ಬಸವರಾಜ ಬೊಮ್ಮಾಯಿ 
ರಾಜ್ಯ

ರಾಜ್ಯದಲ್ಲಿ ಮಳೆ ಕೊರತೆ, ಸರ್ಕಾರ ತಕ್ಷಣವೇ ಬರಗಾಲ ಘೋಷಿಸಲಿ- ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ!

ಮುಂದಿನ ಒಂದು ವಾರದಲ್ಲಿಯೂ ಮಳೆ ಬಾರದಿದ್ದರೆ ಕುಡಿಯುವ ನೀರಿನ ಸಮಸ್ಯೆಯೂ ಗಂಭೀರ ಸ್ವರೂಪ ಪಡೆಯಲಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿ: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಇನ್ನೊಂದು ವಾರದೊಳಗೆ ಸಮರ್ಪಕ ಮಳೆಯಾಗದಿದ್ದರೆ ಕರ್ನಾಟಕ ಸಂಪೂರ್ಣ ಬರಗಾಲದತ್ತ ಸಾಗುವ ಸಾಧ್ಯತೆಯಿದೆ. ರಾಜ್ಯ ಸರ್ಕಾರ ತಕ್ಷಣವೇ ಬರಗಾಲ ಘೋಷಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ರಾಜ್ಯದಲ್ಲಿ ಈವರೆಗೆ ಕೇವಲ ಶೇ.30ರಷ್ಟು ಮಾತ್ರ ಬಿತ್ತನೆಯಾಗಿದ್ದು, ಶೇ.70ರಷ್ಟು ಪ್ರದೇಶಗಳಲ್ಲಿ ಇನ್ನೂ ಬಿತ್ತನೆ ಪ್ರಾರಂಭವಾಗಿಲ್ಲ. ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಮುಂದಿನ ಒಂದು ವಾರದಲ್ಲಿಯೂ ಮಳೆ ಬಾರದಿದ್ದರೆ ಕುಡಿಯುವ ನೀರಿನ ಸಮಸ್ಯೆಯೂ ಗಂಭೀರ ಸ್ವರೂಪ ಪಡೆಯಲಿದೆ ಎಂದು ಹೇಳಿದರು.

ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕಿದ್ದು, ಎಲ್ಲ ಜಿಲ್ಲಾಧಿಕಾರಿಗಳ ಸಭೆ ನಡೆಸಿ ವಾಸ್ತವ ಸ್ಥಿತಿಯ ವರದಿ ಪಡೆಯಬೇಕು. ಬರ ಪರಿಹಾರ ಕ್ರಮಗಳನ್ನು ತುರ್ತಾಗಿ ಜಾರಿಗೊಳಿಸಬೇಕು. ಪ್ರಕೃತಿ ವಿಕೋಪ ಪರಿಹಾರ ನಿಧಿಯಲ್ಲಿ ಹಣ ಲಭ್ಯವಿದ್ದು, ಅದನ್ನು ಸಮರ್ಪಕವಾಗಿ ಬಳಕೆ ಮಾಡಿದರೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ನೆರವು ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕೃಷಿ ಸಚಿವರಿಲ್ಲದಿರುವುದು ದುರದೃಷ್ಟ: ರಾಜ್ಯದಲ್ಲಿ ಮಳೆ ಇಲ್ಲದೆ ಕೆರೆಗಳು ಹಾಗೂ ಜಲಾಶಯಗಳಲ್ಲಿನ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಸಮರ್ಪಕ ಕೃಷಿ ಸಚಿವರೇ ಇಲ್ಲದಿರುವುದು ದುರದೃಷ್ಟಕರ. ಎರಡು ಅಥವಾ ಮೂರು ಜಿಲ್ಲೆಗಳಿಗೆ ಒಬ್ಬ ಸಚಿವರನ್ನು ನೇಮಿಸಿರುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದರು.

ಎಲ್ ನೀನೋ ಪರಿಣಾಮ ಹಾಗೂ ಸಂಭವನೀಯ ಬರ ಪರಿಸ್ಥಿತಿಯ ಕುರಿತು ರಾಷ್ಟ್ರೀಯ ವರದಿಗಳು ಈಗಾಗಲೇ ಎಚ್ಚರಿಕೆ ನೀಡಿದ್ದರೂ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಕ್ಷಣ ಬರ ಪರಿಸ್ಥಿತಿ ನಿರ್ವಹಣೆಯತ್ತ ಗಮನ ಹರಿಸಬೇಕು ಎಂದು ಆಗ್ರಹಿಸಿದರು.

ರಾಜಕಾರಣವೇ ಮುಖ್ಯ: ಕರ್ನಾಟಕ, ಆಂಧ್ರ ಮತ್ತು ತೆಲಂಗಾಣ ರಾಜ್ಯದ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಮೊನ್ನೆ ಒಂದೆಡೆ ಸೇರಿದ್ದರು. ಗೆಜೆಟ್​ ನೊಟಿಫೀಕೇಷನ್​ ವಿರುದ್ಧವಾಗಿ ಸುಪ್ರೀಂಕೋರ್ಟ್​ನಲ್ಲಿ ಕೇಸ್​ ಆಗಿರುವುದರ ಕುರಿತು ಸಿಎಂ ಡಿ.ಕೆ. ಶಿವಕುಮಾರ ಚಕಾರ ಎತ್ತಲಿಲ್ಲ. ವಿಷಾಯಾಧಾರಿತ ಚರ್ಚೆಗಳು ಆಗಲಿಲ್ಲ. ಸುಪ್ರೀಂಕೋರ್ಟ್​ನಲ್ಲಿರುವ ಕೇಸ್​ ವಜಾಗೊಳಿಸುವ ಸಂಬಂಧ ಮಾತನಾಡಬಹುದಿತ್ತಲವೇ? ಡಿ.ಕೆ. ಶಿವಕುಮಾರ ಅವರಿಗೆ ರಾಜಕಾರಣವೇ ಮುಖ್ಯವಾಗಿದೆ ಹೊರತು, ಜನರ ಹಿತವಲ್ಲ ಎಂದು ಕುಟುಕಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

Rahul Gandhi ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಬ್ರೇಕ್! ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಯುರೋಪ್‌ನಲ್ಲಿ ಯುದ್ಧದ ಭೀತಿ: ಉಕ್ರೇನ್‌ನಲ್ಲಿರುವ ಭಾರತದ ಬಿಲಿಯನೇರ್‌ ಉದ್ಯಮಿಯ ಕಾರ್ಖಾನೆ ಮೇಲೆ ರಷ್ಯಾ ದಾಳಿ!

ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್

ನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'