ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಜುಲೈ 6ರವರೆಗೆ ಭಾರಿ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ IMD ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಜೋರಾಗಿದೆ. ಮಲೆನಾಡು, ಕರಾವಳಿ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದೆ.

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಜೋರಾಗಿದೆ. ಮಲೆನಾಡು, ಕರಾವಳಿ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಿದೆ.

ಜುಲೈ 6ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು IMD ಆರೆಂಜ್ ಅಲರ್ಟ್ ಘೋಷಿಸಿದೆ. ಈ ಸಂದರ್ಭದಲ್ಲಿ ರೈತರು ಕೃಷಿ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ಪ್ರವಾಸಿಗರು, ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರ, ನದಿಗಳು ಮತ್ತು ಇತರೆ ಜಲಾಶಯಗಳಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಲೋ ಮೀಟರ್​​ ವೇಗದ ಗಾಳಿಯ ಜೊತೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಜುಕೈ 1ರಂದು ಆರೆಂಜ್​​ ಅಲರ್ಟ್​​ ಘೋಷಿಸಲಾಗಿದೆ.

ಇನ್ನು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ತುಮಕೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌

ನಟ ದರ್ಶನ್‌ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್