ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ 
ರಾಜ್ಯ

ಬೆಂಗಳೂರಿನ ಗರುಡ ಮಾಲ್ ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಅಗ್ನಿ ಅವಘಡ; ಹೊತ್ತಿ ಉರಿದ ಕಟ್ಟಡ!

ಇಂದು ಮಧ್ಯಾಹ್ನ ರಾಯಲ್ ಹೆರಿಟೇಜ್‌ ಅಪಾರ್ಟ್‌ಮೆಂಟ್‌ನ ಮನೆಯೊಂದರಲ್ಲಿ ಅವಘಡ ಸಂಭವಿಸಿದ್ದು, ಸ್ಪೋಟದ ಸುದ್ದು ಎಂಜಿ ರಸ್ತೆ ಸುತ್ತಮುತ್ತಲ ಬಡಾವಣೆಗಳಿಗೂ ಕೇಳಿಸಿದೆ.

ಬೆಂಗಳೂರು: ಬೆಂಗಳೂರಿನ ಅಶೋಕ್ ನಗರದ ಗರುಡ ಮಾಲ್‌ ಸಮೀಪದ ಅಪಾರ್ಟ್‌ಮೆಂಟ್‌ನ ಫ್ಲಾಟ್ ವೊಂದರಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಇಡೀ ಕಟ್ಟಡವೇ ಹೊತ್ತಿ ಉರಿದಿದೆ.

ಇಂದು ಮಧ್ಯಾಹ್ನ ರಾಯಲ್ ಹೆರಿಟೇಜ್‌ ಅಪಾರ್ಟ್‌ಮೆಂಟ್‌ನ ಮನೆಯೊಂದರಲ್ಲಿ ಅವಘಡ ಸಂಭವಿಸಿದ್ದು, ಸ್ಪೋಟದ ಸುದ್ದು ಎಂಜಿ ರಸ್ತೆ ಸುತ್ತಮುತ್ತಲ ಬಡಾವಣೆಗಳಿಗೂ ಕೇಳಿಸಿದೆ. ಸದ್ಯ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.

ಬೆಂಕಿ ಕಾಣಿಸಿಕೊಂಡ ಪ್ಲಾಟ್ ನಲ್ಲಿ ಮೂರು ಸಿಲಿಂಡರ್ ಇದ್ದು, ಈ ಪೈಕಿ ಒಂದು ಸಿಲಿಂಡರ್ ಸ್ಫೋಟಗೊಂಡಿದೆ ಎನ್ನಲಾಗಿದೆ. ಮನೆಯೊಳಗೆ ಹೊಗೆ, ಬೆಂಕಿ ಕಾಣಿಸಿಕೊಂಡ ಕೂಡಲೇ ಕುಟುಂಬವು ಎಚ್ಚೆತ್ತು ತಕ್ಷಣ ಹೊರಬಂದಿದ್ದು, ಅಪಾಯದಿಂದ ಪಾರಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಮನೆಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟುಕರಕಲಾಗಿವೆ.

ಅಶೋಕ್ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!