ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಭಾರೀ ಮಳೆ: ಕರಾವಳಿಗೆ ಜುಲೈ 6ರ ವರೆಗೆ Orange ಅಲರ್ಟ್ ಘೋಷಣೆ, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ..!

ಸೋಮವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ಹಲವೆಡೆ ವಾಹನ ಸಂಚಾರ ಹಾಗೂ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಜೂನ್ 30ರಿಂದ ಜುಲೈ 6ರವರೆಗೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್ ಘೋಷಿಸಿದೆ.

ಭಾರೀ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಸೋಮವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ಹಲವೆಡೆ ವಾಹನ ಸಂಚಾರ ಹಾಗೂ ಜನಜೀವನ ಅಸ್ತವ್ಯಸ್ತಗೊಂಡಿದೆ.

ಐಎಂಡಿ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಾರ್ವಜನಿಕರು ಅಗತ್ಯವಿಲ್ಲದೆ ಮನೆಯಿಂದ ಹೊರಬರದಂತೆ ಮನವಿ ಮಾಡಿದೆ. ವಿಶೇಷವಾಗಿ ಮಕ್ಕಳು, ಕಾರ್ಮಿಕರು ಹಾಗೂ ಹೊರಾಂಗಣದಲ್ಲಿ ಕೆಲಸ ಮಾಡುವವರು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದೆ.

ಗುಡುಗು-ಮಿಂಚು ಹಾಗೂ ಭಾರೀ ಮಳೆಯ ಸಮಯದಲ್ಲಿ ರೈತರು ಕೃಷಿ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಸಲಹೆ ನೀಡಲಾಗಿದೆ.

ಅಲ್ಲದೆ, ಪ್ರವಾಸಿಗರು, ಮೀನುಗಾರರು ಹಾಗೂ ಸಾರ್ವಜನಿಕರು ನದಿಗಳು, ಕೆರೆಗಳು ಮತ್ತು ಇತರೆ ಜಲಾಶಯಗಳಿಗೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

ನಿರಂತರ ಮಳೆಯಿಂದ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಅಪಾಯವೂ ಹೆಚ್ಚಿರುವುದರಿಂದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ-ಅಮೆರಿಕ ಬಾಂಧವ್ಯ ಮತ್ತಷ್ಟು ಗಟ್ಟಿ: ಪ್ರಧಾನಿ ಮೋದಿಗೆ ಮತ್ತೆ ಅಮೆರಿಕ ಆಹ್ವಾನ, ವ್ಯಾಪಾರ ಒಪ್ಪಂದ ಅಂತಿಮ ಹಂತದಲ್ಲಿ..!

"ಭಾರತದ ಜಲ ಬಾಂಬ್‌ಗೆ ಪಾಕ್ ನಡುಕ": ನಮ್ಮ ಪಾಲಿನ ನೀರು ಮುಟ್ಟಿದರೆ ಆ ಕೈಗಳನ್ನೇ ಕತ್ತರಿಸುತ್ತೇವೆ- ಶತ್ರು ರಾಷ್ಟ್ರದಿಂದ ಮತ್ತೆ ಗೊಡ್ಡು ಬೆದರಿಕೆ..!

JDS ನಲ್ಲಿ ಇರೋದೆ 18 ಶಾಸಕರು, ಅವರಿಗೆ 70-80 ಕ್ಷೇತ್ರ ಬೇಕಂತೆ! ಸ್ವರೂಪ್ ರಾಜಕೀಯಕ್ಕೆ ಹೊಸಬ- ಪ್ರತಿದಿನ 'ಲಾಟರಿ' ಹೊಡೆಯಲ್ಲ; ಪ್ರೀತಂಗೌಡ

BJP vs BJP: ಮುತ್ತಪ್ಪ ರೈ ಕೈಕೆಳಗೆ ಲೂಟಿ ಹೊಡೆಯುತ್ತಿದ್ದ ವ್ಯಕ್ತಿಗೆ ದುಡ್ಡಿನ ಅಮಲು; ವಿಶ್ವನಾಥ್ ವಿರುದ್ಧ ಡಿವಿಎಸ್ ವಾಗ್ದಾಳಿ

ಡೀಸೆಲ್ ಖರೀದಿಗೆ ಇನ್ನು ಮಿತಿ ಇಲ್ಲ: ಜು.1ರಿಂದ ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಮುಕ್ತ ಮಾರಾಟ..!