ಎಂಬಿ ಪಾಟೀಲ್ 
ರಾಜ್ಯ

Cabinet Expansion: ಇನ್ನು 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ; ಸಚಿವ ಎಂಬಿ ಪಾಟೀಲ್

ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಅವರು ಜುಲೈ ಮೊದಲ ವಾರದಲ್ಲಿ ದೆಹಲಿಗೆ ತೆರಳಿ ವರಿಷ್ಠ ನಾಯಕರ ಜೊತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಗಲಕೋಟೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಕಗ್ಗಂಟ್ಟಾಗಿ ಪರಿಣಿಮಿಸಿದ್ದು, ಮುಂದಿನ 15 ದಿನಗಳ ಒಳಗಾಗಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಮಂಗಳವಾರ ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಅವರು ಜುಲೈ ಮೊದಲ ವಾರದಲ್ಲಿ ದೆಹಲಿಗೆ ತೆರಳಿ ವರಿಷ್ಠ ನಾಯಕರ ಜೊತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ಇಂದು ಬಾಗಲಕೋಟೆಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ. ಪಾಟೀಲ್ ಅವರು, ಸದ್ಯಕ್ಕೆ ನಾವು ತಾತ್ಕಾಲಿಕ ಮಾತ್ರ. ಮುಂದಿನ 15 ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದ್ದು, ಆ ಸಂದರ್ಭದಲ್ಲಿ ನಿಮ್ಮ ಜಿಲ್ಲೆಯವರಿಗೇ ಸಚಿವ ಸ್ಥಾನ ಸಿಗಲಿದೆ ಎಂದು ಭರವಸೆ ನೀಡಿದರು.

ಇದೇ ವೇಳೆ ಜಿಲ್ಲೆಗೆ ಸಚಿವ ಸ್ಥಾನದ ಪ್ರಾತಿನಿಧ್ಯ ಸಿಗದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇಷ್ಟು ದಿನಗಳ ಕಾಲ ನಿಮ್ಮ ಜಿಲ್ಲೆಯವರು ಸಚಿವ ಸಂಪುಟದಲ್ಲಿ ಇರಲಿಲ್ಲವೇ ಎಂದು ಮರುಪ್ರಶ್ನಿಸಿದರು.

ಸಂಪುಟ ವಿಸ್ತರಣೆಯ ಸಂಪೂರ್ಣ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟಿದ್ದು. ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ನನ್ನ ಕೈಯಲ್ಲಿ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಜಿಲ್ಲೆಯ ಬರ ಪರಿಸ್ಥಿತಿ ಮತ್ತು ವಿಪತ್ತು ನಿರ್ವಹಣೆ ಕುರಿತು ಮಾತನಾಡಿದ ಸಚಿವರು, ಕುಡಿಯುವ ನೀರಿನ ನಿರ್ವಹಣೆಗೆ ಹಣದ ಕೊರತೆ ಇಲ್ಲವೇ ಇಲ್ಲ. ಅಗತ್ಯ ಬಿದ್ದರೆ ಉಳಿದೆಲ್ಲ ಯೋಜನೆಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸುತ್ತೇವೆ. ಆದರೆ ಜನರಿಗೆ ಕುಡಿಯುವ ನೀರು ಒದಗಿಸುವುದು ನಮ್ಮ ಮೊದಲ ಕರ್ತವ್ಯ ಎಂದು ಕಟ್ಟುನಿಟ್ಟಾಗಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

'Digital arrest' ವಂಚನೆ ತಡೆಗೆ ಸಿಮ್ ಕಾರ್ಡ್ ವಿತರಣೆ ಬಿಗಿಗೊಳಿಸಲಿದೆ ಸರ್ಕಾರ; ಇನ್ಮುಂದೆ ಖರೀದಿಗೆ ನಿರ್ಬಂಧ, ರಿಯಲ್ ಟೈಮ್ ವೆರಿಫಿಕೇಷನ್ ಕಡ್ಡಾಯ!