ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ 
ರಾಜ್ಯ

ಕರ್ನಾಟಕದಲ್ಲಿ SIR: ಜೂ.30ರಿಂದ ಮನೆ ಮನೆಗೆ ಭೇಟಿ, ಪರಿಶೀಲನೆ, ಈ ದಾಖಲೆಗಳನ್ನು ಇಟ್ಟುಕೊಳ್ಳಿ...

ಈ ವೇಳೆ ಬಿಎಲ್‌ಒಗಳು ಎಸ್‌ಐಆರ್ ಅರ್ಜಿಯನ್ನು ನೀಡಲಿದ್ದು, ಮತದಾರರು ಅರ್ಜಿಯನ್ನು ಭರ್ತಿ ಮಾಡಿ ಸಹಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕಾಗಿದೆ.

ಬೆಂಗಳೂರು: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಚುನಾವಣಾಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ.

ಈ ವೇಳೆ ಬಿಎಲ್‌ಒಗಳು ಎಸ್‌ಐಆರ್ ಅರ್ಜಿಯನ್ನು ನೀಡಲಿದ್ದು, ಮತದಾರರು ಅರ್ಜಿಯನ್ನು ಭರ್ತಿ ಮಾಡಿ ಸಹಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕಾಗಿದೆ. ಮತದಾರರ ಪಟ್ಟಿಯಲ್ಲಿರುವ ಹೆಸರುಗಳ ಪರಿಶೀಲನೆ, ತಿದ್ದುಪಡಿ, ಹೊಸ ಮತದಾರರ ಹೆಸರು ಸೇರ್ಪಡೆ, ಮೃತಪಟ್ಟವರು ಹಾಗೂ ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆಯೂ ಈ ಅವಧಿಯಲ್ಲಿ ನಡೆಯಲಿದೆ.

ಚುನಾವಣಾ ಆಯೋಗದ ಸೂಚನೆಯಂತೆ, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಯನ್ನು ಸಲ್ಲಿಸುವುದು ಅತ್ಯಂತ ಮುಖ್ಯವಾಗಿದೆ. ಅರ್ಜಿ ಸಲ್ಲಿಸದಿದ್ದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಉಳಿಯದಿರುವ ಸಾಧ್ಯತೆ ಇರುವುದರಿಂದ, ಮತದಾನದ ಹಕ್ಕಿನ ಮೇಲೂ ಪರಿಣಾಮ ಬೀಳಬಹುದು.

ಪರಿಷ್ಕರಣೆ ವೇಳಾಪಟ್ಟಿ

ಜೂನ್ 30 – ಜುಲೈ 29: ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹ

ಆಗಸ್ಟ್ 5: ಕರಡು ಮತದಾರರ ಪಟ್ಟಿ ಪ್ರಕಟಣೆ

ಆಗಸ್ಟ್ 5 – ಸೆಪ್ಟೆಂಬರ್ 4: ಕರಡು ಪಟ್ಟಿಗೆ ಆಕ್ಷೇಪಣೆ ಮತ್ತು ಸಲಹೆ ಸಲ್ಲಿಕೆ

ಆಗಸ್ಟ್ 5 – ಅಕ್ಟೋಬರ್ 3: ಹಕ್ಕು ಮತ್ತು ಆಕ್ಷೇಪಣೆಗಳ ವಿಚಾರಣೆ ಹಾಗೂ ವಿಲೇವಾರಿ

ಅಕ್ಟೋಬರ್ 7: ಅಂತಿಮ ಮತದಾರರ ಪಟ್ಟಿ ಪ್ರಕಟ

ಅಗತ್ಯ ದಾಖಲೆಗಳು

-ಕುಟುಂಬದ ಸದಸ್ಯರ ಗುರುತಿನ ಚೀಟಿ

-ಮತದಾರರ ಗುರುತಿನ ಚೀಟಿ (ವೋಟರ್ ಐಡಿ)

-ಆಧಾರ್ ಕಾರ್ಡ್

-ವಿಳಾಸ ದೃಢೀಕರಣ ದಾಖಲೆ

-ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಹದ ಹಕ್ಕಿಗಳ ಪ್ರತ್ಯೇಕ ಅಪಘಾತ: ಸೌದಿ 14 ಹಾಗೂ ಫ್ರಾನ್ಸ್‌ನಲ್ಲಿ 11 ಸೇರಿ 25 ಮಂದಿ ದುರ್ಮರಣ

ಬೆಂಗಳೂರಿನ ತ್ರೀ ಲೇನ್ ಸುರಂಗ ರಸ್ತೆ ಕಾಮಗಾರಿ: ಗುದ್ದಲಿ ಪೂಜೆ ನೆರವೇರಿಸಿದ CM ಡಿ ಕೆ ಶಿವಕುಮಾರ್, ಇದರ ವೈಶಿಷ್ಟ್ಯತೆಯೇನು?-Video

12 ವರ್ಷದ ಬಾಲಕನ ಶಿರಚ್ಛೇದ, ತಲೆಬುರುಡೆ ಚರಂಡಿಗೆ ಎಸೆದ ಕೇಸ್; ಕೊಲೆ ಆರೋಪದ ಮೇಲೆ 3 ಅಪ್ರಾಪ್ತರ ಬಂಧನ

ನಿರ್ಮಾಪಕ ಸುಧನ್ ಸುಂದರಂ ಜೊತೆ ನಟಿ ಶರ್ಮಿಳಾ ಮಾಂಡ್ರೆ ವಿವಾಹ ನಿಶ್ಚಿತಾರ್ಥ, ಆಪ್ತರ ಸಮ್ಮುಖದಲ್ಲಿ ಉಂಗುರ ಬದಲಾವಣೆ

ಬಂಗಾಳ ವಿಧಾನಸಭೆಯಲ್ಲಿ ಯುಸಿಸಿ ಮಸೂದೆ ಮಂಡನೆಗೆ ಬಿಜೆಪಿ ಸರ್ಕಾರ ಸಜ್ಜು!