ಬೆಂಗಳೂರು: ಬಿಜೆಪಿ (BJP) ರಾಜ್ಯ ಘಟಕದ ವಕ್ತಾರ ಎಂ.ಜಿ ಮಹೇಶ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ. ಜೂನ್ 19ರಂದು ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಬಿಜೆಪಿ ಹೈಕಮಾಂಡ್ ಮತ್ತು ರಾಜ್ಯ ನಾಯಕರ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದ ಹಿನ್ನಲೆಯಲ್ಲಿ ಉಚ್ಛಾಟನೆ ಮಾಡಲಾಗಿದೆ.
ಅವಹೇಳನಕಾರಿ ಆರೋಪ ಹಿನ್ನೆಲೆಯಲ್ಲಿ ಎಂಜಿ ಮಹೇಶ್ ಅವರಿಗೆ ರಾಜ್ಯ ಶಿಸ್ತು ಸಮಿತಿಯು ನೋಟಿಸ್ ಜಾರಿ ಮಾಡಿ ಸ್ಪಷ್ಟೀಕರಣ ಕೇಳಿತ್ತು. ಇದೀಗ ಮಹೇಶ್ ನೀಡಿದ ಸ್ಪಷ್ಟೀಕರಣ ಸಮಂಜಸವಾಗಿಲ್ಲ ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ, 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಪಾಟೀಲ್ ತಿಳಿಸಿದ್ದಾರೆ.