ ಮನೆ ಮೇಲೆ ಇಡಿ ಅಧಿಕಾರಿಗಳು ನಡೆಸಿದ್ದ ದಾಳಿ ಅಂತ್ಯವಾಗಿದ್ದು ಸುಮಾರು 13 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಬೆಳಗಾವಿ, ಬೆಂಗಳೂರು, ಮೈಸೂರು ಸೇರಿದಂತೆ ವಿವಿಧೆಡೆ ದಾಳಿಯಲ್ಲಿ ಸಾಕಷ್ಟು ಮಹತ್ವದ ದಾಖಲೆ, ಚಿನ್ನಾಭರಣ ಪತ್ತೆಯಾಗಿದ್ದು, ಮಹತ್ವದ ದಾಖಲೆ, ಬೇನಾಮಿ ಬಾರ್ ಲೈಸೆನ್ಸ್, ಬೇನಾಮಿ ಆಸ್ತಿ ಪತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇದೀಗ ದಾಳಿಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

ಮಂಜುನಾಥ್ ಗೆ ಸೇರಿದ 13.3 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ. ನಿನ್ನೆ ಇಡಿ ಅಧಿಕಾರಿಗಳು ಮಂಜುನಾಥ್ ಅವರಿಗೆ ಸೇರಿದ ಒಟ್ಟು 14 ಕಡೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ದಾಳಿ ವೇಳೆ 5.5 ಕೋಟಿ ನಗದು ಸೇರಿದಂತೆ 7.8 ಕೋಟಿ ಮೌಲ್ಯದ ಚಿನ್ನಾಭರಣವನ್ನು ಇಡಿ ವಶಪಡಿಸಿಕೊಂಡಿದೆ. ಇದರ ಜೊತೆಗೆ 3.3 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ, ಕ್ಯಾಶ್ ಬುಕ್, ಆಸ್ತಿ ಪತ್ರಗಳು ದಾಳಿಯಲ್ಲಿ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!