ಅಲಿಪುರದಲ್ಲಿ ಪ್ರತಿಭಟನೆ 
ರಾಜ್ಯ

Ali Khamenei Death: ಖಮೇನಿಗೂ ಚಿಕ್ಕಬಳ್ಳಾಪುರಕ್ಕೂ ಇರುವ ನಂಟೇನು? ಮಿನಿ ಇರಾನ್ ಅಲಿಪುರದಲ್ಲಿ ಭಾರೀ ಪ್ರತಿಭಟನೆ, ಶೋಕಾಚರಣೆ!

ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಬಾಂಬ್ ದಾಳಿ ನಡೆಸಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಮಾಡಿದೆ. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಅಲಿಪುರ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.

ಚಿಕ್ಕಬಳ್ಳಾಪುರ: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಬಾಂಬ್ ದಾಳಿ ನಡೆಸಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಮಾಡಿದೆ. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಅಲಿಪುರ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಶೋಕಾಚರಣೆ ನಡೆಸಿದರು. ಅಲಿಪುರವನ್ನು 'ಮಿನಿ ಇರಾನ್' ಎಂದೇ ಕರೆಯಲಾಗುತ್ತದೆ.

ಅದಕ್ಕೆ ಕಾರಣ, 1986ರಲ್ಲಿ ಅಯತೊಲ್ಲಾ ಅಲಿ ಖಮೇನಿ ಈ ಗ್ರಾಮಕ್ಕೆ ಬಂದಿದ್ದರು. ಈ ಗ್ರಾಮದಲ್ಲಿ ಅತೀ ಹೆಚ್ಚು ಶಿಯಾ ಮುಸ್ಲಿಮರಿದ್ದಾರೆ. ಅಲಿಪುರದ ಸುಮಾರು 20 ಸಾವಿರ ಜನರು ಖಮೇನಿ ಅವರನ್ನು ಧರ್ಮಗುರುವೆಂದು ಗೌರವಿಸುತ್ತಾರೆ. ಹೀಗಾಗಿ ಮಸೀದಿಯಲ್ಲಿ ಅವರು ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ, ಗ್ರಾಮಸ್ಥರು ಬಿಕ್ಕಿ ಬಿಕ್ಕಿ ಅತ್ತ ದೃಶ್ಯಗಳು ಕಂಡುಬಂದವು. ಅಯತೊಲ್ಲಾ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಮುದಾಯದವರು ಪ್ರಾರ್ಥಿಸುತ್ತಿದ್ದಾರೆ.

ಅಲಿಪುರ ಗ್ರಾಮದಲ್ಲಿ ಶಿಯಾ ಸಮುದಾಯದವರು ಸಾವಿರಾರೂ ಸಂಖ್ಯೆಯಲ್ಲಿ ಸೇರಿ ಬೃಹತ್ ಶೋಕಾಚರಣೆ ಮೆರವಣಿಗೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!

ಪಂಜಾಬ್: ತಪ್ಪಿದ ಭಾರಿ ಅನಾಹುತ; ಉಗ್ರ ದಾಳಿ ಸಂಚು ವಿಫಲ, 690 ಗ್ರಾಂ IED ಪೊಲೀಸ್ ವಶಕ್ಕೆ

SIR ಪ್ರಕ್ರಿಯೆ ಯಶಸ್ಸು: ಬಿಹಾರ ಚುನಾವಣೆ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಮತ್ತು ಜಪಾನ್‌ಗಳನ್ನು ಮೀರಿಸಿದೆ: CEC ಜ್ಞಾನೇಶ್ ಕುಮಾರ್

ಭಾರತದ ಹೊಸ ಶಕ್ತಿ ಪ್ರದರ್ಶನ: ಜೆಟ್ ಚಾಲಿತ ಸ್ವದೇಶಿ 'ದಿವ್ಯಾಸ್ತ್ರ Mk3' ಮೊದಲ ಪರೀಕ್ಷೆ ಯಶಸ್ವಿ! Video