ಬಿಕೆ ಹರಿಪ್ರಸಾದ್, ಪ್ರದೀಪ್ ಈಶ್ವರ್ ಸಾಂದರ್ಭಿಕ ಚಿತ್ರ 
ರಾಜ್ಯ

MLA ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ: ಹೇಯ, ಹೇಡಿತನದ ಕೃತ್ಯ- ಬಿಕೆ ಹರಿಪ್ರಸಾದ್ ಖಂಡನೆ!

ಹೊರಗಡೆ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಯತ್ನ ನಡೆಸಲಾಗಿದೆ. ಆದರೆ ಅದು ಪೊಲೀಸ್ ಅಧಿಕಾರಿ ಮೇಲೆ ಬಿದ್ದಿದೆ. ಈ ಘಟನೆಯನ್ನು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಖಂಡಿಸಿದ್ದಾರೆ.

ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಶನಿವಾರ ನಡೆದ ಕೆಂಪೇಗೌಡ ಜಯಂತಿ ಆಚರಣೆ ವೇಳೆ ಶಾಸಕ ಪ್ರದೀಪ್ ಈಶ್ವರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜೆಡಿಎಸ್ ಹಾಗೂ ಸುಧಾಕರ್ ಬೆಂಬಲಿಗರು ಬಿಟ್ಟಿಲ್ಲ. ವೇದಿಕೆ ಒಳಗೆ ಹಾಗೂ ಹೊರಗೆ ಗಲಾಟೆ ಮಾಡುವ ಮೂಲಕ ಪ್ರದೀಪ್ ಈಶ್ವರ್ ಅವರನ್ನು ಅಲ್ಲಿಂದ ಕಳುಹಿಸಿದ್ದಾರೆ.

ಹೊರಗಡೆ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಯತ್ನ ನಡೆಸಲಾಗಿದೆ. ಆದರೆ ಅದು ಪೊಲೀಸ್ ಅಧಿಕಾರಿ ಮೇಲೆ ಬಿದ್ದಿದೆ. ಈ ಘಟನೆಯನ್ನು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಖಂಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಪೋಸ್ಟ್ ಮಾಡಿದ್ದು, ಸಾರ್ವಜನಿಕವಾಗಿ ವಿರೋಧ ಪಕ್ಷದವರು ಚಪ್ಪಲಿ ಎಸೆದು ನಡೆಸಿರುವ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಹಜ. ಆದರೆ ವಾದದಿಂದ ಎದುರಿಸಲಾಗದವರು, ಪ್ರಜಾಪ್ರಭುತ್ವದ ಭಾಷೆಯಲ್ಲಿ ಉತ್ತರಿಸಲು ಸಾಧ್ಯವಾಗದವರು ಮಾತ್ರ ಇಂತಹ ಹೇಯ ಮತ್ತು ಹೇಡಿತನದ ಕೃತ್ಯಗಳಿಗೆ ಇಳಿಯುತ್ತಾರೆ ಎಂದಿದ್ದಾರೆ.

ಭಿನ್ನಮತವನ್ನು ಹಿಂಸೆ, ಬೆದರಿಕೆ ಮತ್ತು ಅವಮಾನದಿಂದ ಹತ್ತಿಕ್ಕಲು ಹೊರಟಿರುವ ರಾಜಕೀಯ ಸಂಸ್ಕೃತಿಗೆ ಕರ್ನಾಟಕದಲ್ಲಿ ಯಾವುದೇ ಸ್ಥಾನವಿಲ್ಲ. ಜನರ ತೀರ್ಪಿಗೆ ಗೌರವ ಕೊಡುವ ಪ್ರಜಾಪ್ರಭುತ್ವದಲ್ಲಿ ಇಂತಹ ದುಷ್ಕೃತ್ಯಗಳಿಗೆ ಯಾವುದೇ ಸಮರ್ಥನೆ ಇಲ್ಲ ಎಂದು ಕಿಡಿಕಾರಿದ್ದಾರೆ.

ಪ್ರದೀಪ್ ಈಶ್ವರ್ ಅವರು ಎದೆಗುಂದಬೇಕಿಲ್ಲ. ಕಾಂಗ್ರೆಸ್ ಪಕ್ಷ ನಿಮ್ಮೊಂದಿಗೆ ದೃಢವಾಗಿ ನಿಂತಿದೆ. ಸತ್ಯ, ಪ್ರಜಾಪ್ರಭುತ್ವ ಮತ್ತು ಜನರ ಪರವಾದ ಧ್ವನಿಯನ್ನು ಇಂತಹ ಕೃತ್ಯಗಳಿಂದ ಯಾರೂ ಮೌನಗೊಳಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!